ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು: ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ

ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ ಕರ್ನಾಟಕ ಪ್ರವಾಸ ರದ್ದಾಗಿದೆ.

ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು:  ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 15, 2022 | 4:09 PM

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ (Yogi Adityanath) ಕರ್ನಾಟಕ ಪ್ರವಾಸ ರದ್ದಾಗಿದೆ. ಈ ಮೂಲಕ ಮಂಡ್ಯದ ಕೆಆರ್​ಪೇಟಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ (Kumbmela) ಸಿಎಂ ಯೋಗಿ ಆದಿತ್ಯನಾಥ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಜೊತೆಗೆ ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ್ದಾರೆ.

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡಗೆ ನಿರಾಸೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸಚಿವ ನಾರಾಯಣಗೌಡ ಫುಲ್​ ಆಕ್ಟಿವ್​ ಆಗಿದ್ದು, ಕುಂಬಮೇಳ ಮಾಡುವ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಬರಲಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್​​ ರಾಜ್ಯ ಪ್ರವಾಸ ರದ್ದಾಗಿದೆ. ಈ ಮೂಲಕ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ನಿರಾಸೆಯಾಗಿದೆ.

ಜೆಡಿಎಸ್ ಭದ್ರ ಕೋಟೆ ಎನಿಸಿಕಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಈ ಭಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಕಮಲ ಅರಳಿಸಬೇಕೆಂದು ಬಿಜೆಪಿ ಸಾಕಷ್ಟು ಸರ್ಕಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ (ಅ.01) ರಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಮಾಡಿತ್ತು. ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 15 October 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ