Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರೇ ನೀವು ಪಿಎಂ, ಸಿಎಂ ಆಗಿ ಏನು ಮಾಡಿಲ್ಲ; ನಮ್ಮ ಸರ್ಕಾರ ಏನು ಮಾಡಿದೆ ಎಂದು ಯುವ ಕಾರ್ಯಕರ್ತರು ನಿಮಗೆ ಹೇಳುತ್ತಾರೆ: ಅಮಿತ್ ಶಾ

ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ ನೋಡಿ ಜನಕ್ಕೆ ಸಾಕಾಗಿದೆ'' ಮೋದಿ ಅಭಿವೃದ್ಧಿ ನೋಡಿ ಕರ್ನಾಟಕ ಜನ ಮತ ಹಾಕುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ದೇವೇಗೌಡರೇ ನೀವು ಪಿಎಂ, ಸಿಎಂ ಆಗಿ ಏನು ಮಾಡಿಲ್ಲ; ನಮ್ಮ ಸರ್ಕಾರ ಏನು ಮಾಡಿದೆ ಎಂದು  ಯುವ ಕಾರ್ಯಕರ್ತರು ನಿಮಗೆ ಹೇಳುತ್ತಾರೆ: ಅಮಿತ್ ಶಾ
ಕೇಂದ್ರ ಸಚಿವ ಅಮಿತ್ ಶಾ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 31, 2022 | 5:23 PM

ಬೆಂಗಳೂರು: ದೇವೇಗೌಡರೇ (HD Devegowda), ನೀವು ಪ್ರಧಾನಿ, ಮುಖ್ಯಮಂತ್ರಿಯಾಗಿ ಏನು ಮಾಡಿಲ್ಲ. ನಮ್ಮ ಡಬಲ್​ ಇಂಜಿನ್​ ಸರ್ಕಾರ ಏನು ಮಾಡಿದೆ ಎಂದು ನಮ್ಮ ಯುವ ಮೋರ್ಚಾ ಕಾರ್ಯಕರ್ತರು ನಿಮಗೆ ಹೇಳುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು ”ಸಿದ್ದರಾಮಯ್ಯ, ಕುಮಾರಸ್ವಾಮಿ ನೋಡಿ ಜನಕ್ಕೆ ಸಾಕಾಗಿದೆ” ಮೋದಿ ಅಭಿವೃದ್ಧಿ ನೋಡಿ ಕರ್ನಾಟಕ ಜನ ಮತ ಹಾಕುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಯೋಜನೆ ನೀಡಿದ್ದಾರೆ ಎಂದು ನುಡಿದರು.

ಬೆಂಗಳೂರಿನ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಪರ್ಯಾಯ ಕ್ರಮ

ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದು. ಮೆಟ್ರೋ ಸಂಚಾರ ಮಾರ್ಗ ಮತ್ತಷ್ಟು ವಿಸ್ತರಣೆ ಮಾಡುತ್ತೇವೆ. 3 ಸಾವಿರ ಕಿ.ಮೀ ಉದ್ದದ ರಾಜಮಾರ್ಗ ನಿರ್ಮಾಣ ಮಾಡಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ.

ಇದನ್ನೂ ಓದಿ: ನಮ್ಮದು ಭಾರತ ಮಾತಾಕೀ ಜೈ, ಅವರದು ಸೋನಿಯಾ ಮಾತಾಕೀ ಜೈ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಸ್ಥಾನ ಗೆಲ್ಲುವ ಸಂಕಲ್ಪ

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಸ್ಥಾನ ಗೆಲ್ಲುವ ಸಂಕಲ್ಪ ಇದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಜೆಪಿಯ ಹೆಬ್ಬಾಗಿಲು. ಗುಜರಾತ್, ಉತ್ತರಾಖಂಡ್, ಮಣಿಪುರ, ಉತ್ತರಪ್ರದೇಶ ಹಾಗೂ ಗೋವಾದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಯಶಸ್ವಿಯಾಗಿದ್ದೇವೆ. ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ. 2023ರ ಚುನಾವಣೆಯಲ್ಲಿ ಗೆದ್ದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ 6 ತಿಂಗಳು ಕಾರ್ಯಕರ್ತರು ಪಕ್ಷವನ್ನು ಬಲಪಡಿಸಿ. ಈ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ. ಕರ್ನಾಟಕದ ಪ್ರತಿ ಬೂತ್​ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ. ಚೀನಾದಲ್ಲಿ ಮಹಾಮಾರಿ ಕೊವಿಡ್​ ಈಗಲೂ ಹರಡುತ್ತಿದೆ. ಭಾರತದಲ್ಲಿ ಮೋದಿ ಸರ್ಕಾರ ಎಲ್ಲರಿಗೂ ಲಸಿಕೆ ನೀಡಿದೆ. ದೇಶದ 130 ಕೋಟಿ ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ ಎಂದರು.

ಇದನ್ನೂ ಓದಿ:  ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಪಿಎಫ್​ಐ ಸಂಘಟನೆಯನ್ನು ಬ್ಯಾನ್​ ಮಾಡಿದ್ದು ಮೋದಿ ಸರ್ಕಾರ. ಆದರೆ ಕಾಂಗ್ರೆಸ್​​ ಸರ್ಕಾರ ಅವರ ಮೇಲಿನ ಕೇಸ್ ಹಿಂಪಡೆಯಿತು. ನಾನು ಕರ್ನಾಟಕದ ಜನರ ಮೂಡ್ ಗಮನಿಸಿದ್ದೇನೆ. ನಮ್ಮನ್ನು ಸ್ವಾಗತಿಸಲು ಜನರು ತಯಾರಾಗಿದ್ದಾರೆ. ನರೇಂದ್ರ ಮೋದಿ ನಮ್ಮ ನೇತೃತ್ವ ವಹಿಸುತ್ತಾರೆ. ಇಂದಿರಾ ಗಾಂಧಿ ಬಡತನ ನಿರ್ಮೂಲನೆಗೆ ಸೂತ್ರ ಹೇಳಿದರು. ಆದರೆ ಬಡವರ ಸಮಸ್ಯೆಗಳನ್ನು ನಿವಾರಿಸಿದ್ದು ನರೇಂದ್ರ ಮೋದಿ ಸರ್ಕಾರ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಬಿಎಸ್‌ವೈ ಹಾಗೂ ಬೊಮ್ಮಾಯಿ ಸರ್ಕಾರದ ಬಗ್ಗೆ ಶಾ ಪ್ರಶಂಸೆ

ಜನರನ್ನು ತಲುಪುವುದಕ್ಕೆ ಇದು ಸರಿಯಾದ ಸಮಯ. ಕಾರ್ಯಕರ್ತರು ತಲೆಬಗ್ಗಿಸುವ ರೀತಿಯ ಕೆಲಸ  ಮಾಡಿಲ್ಲ. ಬಡವರ ಮನೆವರೆಗು ವಿದ್ಯುತ್ ತಲುಪುವಂತೆ ಮಾಡಿದ್ದು ನಾವು. ಕಟ್ಟಕಡೆಯ ಹಳ್ಳಿಗಳಿಗೆ ಅಡುಗೆ ಅನಿಲ ತಲುಪಿಸಿದ್ದು ನಾವೆ ಎಂದು ಬಿ. ಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ತುಕ್ಡೇ ತುಕ್ಡೇ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ

ಜೆಡಿಎಸ್​, ಕಾಂಗ್ರೆಸ್​​​​ನವರು ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ. ನಾವು ಮೈತ್ರಿ ಮಾಡಿಕೊಂಡು ಚುನಾವಣೆಗೆ ಹೋಗುವುದಿಲ್ಲ. ಚುನಾವಣೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಜೆಡಿಎಸ್ ಒಟ್ಟಿಗೆ ಕೂರುತ್ತಾರೆ. ನಮ್ಮ ಜೊತೆ ಬಿಜೆಪಿ ಇದೆ ಅಂತಾ ಜೆಡಿಎಸ್ ಹೇಳಿಕೊಳ್ಳುತ್ತದೆ. ನಾನು ಕರ್ನಾಟಕದ ಜನತೆಗೆ ಸ್ಪಷ್ಟವಾಗಿ ಹೇಳುತ್ತೇನೆ. ಬಿಜೆಪಿ ಏಕಾಂಗಿಯಾಗಿ ವಿಧಾನಸಭಾ ಚುನಾವಣೆ ಎದುರಿಸಲಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು

ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಒಂದು ಬಾರಿ ಬಿಜೆಪಿಗೆ ಅಧಿಕಾರ ಕೊಟ್ಟು ನೋಡಿ. ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿ ಟಿಪ್ಪು ಸುಲ್ತಾನ್​ನನ್ನು ಹೀರೋ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Sat, 31 December 22

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ