ಯುಜಿಸಿಇಟಿ-2024: ಅಭ್ಯರ್ಥಿಗಳ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ

ದೇಶಾದ್ಯಂತ ನೀಟ್ ಪರೀಕ್ಷೆಯ ವಿವಾದ ಭಾರೀ ಸದ್ದು ಮಾಡ್ತಿದೆ. ಎಕ್ಸಾಂ ಅಕ್ರಮ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಕೇಂದ್ರ ಸರ್ಕಾರ ಹಾಗೂ ಎನ್ಟಿಎ ವಿರುದ್ಧ ಸುಪ್ರೀಂ ಕೋರ್ಟ್ ಕೂಡ ಚಾಟಿ ಬೀಸಿದ್ದು, ಇತ್ತ ರಾಜ್ಯದಲ್ಲಿ ಸಿಇಟಿ ಕೌನ್ಸಲಿಂಗ್ ಮತಷ್ಟು ವಿಳಂಬ ಆತಂಕ ಹಿನ್ನಲೆ ಕೆಇಎ ಜೂನ್ 25ರಿಂದ ಯುಜಿಸಿಇಟಿ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಿದೆ.

ಯುಜಿಸಿಇಟಿ-2024: ಅಭ್ಯರ್ಥಿಗಳ ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ಆಯೇಷಾ ಬಾನು

Updated on: Jun 26, 2024 | 9:01 AM

ಬೆಂಗಳೂರು, ಜೂನ್.26: ಯುಜಿಸಿಇಟಿ (UGCET) ದಾಖಲೆಗಳ ಆಫ್ ಲೈನ್ ಪರಿಶೀಲನೆ ಆರಂಭ ಮಾಡಲಾಗಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ & ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, ಬಿ.ಎಸ್ಸಿ ಆನರ್ಸ್ ಕೃಷಿ, ಬಿ.ಎಸ್ಸಿ ಆನರ್ಸ್ ರೇಷ್ಮೆ ಕೃಷಿ ಮುಂತಾದವು, ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಜೂನ್ 25ರಿಂದ ಜೂನ್ 29ರವರೆಗೆ ದಾಖಲೆಗಳ ಆಫ್ ಲೈನ್ ಪರಿಶೀಲನೆ ನಡೆಯಲಿದೆ.

ಯುಜಿಸಿಇಟಿ-2024ರ ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ. ಸಿ. ಡಿ, ಐ, ಜೆ. ಕೆ. ಎಲ್. ಎಂ. ಎನ್, ಜೆಡ್- ಈ ಕ್ಲಾಸ್ ಗಳನ್ನು ಕ್ಷೇಮ್ ಮಾಡಿರುವ ಹಾಗೂ ರಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25ರಿಂದ 29 ರವರೆಗೆ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಕೆಇಎ ಸೂಚಿಸಿದೆ. ಇನ್ನು ವೈ ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಅಂತಾ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳ ರಾಂಕ್ ಆಧರಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಿದ್ದು ಈಗಾಗಲೇ ಈ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಗ್ಯಾರಂಟಿ ಯೋಜನೆ ಕಚೇರಿ! ಸಾರ್ವಜನಿಕರಿಂದ ಅಸಮಾಧಾನ

ಇನ್ನು ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಇ-ಮಾಹಿತಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ರ್ಯಾಂಕ್ ಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕಿದೆ ಅಂತಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ಪ್ರಸನ್ನ ಹೇಳಿದ್ದಾರೆ.

ಒಟ್ನಲ್ಲಿ ನೀಟ್ ಪರೀಕ್ಷೆಯ ಗೊಂದಲ ಕ್ಲಿಯರ್ ಬಳಿಕ ಎನ್ಟಿಎನಿಂದ ನೀಟ್ ಮೆರಿಟ್ ಲಿಸ್ಟ್ ಸಿಗುತ್ತಿದ್ದಂತೆ ಕೆಇಎ ಸಿಇಟಿ ಕೌನ್ಸಲಿಂಗ್ ಆರಂಭ ಮಾಡಲು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ