AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Adityanath: ಬೆಂಗಳೂರಿಗೆ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಬಿಜೆಪಿ ಕಾರ್ಯಕರ್ತರು, ಸಚಿವರು ಹಾಗೂ ಮುಖ್ಯಮಂತ್ರಿ ಸಹ ಆಗಾಗ ‘ಉತ್ತರ ಪ್ರದೇಶ ಮಾದರಿ’ (UP Model) ಬಗ್ಗೆ ಪ್ರಸ್ತಾಪಿಸುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಭೇಟಿ ಮಹತ್ವ ಪಡೆದಿದೆ.

Yogi Adityanath: ಬೆಂಗಳೂರಿಗೆ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಉತ್ತಮ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 01, 2022 | 7:10 AM

Share

ಬೆಂಗಳೂರು: ಕರ್ನಾಟಕದಲ್ಲಿಯೂ ಜನಪ್ರಿಯರಾಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಗುರುವಾರ (ಸೆಪ್ಟೆಂಬರ್ 1) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆ’ಯನ್ನು (Sri Dharmasthala Manjunatheshwara Institute of Naturopathy and Yogic Sciences – SDMINYS) ಅವರು ಉದ್ಘಾಟಿಸಲಿದ್ದಾರೆ.

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಬರಲಿರುವ ಅವರು ಹೆಲಿಕಾಪ್ಟರ್​ ಮೂಲಕ ನೆಲಮಂಗಲದಲ್ಲಿರುವ ಎಸ್​ಡಿಎಂ ನಿಸರ್ಗ ಕೇಂದ್ರ ತಲುಪಲಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆಯ ಮುಖ್ಯಸ್ಥರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕೆಲ ಸಮಯ ಚರ್ಚೆ ನಡೆಸಲಿರುವ ಅವರು, ನಂತರ ‘ಕ್ಷೇಮವನ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕ್ಷೇಮವನದಲ್ಲಿ ಆದಿತ್ಯನಾಥ್ ಸುಮಾರು ಎರಡು ತಾಸು ಉಳಿದುಕೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಉಪಸ್ಥಿತರಿರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಸೆಪ್ಟೆಂಬರ್ 2) ಮಂಗಳೂರಿಗೆ ಭೇಟಿ ನೀಡಲಿದ್ದು, ಅದಕ್ಕೆ ಒಂದು ದಿನ ಮೊದಲು ಆದಿತ್ಯನಾಥ್ ಬೆಂಗಳೂರಿಗೆ ಬರಲಿದ್ದಾರೆ. ಕರ್ನಾಟಕದ ಮುಂದಿನ ವಿಧಾನಸಭಾ ಸಿದ್ಧತೆಗೆ ಬಿಜೆಪಿ ಸಂಘಟನೆಯನ್ನು ಚುರುಕುಗೊಳಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಕಾರ್ಯಕರ್ತರು, ಸಚಿವರು ಹಾಗೂ ಮುಖ್ಯಮಂತ್ರಿ ಸಹ ಆಗಾಗ ‘ಉತ್ತರ ಪ್ರದೇಶ ಮಾದರಿ’ (UP Model) ಬಗ್ಗೆ ಪ್ರಸ್ತಾಪಿಸುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಭೇಟಿ ಮಹತ್ವ ಪಡೆದಿದೆ.

Published On - 7:10 am, Thu, 1 September 22

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ