Sign In

By signing in or creating an account, you agree with Associated Broadcasting Company's Terms & Conditions and Privacy Policy.

3D-printed Post Office Building: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಅಶ್ವಿನಿ ವೈಷ್ಣವ್‌

ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

3D-printed Post Office Building: ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಉದ್ಘಾಟಿಸಿದ ಅಶ್ವಿನಿ ವೈಷ್ಣವ್‌
3ಡಿ ಅಂಚೆ ಕಚೇರಿ ಉದ್ಘಾಟಿಸಿದ ಸಚಿವ ಅಶ್ವಿನಿ ವೈಷ್ಣವ್​
Follow us
ವಿವೇಕ ಬಿರಾದಾರ
|

Updated on:Aug 18, 2023 | 10:21 AM

ಬೆಂಗಳೂರು: ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರು ಇಂದು (ಆ.18) ಬೆಳಿಗ್ಗೆ ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು (3D Post Office) ಉದ್ಘಾಟಿಸಿದರು. ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ನನಗೆ ಬೆಂಗಳೂರಿಗೆ ಬರಲು ಸಂತಸವಾಗುತ್ತದೆ. ಈ ನಗರವು ಸಾಕಷ್ಟು ಶಕ್ತಿಯನ್ನು ಹೊಂದಿದೆ. ಇಲ್ಲಿ ಸಕಾರಾತ್ಮಕ ಚಿಂತನೆ ಅಧಿಕವಾಗಿದೆ. ಬೆಂಗಳೂರು ಯಾವಾಗಲೂ ಭಾರತಕ್ಕೆ ಹೊಸ ಚಿತ್ರಣವನ್ನು ನೀಡುತ್ತಿರುತ್ತದೆ. ಈ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ನೀವು ನೋಡಿದ ಹೊಸ ಚಿತ್ರ.  ಭಾರತವು ಇಂದು ಅಭಿವೃದ್ಧಿಯಾಗುತ್ತಿದ್ದು, ನಮ್ಮದೇ ತಂತ್ರಜ್ಞಾನದಿಂದ.  ಇದೆಲ್ಲವೂ ಸಾಧ್ಯವಾದದ್ದು ದೇಶವು ನಿರ್ಣಾಯಕ ಮತ್ತು ನಮ್ಮ ಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ಹೊಂದಿರುವುದರಿಂದ ಎಂದು ಹೇಳಿದರು.

ಅಂಚೆ ಕಚೇರಿ ವಿಶೇಷತೆ

ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧ ಎರಡು ತಿಂಗಳು ಸಮಯ ತೆಗೆದುಕೊಂಡಿತು. ಇನ್ನು ಉದ್ಘಾಟನೆಗೆ ಸಚಿವರ ಲಭ್ಯತೆಗಾಗಿ ಒಂದು ತಿಂಗಳು ಹಿಡಿಯಿತು. ಈ ಕಚೇರಿ ಆರಂಭವಾದ ನಂತರ ಹಲಸೂರು ಬಜಾರ್‌ನಲ್ಲಿರುವ ಪ್ರಸ್ತುತ ಅಂಚೆ ಕಚೇರಿಯನ್ನು ಮುಚ್ಚಲಾಗುವುದು. ಮತ್ತು ಅಲ್ಲಿಯ ಸಿಬ್ಬಂದಿ ಮತ್ತು ಸಾಮಗ್ರಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸ್ಟಾರ್ಟಪ್ ಮಾತ್ರವಲ್ಲ, ಉದ್ಯೋಗ ಸೃಷ್ಟಿಯಲ್ಲಿಯೂ ಮುಂಚೂಣಿಯಲ್ಲಿದೆ ಬೆಂಗಳೂರು; ಅಧ್ಯಯನ ವರದಿ

“ಎಲ್ & ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ. 3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ. ಖರ್ಚಾಯಿತು. ಇನ್ನು ಪೇವರ್ಸ್​, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ಖರ್ಚಾಗಿದೆ. ಈ ಮೂಲಕ ಸಾಂಪ್ರದಾಯಿಕ ಅಂಚೆ ಕಚೇರಿ ನಿರ್ಮಿಸಿದರೇ ಎಷ್ಟು ಖರ್ಚಾಗುತ್ತಿತ್ತು ಅದಕ್ಕೆ ಹೋಲಿಸಿದರೆ ಈ ಅಂಚೆ ಕಚೇರಿಯ ನಿರ್ಮಾಣ ವೆಚ್ಚದಲ್ಲಿ ಶೇ. 30ರಿಂದ 40ರಷ್ಟು ಹಣ ಕಡಿಮೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Fri, 18 August 23

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ