2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ: ಹೂಡಿಕೆದಾರರ ಗಮನ ಸೆಳೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2022 | 8:55 PM

ಸಮಾವೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಹೂಡಿಕೆದಾರರನ್ನ ಸ್ವಾಗತಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಾಳೆ 124 ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಹೂಡಿಕೆದಾರರಿಗೆ ಮಾಹಿತಿ ನೀಡಿದರು.

2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ: ಹೂಡಿಕೆದಾರರ ಗಮನ ಸೆಳೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶ
Follow us on

ಬೆಂಗಳೂರು: ಬಂಡವಾಳ ಹೂಡಿಕೆಗೆ ಕಲ್ಲಿದ್ದಲು ಕ್ಷೇತ್ರದಲ್ಲಿ ಆಕರ್ಷಕ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಜಾಗತಿಕ ಬಂಡವಾಳ ಹೂಡಿಕೆದಾರ (global investment conclave) ಸಮಾವೇಶದಲ್ಲಿ ಇಂದು ಪಾಲ್ಗೊಂಡು ಅವರು ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಡೊಮೆಸ್ಟಿಕ್ ಕೋಲ್ ಪ್ರೊಡಕ್ಷನ್ 900 ಮಿಲಿಯನ್ ಟನ್ ತಲುಪಿದಿದೆ. 2025ರ ಸಾಲಿನಲ್ಲಿ ಕೋಲ್ ಇಂಡಿಯಾ ಒಂದೇ ವನ್ ಬಿಲಿಯನ್ ಟನ್​ನಷ್ಟು ಕಲ್ಲಿದ್ದಲು ಉತ್ಪಾದಿಸಲಿದೆ ಎಂದು ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶಗಳಿವೆ. ಉದ್ಯಮ ಸ್ನೇಹಿ ವಾತಾವರಣವನ್ನ ಕಲ್ಲಿದ್ದಲು ಕ್ಷೇತ್ರದಲ್ಲಿ ಕಲ್ಪಿಸಲಾಗಿದೆ. ದೇಶದ ಜಿಡಿಪಿಗೆ ಶೇ 2.5 ರಷ್ಟು ಕೊಡುಗೆಯನ್ನ ಕಲ್ಲಿದ್ದಲು ಕ್ಷೇತ್ರದಿಂದ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ದೇಶನ ನೀಡಿದ್ದಾರೆ. ಈ ಗುರಿಯನ್ನ ಮುಟ್ಟುವತ್ತ ನಾವು ಹೆಜ್ಜೆಯಿಡುತ್ತಿದ್ದೇವೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಹೂಡಿಕೆದಾರರನ್ನ ಸ್ವಾಗತಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಾಳೆ 124 ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಹೂಡಿಕೆದಾರರಿಗೆ ಮಾಹಿತಿ ನೀಡಿದರು. ನಾಳೆ ದೆಹಲಿಯಲ್ಲು ಹರಾಜು ಪ್ರಕ್ರಿಯೆ ನಡೆಯಲಿದ್ದು, ಯಾರು ಬೇಕಾದರು ಪಾಲ್ಗೊಳ್ಳಬಹುದು ಎಂದು ಹೂಡಿಕೆದಾರರಿಗೆ ಸ್ವಾಗತ ಕೋರಿದರು. ಗಣಿಗಾರಿಕೆಗೆ ಬೇಕಾದ 21 ಕ್ಲಿಯರೆನ್ಸ್​ಗಳನ್ನ ಸುಲಲಿತವಾಗಿ ವರ್ಗಾಯಿಸುವ ನಿಯಮಗಳನ್ನ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಯಾಗುತ್ತಿದ್ದು, ಅತಿ ವೇಗದಲ್ಲಿ ಉತ್ಪಾದನೆ ಕೂಡ ಹೆಚ್ಚಿದೆ ಎಂದರು.

ಇದನ್ನೂ ಓದಿ: Invest Karnataka 2022: ರಾಜ್ಯದಲ್ಲಿ ಹೂಡಿಕೆಗೆ ಬನ್ನಿ: ಹೂಡಿಕೆದಾರರಿಗೆ ಸಿಎಂ ಬೊಮ್ಮಾಯಿ ಕರೆ

ಆರ್ಥಿಕವಾಗಿ ಭಾರತ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಪ್ರಧಾನಿ ಮೋದಿ ಅವರ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನ ತಲುಪುವಲ್ಲಿ ಕರ್ನಾಟಕ ಕೂಡ ಹೆಚ್ಚಿನ ಕೊಡುಗೆ ನೀಡಲಿದೆ. ಪ್ರಗತಿ ಹೊಂದಿರುವ ರಾಜ್ಯ ಕರ್ನಾಟಕದಲ್ಲೂ ಹೆಚ್ಚಿನ ಹೂಡಿಕೆಗೆ ಮುಂದೆ ಬರಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಇದೇ ವೇಳೆ ಹೂಡಿಕೆದಾರರಿಗೆ ಕರೆ ನೀಡಿದರು.

7 ಲಕ್ಷ ಕೋಟಿಗೂ ಅಧಿಕ ಬಂಡವಾಳ: ಸಚಿವೆ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ. ಕರ್ನಾಟಕ ಶೇ.63ರಷ್ಟು ಪಾಲು ಹೊಂದಿದೆ. ಐಟಿ ರಫ್ತು, ಬಯೋಟೆಕ್ನಾಲಜಿಯಲ್ಲೂ ಕರ್ನಾಟಕ ರಾಜ್ಯ ಮುಂದಿದೆ. ಕರ್ನಾಟಕ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆಯ ಗುರಿ ಹೊಂದಲಾಗಿತ್ತು. ಆದರೆ 7 ಲಕ್ಷ ಕೋಟಿಗೂ ಅಧಿಕ ಬಂಡವಾಳ ಹರಿದು ಬಂದಿದೆ ಎಂದು ಸಮಾವೇಶದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:43 pm, Wed, 2 November 22