ಬೆಂಗಳೂರು ಟ್ರಾಫಿಕ್ ಪರಿಹಾರಕ್ಕೆ ಸುರಂಗ ಮಾರ್ಗ: ಎಲ್ಲೆಲ್ಲಿ ಹಾದುಗೋಗಲಿದೆ? ಎಂಟ್ರಿ – ಎಕ್ಸಿಟ್ ವಿವರ ಇಲ್ಲಿದೆ ನೋಡಿ

Bengaluru Underground Tunnel Road; ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ ನೂತನ ಸುರಂಗ ಮಾರ್ಗದ ಯೋಜನೆ ಹಾಕಿಕೊಂಡಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಈ ಸುರಂಗ ಮಾರ್ಗ ಎಲ್ಲಿಂದ ಎಲ್ಲಿಯ ವರೆಗೆ ಇರಲಿದೆ? ಎಲ್ಲೆಲ್ಲಿ ಎಂಟ್ರಿ ಹಾಗೂ ಎಕ್ಸಿಟ್ ಪಾಯಿಂಟ್ ಇರಲಿವೆ? ಯಾವಾಗ ಪೂರ್ಣಗೊಳ್ಳಲಿದೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೆಂಗಳೂರು ಟ್ರಾಫಿಕ್ ಪರಿಹಾರಕ್ಕೆ ಸುರಂಗ ಮಾರ್ಗ: ಎಲ್ಲೆಲ್ಲಿ ಹಾದುಗೋಗಲಿದೆ? ಎಂಟ್ರಿ - ಎಕ್ಸಿಟ್ ವಿವರ ಇಲ್ಲಿದೆ ನೋಡಿ
ಬೆಂಗಳೂರು ಟ್ರಾಫಿಕ್ ಪರಿಹಾರಕ್ಕೆ ಸುರಂಗ ಮಾರ್ಗ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jun 20, 2024 | 7:17 AM

ಬೆಂಗಳೂರು, ಜೂನ್ 20: ಭಾರತದ ಸಿಲಿಕಾನ್ ವ್ಯಾಲಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು (Bengaluru) ನಗರದಲ್ಲಿ ಟ್ರಾಫಿಕ್ ಜಾಮ್ (Traffic Jam) ಸಮಸ್ಯೆ ಸದಾ ಇದ್ದಿದ್ದೆ. ಮಳೆಗಾಲ ಬಂತೆಂದರೆ ಸಾಕು, ಮಳೆ ಬಂದು ಬಿಟ್ಟ ಕೂಡಲೇ ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುತ್ತದೆ. ಅದೇ ರೀತಿ ಪೀಕ್ ಅವರ್​​ಗಳಲ್ಲಿಯೂ ನಗರ ಸಂಚಾರಕ್ಕೆ ಹರಸಾಹಸ ಪಡಬೇಕು. ಇದನ್ನು ಬಗೆಹರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 18 ಕಿಲೋಮೀಟರ್ ಉದ್ದದ ಸುರಂಗ ಮಾರ್ಗದ ನಿರ್ಮಾಣಕ್ಕೆ ಮುಂದಾಗಿದೆ. ಸುಮಾರು 8,100 ಕೋಟಿ ರೂಪಾಯಿ ವೆಚ್ಚದಲ್ಲಿ, ಪ್ರತಿ ಕಿಲೋಮೀಟರ್‌ಗೆ ಅಂದಾಜು 450 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ಸುರಂಗ ಮಾರ್ಗ ನಿರ್ಮಾಣಕ್ಕೆ ಬಿಬಿಎಂಪಿ ಯೋಜನೆ ಹಮ್ಮಿಕೊಂಡಿದ್ದು, 2025 ರ ಜನವರಿ 1 ರೊಳಗೆ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದೆ.

ಎಲ್ಲಿಂದ ಎಲ್ಲಿಗೆ ಸುರಂಗ ಮಾರ್ಗ?

ಸುರಂಗ ಮಾರ್ಗವು ಉತ್ತರ ಬೆಂಗಳೂರಿನ ಹೆಬ್ಬಾಳದಲ್ಲಿರುವ ಎಸ್ಟೀಮ್ ಮಾಲ್ ಅನ್ನು ನಗರದ ದಕ್ಷಿಣ ಭಾಗದಲ್ಲಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನೊಂದಿಗೆ ಸಂಪರ್ಕಿಸುತ್ತದೆ. ಇದಲ್ಲದೆ, ಬಿಬಿಎಂಪಿಯು ಇನ್ನೂ ಐದು ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಯೋಜಿಸಿದೆ, ಪ್ರಯಾಣಿಕರಿಗೆ ತಡೆರಹಿತ ಪ್ರಯಾಣದ ಅನುಭವವನ್ನು ಇದು ನೀಡಲಿದೆ.

ಸದ್ಯ ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ ಪ್ರಯಾಣಿಸಲು ಒಂದು ಗಂಟೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದರೆ ಹೊಸ ಸುರಂಗವು ಇದನ್ನು ಕೇವಲ 20-25 ನಿಮಿಷಗಳಿಗೆ ಕಡಿಮೆ ಮಾಡಲಿದೆ ಎನ್ನಲಾಗಿದೆ.

ಎಲ್ಲೆಲ್ಲಿ ಎಂಟ್ರಿ, ಎಕ್ಸಿಟ್?

ಸುರಂಗ ಮಾರ್ಗದ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಕೇಂದ್ರ ಸಿಲ್ಕ್ ಬೋರ್ಡ್, ಲಾಲ್‌ಬಾಗ್, ಬೆಂಗಳೂರು ಗಾಲ್ಫ್ ಕ್ಲಬ್, ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಕ್ವಾರ್ಟರ್ಸ್ ಮತ್ತು ಹೆಬ್ಬಾಳದ ಎಸ್ಟೀಮ್ ಮಾಲ್ ಪಕ್ಕದಲ್ಲಿರುವ ಖಾಲಿ ಸರ್ಕಾರಿ ಭೂಮಿ ಸೇರಿವೆ.

ಇದನ್ನೂ ಓದಿ: Double Decker Flyover: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ: ಏನಿದರ ವಿಶೇಷ? ಇಲ್ಲಿದೆ ನೋಡಿ

18 ಕಿಲೋಮೀಟರ್ ಉದ್ದದ ಸುರಂಗ ಮಾರ್ಗದ ಎತ್ತರವು 10 ಮೀಟರ್ ಆಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಸುರಂಗದ ನಿರ್ವಹಣೆಗೆ ಬಳಕೆದಾರ ಶುಲ್ಕವನ್ನು ವಸೂಲಿ ಮಾಡಲಾಗುತ್ತದೆ. ಸದ್ಯ ಬಳಕೆದಾರರ ಶುಲ್ಕದ ಮೊತ್ತ ನಿರ್ಧಾರವಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ