AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಸಿಎಂ ಡಿಕೆ ಶಿವಕುಮಾರ್​​ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಮತ್ತು ಸಕಾಲಿಕ ಪಾವತಿ, ಪಾರದರ್ಶಕ ವ್ಯವಸ್ಥೆ ಖಚಿತಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಕ್ಕರೆ ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಮಹಾರಾಷ್ಟ್ರದಂತಹ ಇತರ ರಾಜ್ಯಗಳ ಮಾದರಿಯಲ್ಲಿ ಸಹ-ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ವಿದ್ಯುತ್ ಖರೀದಿ /ವಿದ್ಯುತ್ ಮಾರಾಟ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ರಾಜ್ಯ ಸರ್ಕಾರ ಪರಿಶೀಲಿಸಬಹುದು ಎಂದು ಪತ್ರದಲ್ಲಿ ಜೋಶಿ ಉಲ್ಲೇಖಿಸಿದ್ದಾರೆ.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಸಿಎಂ ಡಿಕೆ ಶಿವಕುಮಾರ್​​ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ
ಡಿಕೆ ಶಿವಕುಮಾರ್​​ ಮತ್ತು ಪ್ರಹ್ಲಾದ್ ಜೋಶಿ Image Credit source: PTI
ಕಿರಣ್​ ಹನಿಯಡ್ಕ
| Edited By: |

Updated on: Nov 17, 2026 | 8:26 PM

Share

ಬೆಂಗಳೂರು, ನವೆಂಬರ್​​ 17: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಖರೀದಿ, ಕಟಾವು, ಸಾಗಣೆ ಹಾಗೂ ಸಕಾಲಿಕ ಪಾವತಿಗಳಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರಿಗೆ ಪತ್ರ ಬರೆದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರವು ತನ್ನ ನಿರ್ಣಾಯಕ ನೀತಿ ನಿರ್ಧಾರಗಳ ಮೂಲಕ ರೈತರು, ಸಕ್ಕರೆ ಕಾರ್ಖಾನೆಗಳು ಮತ್ತು ಗ್ರಾಹಕರ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಂಡಿದೆ. ಇದೇ ನಿಟ್ಟಿನಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವೂ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

‘ಕರ್ನಾಟಕ ಸರ್ಕಾರವೂ ತನ್ನ ಜವಾಬ್ದಾರಿ ನಿಭಾಯಿಸಬೇಕಿದೆ’

ನ್ಯಾಯಯುತ ಮತ್ತು ಲಾಭದಾಯಕ ಬೆಲೆ ವಾರ್ಷಿಕ ಪರಿಷ್ಕರಣೆ, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಎಥೆನಾಲ್ ನೀತಿ ಮಧ್ಯಸ್ಥಿಕೆಗಳು, ಎಥೆನಾಲ್ ಬಡ್ಡಿ ಸಹಾಯಧನ ಯೋಜನೆಯಡಿ ಆರ್ಥಿಕ ನೆರವು ಮತ್ತು ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಇತರ ಪಾಲುದಾರರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಮೂಲಕ ರೈತರ ಹಿತಾಸಕ್ತಿಗಳನ್ನು ಕಾಪಾಡಲು ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಸಕ್ಕರೆ ಕ್ಷೇತ್ರವನ್ನು ಬಲಪಡಿಸಲು ಮತ್ತು ನಮ್ಮ ಅನ್ನದಾತರನ್ನು ರಕ್ಷಿಸಲು ಕೇಂದ್ರ ಸರ್ಕಾರವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವಾಗ, ಕರ್ನಾಟಕ ಸರ್ಕಾರವೂ ಸಹ ತ್ವರಿತ ಆಡಳಿತಾತ್ಮಕ ಮತ್ತು ಆರ್ಥಿಕ ಕ್ರಮಗಳ ಮೂಲಕ ತನ್ನ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ ಎಂದವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: 29ನೇ ಆವೃತ್ತಿಯ ಬೆಂಗಳೂರು ಟೆಕ್ ಸಮಿಟ್​​ಗೆ ಸಿಎಂ ಡಿಕೆ ಶಿವಕುಮಾರ್​​ ಚಾಲನೆ: 75ಕ್ಕೂ ಹೆಚ್ಚು ದೇಶಗಳು ಭಾಗಿ

ಕಬ್ಬು ಬೆಳೆಗಾರರಿಗೆ ಸಕಾಲದಲ್ಲಿ ಹಣ ಪಾವತಿಸಲು ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಾಮರ್ಥ್ಯ ಹೊಂದಿರುವುದನ್ನು ಕೇಂದ್ರ ಸರ್ಕಾರ ಖಚಿತಪಡಿಸಿದೆ. ಕೇಂದ್ರ ಸರ್ಕಾರ ಕೈಗೊಂಡ ರೈತಪರ ಕ್ರಮಗಳ ಪರಿಣಾಮವಾಗಿ, 2024-25ನೇ ಸಕ್ಕರೆ ಹಂಗಾಮಿನವರೆಗಿನ ಕಬ್ಬಿನ ಬಾಕಿ ಮೊತ್ತದಲ್ಲಿ ಸುಮಾರು ಶೇ.99.8ರಷ್ಟು ಪಾವತಿಸಲಾಗಿದೆ. ಹಿಂದಿನ 2025-26ನೇ ಸಕ್ಕರೆ ಹಂಗಾಮಿನಲ್ಲಿ ಪಾವತಿಸಬೇಕಿದ್ದ ಒಟ್ಟು 1,14,958 ಕೋಟಿ ರೂ. ಕಬ್ಬಿನ ಬಾಕಿ ಮೊತ್ತದಲ್ಲಿ ಸುಮಾರು 1,13,325 ಕೋಟಿ ರೂ. ಪಾವತಿಸಲಾಗಿದೆ. ಈ ಮೂಲಕ ಶೇ.99.6ರಷ್ಟು ಬಾಕಿ ಪಾವತಿ ಪೂರ್ಣಗೊಂಡಿದ್ದು, ಕಬ್ಬಿನ ಬಾಕಿ ಮೊತ್ತವು ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ಸಕ್ಕರೆ ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಮಹಾರಾಷ್ಟ್ರದಂತಹ ಇತರ ರಾಜ್ಯಗಳ ಮಾದರಿಯಲ್ಲಿ ಸಹ-ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ವಿದ್ಯುತ್ ಖರೀದಿ /ವಿದ್ಯುತ್ ಮಾರಾಟ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ರಾಜ್ಯ ಸರ್ಕಾರ ಪರಿಶೀಲಿಸಬಹುದು ಎಂದು ಪತ್ರದಲ್ಲಿ ಜೋಶಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?