ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮನ, ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ
ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ರಾತ್ರಿ 9.20ಕ್ಕೆ ದೆಹಲಿಯಿಂದ ಹೊರಟಿ, ಮಧ್ಯರಾತ್ರಿ 12ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿದ್ದಾರೆ.
ಬೆಂಗಳೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳು(Shivakumara Swamiji) ಇಹಲೋಕ ತ್ಯಜಿಸಿದ್ರೂ, ಭಕ್ತರ ಪಾಲಿಗೆ ಈಗಲೂ ದೇವರಾಗೇ ಉಳಿದಿದ್ದಾರೆ. ತುಮಕೂರಿನ ಸಿದ್ಧಗಂಗಾ ಶ್ರೀಗಳ(Siddaganga Seer) 115ನೇ ಜಯಂತೋತ್ಸವ ಏಪ್ರಿಲ್ ಒಂದರಂದು ನಡೆಯಲಿದೆ. ಈ ಹಿನ್ನೆಲೆ ತುಮಕೂರಿಗೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಆಗಮಿಸಲಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ರಾತ್ರಿ 9.20ಕ್ಕೆ ದೆಹಲಿಯಿಂದ ಹೊರಟಿ, ಮಧ್ಯರಾತ್ರಿ 12ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿದ್ದಾರೆ. ಏಪ್ರಿಲ್ 1ರಂದು ರಾತ್ರಿ 7.45ಕ್ಕೆ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಿಂದ ನೇರವಾಗಿ ಹೆಚ್ಎಎಲ್ ಏರ್ ಪೋರ್ಟ್ ಗೆ ತೆರಳಲಿ ರಾತ್ರಿ 8 ಗಂಟೆಗೆ ಹೆಚ್ಎಎಲ್ ಏರ್ ಪೋರ್ಟ್ ನಿಂದ ದೆಹಲಿಗೆ ವಾಪಸಾಗಲಿದ್ದಾರೆ.
ಇನ್ನು ಮತ್ತೊಂದೆಡೆ ನಾಳೆ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧತೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪರಿಶೀಲಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರು, ಶಾಸಕರು, ಸಂಸದರು, ಸಹಕಾರಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ. ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜನರಿಗೆ ತೊಂದರೆಯಾಗದಂತೆ ಕುಡಿವ ನೀರಿನ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರುಗಳಾದ ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಶಾಸಕರಾದ ನಾಗೇಂದ್ರ, ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಡಾಳ್ ವಿರುಪಾಕ್ಷಪ್ಪ, ಪೊಲೀಸ್ ಕಮಿಷನರ್ ಕಮಲ್ ಪಂತ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಯುವತಿಯರ ಪೊಟೋ ಪಡೆದು, ಆನ್ ಲೈನ್ ಮೂಲಕ ಒಳ್ಳೆಯ ಸಂಬಳ ಕೊಡಿಸೋದಾಗಿ ನಂಬಿಸಿ ಬ್ಲಾಕ್ ಮೇಲ್, ಅರೆಸ್ಟ್
ಮಗುವಿನ ಮಾರಕ ಕಾಯಿಲೆ ಚಿಕಿತ್ಸೆಗಾಗಿ ಮತಾಂತರ ನಿರ್ಧಾರ! ಟಿವಿ9 ವರದಿಯ ಬಳಿಕ ಬದಲಾಯ್ತು ಬಡ ಕುಟುಂಬದ ಜೀವನ
Published On - 4:30 pm, Wed, 30 March 22