AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯದ ಇತಿಹಾಸದಲ್ಲೇ ಕಾಣದ ಭಾರಿ ಬೆಲೆ ಏರಿಕೆ’: ಮೊಸರಿನ ದರ ಹೆಚ್ಚಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರದ ನಿರ್ಧಾರವು ಜನಸಾಮಾನ್ಯರ ಮೇಲಿನ ಗದಾಪ್ರಹಾರವೆಂದು ಕಿಡಿಕಾರಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲದೆ, ಆಡಳಿತಾತ್ಮಕ ವೈಫಲ್ಯದಿಂದ ಬೊಕ್ಕಸ ಬರಿದಾಗಿಸಿಕೊಂಡಿರುವ ಸರ್ಕಾರ, ತನ್ನ ರಾಜಕೀಯ ತಪ್ಪುಗಳಿಗೆ ಬಡವರಿಂದ ದಂಡ ವಸೂಲಿ ಮಾಡುತ್ತಿದೆ ಎಂದವರು ಆರೋಪಿಸಿದ್ದಾರೆ.

'ರಾಜ್ಯದ ಇತಿಹಾಸದಲ್ಲೇ ಕಾಣದ ಭಾರಿ ಬೆಲೆ ಏರಿಕೆ': ಮೊಸರಿನ ದರ ಹೆಚ್ಚಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ
ಮೊಸರಿನ ದರ ಹೆಚ್ಚಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ Image Credit source: PTI and KMF
ಕಿರಣ್​ ಹನಿಯಡ್ಕ
| Edited By: |

Updated on: Oct 31, 2026 | 11:48 AM

Share

ಬೆಂಗಳೂರು, ಅಕ್ಟೋಬರ್​​ 31: ಅಗತ್ಯ ವಸ್ತುಗಳಾದ ಹಾಲು ಮತ್ತು ಮೊಸರಿನ ದರ ಏರಿಕೆ ಸಂಬಂಧ ಕರ್ನಾಟಕ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ  ಕಾಣದ ಭಾರಿ ಬೆಲೆ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಕನ್ನ ಹಾಕಿದೆ. ತನ್ನ ಆರ್ಥಿಕ ದುರಾಡಳಿತ ಹಾಗೂ ಖಾಲಿ ಬೊಕ್ಕಸವನ್ನು ಮುಚ್ಚಿಕೊಳ್ಳಲು ಕೆಎಂಎಫ್ (KMF) ಮೂಲಕ ಮೊಸರಿನ ದರವನ್ನು ಅತಿರೇಕದ ಮಟ್ಟಕ್ಕೆ ಏರಿಸಲಾಗಿದೆ ಎಂದವರು ಆರೋಪಿಸಿದ್ದಾರೆ.

‘ಕೆಳ-ಮಧ್ಯಮ ವರ್ಗದ ಕುಟುಂಬಗಳ ಹೊಟ್ಟೆಯ ಮೇಲೆ ನೇರ ದಾಳಿ’

ಒಂದು ಲೀಟರ್ ಮೊಸರಿನ ಬೆಲೆಯನ್ನು ₹54 ರಿಂದ ₹68 ಕ್ಕೆ ಏರಿಕೆ ಮಾಡಲಾಗಿದೆ. ₹14 ಅಂದರೆ ಶೇ. 25.93% ಹೆಚ್ಚಳವಾಗಿದೆ. ಹಾಗೆಯೇ ಅರ್ಧ ಲೀಟರ್ ಮೊಸರಿನ ದರ ₹28 ರಿಂದ ₹34ಕ್ಕೆ ಹೆಚ್ಚಿದ್ದು, ₹6 ಅಂದರೆ ಶೇ. 21.43% ಏರಿಕೆಯಾಗಿದೆ. ಹಾಲಿನ ದರವನ್ನು ಲೀಟರ್‌ಗೆ ₹8 ರಷ್ಟು ಹೆಚ್ಚಿಸಿದ್ದ ಸರ್ಕಾರ, ಈಗ ಒಂದೇ ಬಾರಿಗೆ ಶೇ. 21% ರಿಂದ 26% ರಷ್ಟು ಮೊಸರಿನ ಬೆಲೆ ಏರಿಸಿ ಬಡ ಹಾಗೂ ಕೆಳ-ಮಧ್ಯಮ ವರ್ಗದ ಕುಟುಂಬಗಳ ಹೊಟ್ಟೆಯ ಮೇಲೆ ನೇರ ದಾಳಿ ಮಾಡಿದೆ ಎಂದು ಜೋಶಿ ದೂರಿದ್ದಾರೆ. ಮೊಸರು ಐಷಾರಾಮಿ ವಸ್ತುವಲ್ಲ, ಅದು ದಿನನಿತ್ಯದ ಆಹಾರ. ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲದೆ, ಆಡಳಿತಾತ್ಮಕ ವೈಫಲ್ಯದಿಂದ ಬೊಕ್ಕಸ ಬರಿದಾಗಿಸಿಕೊಂಡಿರುವ ಸರ್ಕಾರ, ತನ್ನ ರಾಜಕೀಯ ತಪ್ಪುಗಳಿಗೆ ಬಡವರಿಂದ ದಂಡ ವಸೂಲಿ ಮಾಡುತ್ತಿದೆ. ಇದು ಸಂಪೂರ್ಣ ಜನವಿರೋಧಿ ಹಾಗೂ ದುಬಾರಿ ಸರ್ಕಾರದ ನೀತಿಗೆ ಹಿಡಿದ ಕೈಗನ್ನಡಿ ಎಂದವರು ತಿವಿದಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನತೆಗೆ ಮತ್ತೊಂದು ಶಾಕ್​​: ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ

‘ಈ ಸರ್ಕಾರ ಬಹಳ ದಿನ ಇರಲ್ಲ, ಪಾಪರ್ ಆಗಿದೆ’

ರಾಜ್ಯ ಸರ್ಕಾರದಿಂದ ಹಾಲು, ಮೊಸರಿನ ದರ ಏರಿಕೆ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​​ ಕೂಡ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ನಾಲ್ಕನೇ ಬಾರಿ ಹಾಲಿನ ದರ ಏರಿಕೆ ಆಗಿದೆ. ಈ ಸರ್ಕಾರ ಬಹಳ ದಿನ ಇರಲ್ಲ, ಪಾಪರ್ ಆಗಿದೆ ಎಂದು ಅಶೋಕ್​​ ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ