Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿ 2 ದಿನ ರಾಜ್ಯ ಪ್ರವಾಸ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಮೀಕ್ಷೆ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಜನವರಿ 4 ಮತ್ತು 5 ರಂದು ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ (Nitin Gadkari) ಜನವರಿ 4 ಮತ್ತು 5 ರಂದು ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಗಡ್ಕರಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯನ್ನು (Bangalore-Mysore Expressway) ವೈಮಾನಿಕ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ಜನವರಿ 5 ರಂದು ಬೆಳಗ್ಗೆ 9.45ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ದಶಪಥ ಹೆದ್ದಾರಿಯನ್ನು ಉದ್ಘಾಟಿಸಲು ಚಿಂತನೆ ನಡೆದಿದೆ. ಅದೇ ದಿನ (ಜನವರಿ 5) ರಂದು ಸಂಜೆ 5.30ಕ್ಕೆ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಜತೆ ನಿತಿನ್ ಗಡ್ಕರಿ ಸಭೆ ನಡೆಸಲಿದ್ದಾರೆ. ದಶಪಥ ರಸ್ತೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಬಗ್ಗೆ ಸಭೆ ಮಾಡಲಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ಕಾವೇರಿ, ಒಡೆಯರ್ ಹೆಸರು ಇಡಲು ಮನವಿ
ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು. ಇದಾದ ನಂತರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ ಬರೆದು ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ
10 ಲೇನ್ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳದ್ದೇ ಸುದ್ದಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್‌ಪ್ರೆಸ್‌ವೇ ಈ ಮಾರ್ಗದಲ್ಲಿ ಅಪಘಾತಗಳ ಸಂಖ್ಯೆಗೆ ಸುದ್ದಿಯಾಗಿದೆ. ಪೊಲೀಸ್ ಇಲಾಖೆಯ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ 6 ತಿಂಗಳಲ್ಲಿ 77 ಅಪಘಾತಗಳು ಉಂಟಾಗಿವೆ. ಈ ಅಪಘಾತಗಳಲ್ಲಿ ಒಟ್ಟು 28 ಜನರು ಪ್ರಾಣ ಕಳೆದುಕೊಂಡಿದ್ದು, 67 ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಪಕ್ಷ ಸಂಘಟನೆಗೆ ಕಾಂಗ್ರೆಸ್ ಬಸ್ ಯಾತ್ರೆ: ಎರಡು ಪ್ರತ್ಯೇಕ ಸಮಿತಿ ರಚಿಸಿದ ಡಿಕೆ ಶಿವಕುಮಾರ್
ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಆದರೆ, NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ. ಈ ಹಿನ್ನೆಲೆ ಖುದ್ದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪರಿಶೀಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ