ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕೇಂದ್ರ ಕೇಂದ್ರ ಪಂಚಾಯತ್ ರಾಜ್ ಸಚಿವ

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೋರೇಶ್ವರ್‌ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಪಂಚಾಯಿತಿಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕೇಂದ್ರ ಕೇಂದ್ರ ಪಂಚಾಯತ್ ರಾಜ್ ಸಚಿವ
ಕೇಂದ್ರ ಪಂಚಾಯತ್ ರಾಜ್ ಖಾತೆ ಸಚಿವ ಕಪಿಲ್ ಮೋರೇಶ್ವರ್ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 08, 2021 | 11:15 PM

ಬೆಂಗಳೂರು: ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೋರೇಶ್ವರ್‌ (Kapil Moreshwar) ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಪಂಚಾಯಿತಿಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೊಡ್ಡಜಾಲ, ರಾಜಾನುಕುಂಟೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ್ದ ಅವರು, ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆ, ಗ್ರಾಮೀಣ ಆರ್ಥಿಕತೆಗೆ ರಾಜ್ಯ ಸರ್ಕಾರ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತ್ ನೆಟ್ ಮೂಲಕ ಅಂತರ್ಜಾಲ ವ್ಯವಸ್ಥೆ ಉತ್ತಮಗೊಳಿಸುವಂತೆ ಸಲಹೆ ನೀಡಿದರು. ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸದೃಢವಾಗಿದ್ದು ಇನ್ನಷ್ಟು ಬಲಪಡಿಸಲು ಆರ್ಥಿಕ ನೆರವು ಅಗತ್ಯ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಹೇಳಿದರು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಟ್ಟಡಗಳಿಗೆ ಅನುದಾನ ದೊರೆತರೆ ಆಸ್ತಿ ಸೃಜನೆಗೆ ಅನುಕೂಲವಾಗಲಿದೆ. ಪಂಚಾಯತಿಗಳಲ್ಲಿ ಆರ್ಥಿಕತೆಯ ವಿಕೇಂದ್ರೀಕರಣವೂ ಆಗಬೇಕು ಎಂದು ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರ ಗಮನಕ್ಕೆ ತಂದರು.

ರಾಜ್ಯದ 5960 ಗ್ರಾಮ ಪಂಚಾಯಿತಿಗಳಿಗೂ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದೆ. ಕಟ್ಟಕಡೆಯ ವ್ಯಕ್ತಿಯೂ ಅಂತರ್ಜಾಲ ಸೌಲಭ್ಯ ಕಲ್ಪಿಸುವ ಪ್ರಯತ್ನ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅಮೃತ ಯೋಜನೆಯಡಿ 7500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ₹ 1 ಲಕ್ಷ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಗುಡಿಬಂಡೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ; ಕಾಂಗ್ರೆಸ್ ಸದಸ್ಯರ ಕಿಡ್ನಾಪ್ ಆರೋಪ, ಶಾಸಕ ಎಸ್​ಎನ್​ ಸುಬ್ಬಾರೆಡ್ಡಿ ಧರಣಿ ಇದನ್ನೂ ಓದಿ: ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ನಾಪತ್ತೆ ಪ್ರಕರಣ: ಸದಸ್ಯೆ ಮತ್ತು ಆಕೆ ಸಂಬಂಧಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

Published On - 11:14 pm, Mon, 8 November 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ