ದೇಶದ ಜಿಡಿಪಿಗೆ ಶೇ 2.5 ಕೊಡುಗೆ ಗಣಿಗಾರಿಕೆಯಿಂದ ನೀಡಲಿದ್ದೇವೆ -ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ ಘೋಷಣೆ

Pralhad Joshi: ದೇಶದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ಕಳೆದ ವರ್ಷಕ್ಕೆ ಹೊಲಿಕೆ ಮಾಡಿದ್ರೆ ಈ ವರ್ಷ ವಿದ್ಯುತ್ ಬೇಡಿಕೆ 25 % ಹೆಚ್ಚು ಇದೆ. 2040ರ ವೇಳೆಗೆ ದೇಶದಲ್ಲಿ ಇಂಧನ ಬೇಡಿಕೆ ಡಬಲ್ ಆಗಲಿದೆ. ವಿದ್ಯುತ್ ಉತ್ಪಾದನೆ ಮಾಡುವುದು ಅನಿವಾರ್ಯವಾಗಿದೆ - ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ

ದೇಶದ ಜಿಡಿಪಿಗೆ ಶೇ 2.5 ಕೊಡುಗೆ ಗಣಿಗಾರಿಕೆಯಿಂದ ನೀಡಲಿದ್ದೇವೆ -ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ ಘೋಷಣೆ
ದೇಶದ ಜಿಡಿಪಿಗೆ ಶೇ 2.5 ಕೊಡುಗೆ ಗಣಿಗಾರಿಕೆಯಿಂದ ನೀಡಲಿದ್ದೇವೆ -ಗಣಿ ಹೂಡಿಕೆ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 03, 2022 | 2:02 PM

ಬೆಂಗಳೂರು:  ವಾಣಿಜ್ಯ ಕಲ್ಲಿದ್ದಲು (Coal) ಬ್ಲಾಕ್ ಗಳ ಹರಾಜು ಹಾಗೂ ಗಣಿಗಾರಿಕೆಯಲ್ಲಿ ಹೂಡಿಕೆ ಅವಕಾಶಗಳ ಹಿನ್ನೆಲೆಯಲ್ಲಿ ಬೆಂಗಳೂರಿ‌ನಲ್ಲಿ ನಡೆಯುತ್ತಿರುವ ಹೂಡಿಕೆದಾರರ ಸಮಾವೇಶವನ್ನ (Investors Conclave on Commercial Coal Blocks at Bangalore) ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಉದ್ಘಾಟಿಸಿದರು. ಈ ವೇಳೆ ಹೂಡಿಕೆದಾರರನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ದೇಶದ ಜಿಡಿಪಿಗೆ ಗಣಿಗಾರಿಕೆಯಿಂದಲೇ ಶೇ 2.5 ರಷ್ಟು ಕೊಡುಗೆ ನೀಡಲಿದ್ದೇವೆ ಎಂದು ಹೇಳಿದರು.

ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಸಂದರ್ಭದಲ್ಲಿ ಕಲ್ಲಿದ್ದಲು ಸೇರಿದಂತೆ ಗಣಿಗಾರಿಕೆಯಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. 2047ರ ವೇಳೆಗೆ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದ್ದು, ಹೇರಳವಾದ ವಿದ್ಯುತ್ ಉತ್ಪಾದನೆ ಅಗತ್ಯವಾಗಿದೆ. ಸಹಜವಾಗಿ ಕಲ್ಲಿದ್ದಲು ಬೇಡಿಕೆ ಕೂಡ ಹೆಚ್ಚಲಿದ್ದು, ಹೂಡಿಕೆದಾರಿಗೆ ಕಲ್ಲಿದ್ದಲು ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶದ ಇಂಧನ ಹಾಗೂ ಖನಿಜ ಸಂಪತ್ತಿನ ಸುರಕ್ಷತೆಯನ್ನು ಕಾಪಾಡಲು ನಮ್ಮಲ್ಲಿರುವ ಕಲ್ಲಿದ್ದಲು ಹಾಗೂ ಖನಿಜ ಸಂಪನ್ಮೂಲದ ಸುಸ್ಥಿರ ಉಪಯೋಗ ಅವಶ್ಯಕವಾಗಿದೆ. ಈ ದೃಷ್ಟಿಯಿಂದ ಈ ಕ್ಷೇತ್ರದಲ್ಲಿ ಹೂಡಿಕೆಯ ಅವಶ್ಯಕತೆ ಇದ್ದು, ಆಸಕ್ತ ಹೂಡಿಕೆದಾರರೊಂದಿಗೆ ನಾವು ನಿರಂತರ ಚರ್ಚೆಯಲ್ಲಿ ತೊಡಗುವ ಉದ್ದೇಶದಿಂದಲೇ ಈ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇದೇ ವೇಳೆ ಹೇಳಿದರು.

ಪ್ರಸ್ತುತ ನಡೆಯುತ್ತಿರುವ ಕಲ್ಲಿದ್ದಲು ಹಾಗೂ ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ ನೀಡಲಾಗಿದೆ‌. ಸದ್ಯ ರಾಜ್ಯದಲ್ಲಿ ಏಳು ಕಲ್ಲಿದ್ದಲು ಬ್ಲಾಕ್ ಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಆರನೇ ಕಂತಿನ 141 ಕಲ್ಲಿದ್ದಲು ಬ್ಲಾಕ್ ಗಳು ಕೂಡ ಹರಾಜಿಗೆ ಲಭ್ಯವಿವೆ. ಇಂದಿನ ಗಣಿ ಮತ್ತು ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ಪ್ರಮುಖ ಗಣ್ಯರು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಹೂಡಿಕೆದಾರರು ಉಪಸ್ಥಿತರಿದ್ದರು.

2040ರ ವೇಳೆಗೆ ದೇಶದಲ್ಲಿ ಇಂಧನ ಬೇಡಿಕೆ ಡಬಲ್ ಆಗಲಿದೆ, ಸುಸ್ಥಿರ ವಿದ್ಯುತ್ ಉತ್ಪಾದನೆ ಮಾಡುವುದು ಅನಿವಾರ್ಯ -ಸಚಿವ ಪ್ರಹ್ಲಾದ್ ಜೋಶಿ ಕರೆ

ದೇಶದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ಕಳೆದ ವರ್ಷಕ್ಕೆ ಹೊಲಿಕೆ ಮಾಡಿದ್ರೆ ಈ ವರ್ಷ ವಿದ್ಯುತ್ ಬೇಡಿಕೆ 25 % ಹೆಚ್ಚು ಇದೆ. 2040ರ ವೇಳೆಗೆ ದೇಶದಲ್ಲಿ ಇಂಧನ ಬೇಡಿಕೆ ಡಬಲ್ ಆಗಲಿದೆ. ವಿದ್ಯುತ್ ಉತ್ಪಾದನೆ ಮಾಡುವುದು ಅನಿವಾರ್ಯವಾಗಿದೆ. ಒಂದು ಕಡೆ ನವೀಕರಿಸಬಹುದಾದ ಇಂಧನ ಸಂಗ್ರಹಿಸಿದರೂ ಪರ್ಯಾಯ ಇಂಧನ ಸಂಗ್ರಹದ ಬಗ್ಗೆಯೂ ಗಮನಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಗಣಿಗಾರಿಕೆ ನೀತಿಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ ಎಂದು ಬೆಂಗಳೂರಿನಲ್ಲಿ ನಡೆದಿರುವ ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ವಿದ್ಯುತ್ ಉತ್ಪಾದನಾ ವೇಳೆ ಮಾಲಿನ್ಯ ಸಹ ಆಗುತ್ತೆ, ಆಗ ಗಿಡಗಳನ್ನ ಹೆಚ್ಚು ಬೆಳಸುವುದು ಹಾಗೂ ಗಣಿಗಾರಿಕೆಯಿಂದ ಬರುವ ತ್ಯಾಜ ನೀರನ್ನು ಮನುಷ್ಯರಿಗೆ ಮತ್ತು ನೀರಾವರಿಗೆ ಬಳಸುವ ಮೂಲಕ ಸುಸ್ಥಿರತೆ ಕಾಪಡಿಕೊಳ್ಳವುದು. ಎಲ್ಲಾ ಕ್ರಮಗಳನ್ನ ಕೈಗೊಳ್ಳುವ ಮೂಲಕ ಕಲ್ಲಿದ್ದಲು ಉತ್ಪಾದನೆ ಮಾಡಬೇಕು, ಹಾಗೇ ಉಪಯೋಗ ಮಾಡಿಕೊಳ್ಳಬೇಕು. ಇದರಿಂದ ಹೆಚ್ಚು ಮಾಲಿನ್ಯವಾಗಬಾರದು ಎಂಬ ತಂತ್ರಜ್ಞಾನದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ.

ಈಗಾಗಲೇ ಇಡಿ ದೇಶದಲ್ಲಿ 67 ಗಣಿ ಕಂಪನಿಗಳಿಗೆ ಹರಾಜು ಮಾಡಲಾಗಿದೆ. ಕಳೆದ ಒಂದು ವರ್ಷದಲ್ಲಿ 115 ಬ್ಲಾಕ್ಸ್ ಗಳು ಹರಾಜಾಗಿವೆ‌‌‌‌. ಒಂದು ವರ್ಷದಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ‌‌. ಭೂ ಗರ್ಭದಲ್ಲಿರುವ ಖನಿಜ ಸಂಪತ್ತು ಸಮರ್ಪಕ ಬಳಕೆಗೆ ಆದ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಅತ್ಮನಿರ್ಭರ ಭಾರತದಲ್ಲಿ ಹೂಡಿಕೆಯಾಗಬೇಕು. ಮುಂದಿನ ಪೀಳಿಗೆಗೆ ಆರ್ಥಿಕವಾಗಿ ತೊಂದರೆಯಾಗದಂತೆ ಬಳಕೆ ಮಾಡಲಾಗುವುದು ಎಂದು ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್​ನಲ್ಲಿ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಹಾಲಪ್ಪ ಆಚಾರ್ ಉಪಸ್ಥಿತರಿದ್ದಾರೆ. ವಾಣಿಜ್ಯ ಗಣಿ ಹರಾಜು ಮತ್ತು ದೇಶದ ಗಣಿಗಾರಿಕೆ ವಲಯದಲ್ಲಿನ ನಾನಾ ಅವಕಾಶಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯುತ್ತಿದೆ. ಹಾಗೂ ದೇಶದ ಅನೇಕ ಗಣಿ ಹೂಡಿಕೆದಾರರು ಸಮಾವೇಶದಲ್ಲಿ ಭಾಗಿಯಾಗಿದ್ದು ಗಣಿಗಾರಿಕೆ ಕ್ಷೇತ್ರದ ಸಾಮರ್ಥ್ಯ ಬಗ್ಗೆ ಮಾಹಿತಿ ವಿನಿಮಯವಾಗುತ್ತಿದೆ.

ಹೂಡಿಕೆದಾರರ ಶೃಂಗಸಭೆ ಎರಡು ದಿನಗಳ ಕಾಲ ನಡೆಯುತ್ತಿದ್ದು ಗುರುವಾರ ಮುಂಬೈನಲ್ಲಿ ನಡೆದ ಸಮಾವೇಶ ಯಶಸ್ವಿಯಾಗಿದೆ. ಸದ್ಯ ಶನಿವಾರ (ಇಂದು) ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಆಸಕ್ತ ಹೂಡಿಕೆದಾರರು ಭಾಗವಹಿಸಲು ಅವಕಾಶ ನೀಡಲಾಗಿದೆ. ಈ ಸಮಾವೇಶವು ದೇಶದಲ್ಲಿ ಗಣಿಗಾರಿಕೆ ಕ್ಷೇತ್ರದ ಸಾಮರ್ಥ್ಯ ಅರಿಯಲು ನೆರವಾಗುತ್ತದೆ.

ಉದ್ಯಮ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Sat, 3 December 22