ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ (Yogi Adityanath) ಕರ್ನಾಟಕ ಪ್ರವಾಸ ರದ್ದಾಗಿದೆ. ಈ ಮೂಲಕ ಮಂಡ್ಯದ ಕೆಆರ್ಪೇಟಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ (Kumbmela) ಸಿಎಂ ಯೋಗಿ ಆದಿತ್ಯನಾಥ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಜೊತೆಗೆ ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ್ದಾರೆ.
ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡಗೆ ನಿರಾಸೆ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸಚಿವ ನಾರಾಯಣಗೌಡ ಫುಲ್ ಆಕ್ಟಿವ್ ಆಗಿದ್ದು, ಕುಂಬಮೇಳ ಮಾಡುವ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬರಲಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್ ರಾಜ್ಯ ಪ್ರವಾಸ ರದ್ದಾಗಿದೆ. ಈ ಮೂಲಕ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ನಿರಾಸೆಯಾಗಿದೆ.
ಜೆಡಿಎಸ್ ಭದ್ರ ಕೋಟೆ ಎನಿಸಿಕಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಈ ಭಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಕಮಲ ಅರಳಿಸಬೇಕೆಂದು ಬಿಜೆಪಿ ಸಾಕಷ್ಟು ಸರ್ಕಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ (ಅ.01) ರಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಮಾಡಿತ್ತು. ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:50 pm, Sat, 15 October 22