ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ

ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ. 

ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ
ಮಹಿಳಾ ಕಂಡಕ್ಟರ್​ ಮೇಲೆ ಹಲ್ಲೆ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Jan 14, 2024 | 3:00 PM

ಬೆಂಗಳೂರು, ಜನವರಿ 14: ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ (BMTC) ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಇಂದು ಬೆಳಿಗ್ಗೆ ನಗರೂರಿನಿಂದ ಮೆಜಸ್ಟಿಕ್ ಬರುವ ಮಾರ್ಗದಲ್ಲಿ ಡಿಪೋ- 40 ಕ್ಕೆ ಸೇರಿದ ಬಿಎಂಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ದಾಸರಹಳ್ಳಿ ಬಳಿ ಬಸ್ ಕಂಡಕ್ಟರ್ ಸುಕನ್ಯಾ ಮೇಲೆ ಹಲ್ಲೆ ಮಾಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ.

ಪಾದಚಾರಿಗಳಿಗೆ ಕಾರು ಡಿಕ್ಕಿ: ಮಹಿಳೆ ಸಾವು, ಮತ್ತೋರ್ವನಿಗೆ ಗಾಯ

ಮೈಸೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ಚಿಕ್ಕಮ್ಮತಾಯಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಇದನ್ನೂ ಓದಿ:

ಆಲಗೂಡು ಗ್ರಾಮದ ನಿವಾಸಿ ಜಯಮ್ಮ ಮೃತ ಮಹಿಳೆ. ಜಯರಾಮು ಎಂಬುವರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಂತಾರಾಜ್ಯ ಗಾಂಜಾ ಮಾರಾಟಗಾರನ ಬಂಧನ

ಆನೇಕಲ್: ಅಂತಾರಾಜ್ಯ ಗಾಂಜಾ ಮಾರಾಟಗಾರನನ್ನು ಹೆಬ್ಬಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಸುದೀಪ್ತಾ ಕುಮಾರ್ ಪಂಡ(36) ಬಂಧಿತ ಆರೋಪಿ. ಐದು ಕೆಜಿಯಷ್ಟು ಗಾಂಜಾವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಆರೋಪಿ ವಾಸವಿದ್ದ. ಗ್ರಾನೈಟ್ ಹಾಕುವ ಕೆಲಸ ಮಾಡಿಕೊಂಡಿದ್ದ.

ಇದನ್ನೂ ಓದಿ: ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ರೇಪ್​ & ಮರ್ಡರ್? ಜಮೀನೊಂದರಲ್ಲಿ ಬೆತ್ತಲೆ ಶವ ಪತ್ತೆ

ಒರಿಸ್ಸಾದಿಂದ ರೈಲಿನ ಮೂಲಕ ಗಾಂಜಾ ತಂದು ಬೊಮ್ಮಸಂದ್ರ ಡಿ-ಮಾರ್ಟ್ ಹಿಂಭಾಗದಲ್ಲಿ ಮಾರಾಟ ಮಾಡುತ್ತಿದ್ದ. ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ-ಬಿಟಿ ಕಂಪನಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಹೆಬ್ಬಗೋಡಿ ಪೊಲೀಸರ ದಾಳಿ ಮಾಡಿದ್ದಾರೆ. ಈ ವೇಳೆ ಗಾಂಜಾ ಸಮೇತವಾಗಿ ಆರೋಪಿಯ ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Sun, 14 January 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್