ಯುಪಿಎಸ್​​ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೂ ಸಿಗಲಿದೆ ಉಚಿತ ತರಬೇತಿ!

IAS, IPS Coaching; ಬೆಂಗಳೂರಿನಲ್ಲೇ ಸಂಸ್ಥೆಯೊಂದು ಉಚಿತವಾಗಿ ಐಎಎಸ್, ಐಪಿಎಸ್ ತರಬೇತಿ ನೀಡುತ್ತಿದೆ. ರಾಜ್ಯದ ಯುಪಿಎಸ್​​ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ದಿಲ್ಲಿಯಿಂದ ನುರಿತ ತಜ್ಞರು ಬಂದು ತರಬೇತಿ ನೀಡುತ್ತಾರೆ ಎಂದು ಸಂಸ್ಥೆ ತಿಳಿಸಿದ್ದು, ಆ ಕುರಿತು ವಿವರ ಇಲ್ಲಿದೆ.

ಯುಪಿಎಸ್​​ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೂ ಸಿಗಲಿದೆ ಉಚಿತ ತರಬೇತಿ!
ಯುಪಿಎಸ್​​ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೂ ಸಿಗಲಿದೆ ಉಚಿತ ತರಬೇತಿ!
Follow us
TV9 Web
| Updated By: Ganapathi Sharma

Updated on:May 24, 2024 | 2:20 PM

ಬೆಂಗಳೂರು, ಮೇ 24: ಭವಿಷ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಕೋಚಿಂಗ್​ಗೆ (IAS, IPS Coaching) ದೂರದ ದೆಹಲಿಗೆ ಅಥವಾ ಇತರ ಕಡೆಗಳಿಗೆ ತೆರಳಬೇಕಾದ ಅನಿವಾರ್ಯತೆ. ನಮ್ಮಲ್ಲಿಯೇ ಉತ್ತಮ ತರಬೇತಿ ಪಡೆಯಬೇಕಿದ್ದರೂ ದೊಡ್ಡ ಮೊತ್ತದ ಶುಲ್ಕ ತೆರಬೇಕಾದ ಸಂಕಷ್ಟ. ಈ ಸಂಕಷ್ಟದ ನಡುವೆ ಇದೀಗ ಬೆಂಗಳೂರಿನಲ್ಲೇ ಸಂಸ್ಥೆಯೊಂದು ಉಚಿತವಾಗಿ ಐಎಎಸ್, ಐಪಿಎಸ್ ತರಬೇತಿ ನೀಡುತ್ತಿದೆ. ಬೆಂಗಳೂರಿನ ಚಂದ್ರಾ ಲೇಔಟ್​​ನಲ್ಲಿ ಗುಣಮಟ್ಟದ ಉಚಿತ ಕೋಚಿಂಗ್ ನೀಡುತ್ತಿರುವುದಾಗಿ ‘ಧೀ ಅಕಾಡೆಮಿ (Dhi Academy)’ ಹೆಸರಿನ ಸಂಸ್ಥೆ ಹೇಳಿಕೊಂಡಿದೆ.

ಆಕಾಂಕ್ಷಿಗಳಿಗೆ ಅತ್ಯುತ್ತಮ ಅವಕಾಶವನ್ನು ನಮ್ಮ ಸಂಸ್ಥೆ ತೆರೆದಿಟ್ಟಿದೆ. ಯುಪಿಎಸ್​​​ಸಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗೂ ಕಳೆದೆರಡು ವರ್ಷಗಳಿಂದ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದ್ದೇವೆ. ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ತೇರ್ಗಡೆ ಹೊಂದಿ ಸಂಸ್ಥೆಗೆ ಗೌರವ ತಂದಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ತರಬೇತಿ ನೀಡುವ ಸಂಸ್ಥೆ ಇತರೆ ಎಲ್ಲ ಸ್ಪರ್ಧಾತ್ಮಕ ತರಬೇತಿ ನೀಡುವ ಸಂಸ್ಥೆಗಳಿಗಿಂತ ಭಿನ್ನವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ‘ಧೀ ಅಕಾಡೆಮಿ’ ಆಡಳಿತ ಮಂಡಳಿ ತಿಳಿಸಿದೆ.

ದೂರದ ದಿಲ್ಲಿಗೆ ಹೋಗಿ ನಮ್ಮ ಕನ್ನಡಿಗ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಅಭ್ಯರ್ಥಿಗಳು ನಮ್ಮ ಕರ್ನಾಟಕದಲ್ಲೇ ಉತ್ತಮ ಅವಕಾಶವನ್ನು ಪಡೆದುಕೊಳ್ಳಬೇಕು ಅನ್ನುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಉಚಿತ ಕೋಚಿಂಗ್ ನೀಡುತ್ತಿದ್ದೇವೆ ಎಂದು ‘ಧೀ ಅಕಾಡೆಮಿ’ ತಿಳಿಸಿದೆ.

ತಜ್ಞರಿಂದ ತರಬೇತಿ

ರಾಜ್ಯದ ಯುಪಿಎಸ್​​ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ದಿಲ್ಲಿಯಿಂದ ನುರಿತ ತಜ್ಞರು ಬಂದು ತರಬೇತಿ ನೀಡುತ್ತಾರೆ. ಜೊತೆಗೆ ಇಲ್ಲಿಯ ಸಂಪನ್ಮೂಲ ವ್ಯಕ್ತಿಗಳು ಕೂಡ ಅಗತ್ಯ ಮಾಹಿತಿ, ಸಲಹೆ -ಸೂಚನೆ ನೀಡುವುದಕ್ಕೆ ಲಭ್ಯವಿದ್ದಾರೆ. ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳೇ ಉಪನ್ಯಾಸವನ್ನು ಅಭ್ಯರ್ಥಿಗಳಿಗೆ ನೀಡಲಿದ್ದಾರೆ. ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ (9844868662/9844868663) ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ‘ಧೀ ಅಕಾಡೆಮಿ’ ತಿಳಿಸಿದೆ.

ಇದನ್ನೂ ಓದಿ: ಸೋರುತಿಹುದು ಬಸ್ ಮಾಳಿಗಿ: ವಾಯುವ್ಯ ಸಾರಿಗೆ ಬಸ್ ಚಾಲಕರಿಗೆ ಛತ್ರಿ ಗ್ಯಾರಂಟಿ! ವಿಡಿಯೋ ನೋಡಿ

ನಿಮ್ಮ ಕನಸನ್ನು ನನಸಾಗಿಸುವುದಕ್ಕೆ ‘ಧೀ ಅಕಾಡೆಮಿ’ ಅತ್ಯುತ್ತಮ ಆಯ್ಕೆ. ಬಡವರಿಗೆ ಉನ್ನತ ಹುದ್ದೆಗಳ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಅಂತಹ ಸನ್ನಿವೇಶದಲ್ಲಿ ಅವರಿಗೆ ಉಚಿತ ತರಬೇತಿ ನೀಡುವುದಕ್ಕೆ ನಮಗೆ ಅತ್ಯಂತ ಖುಷಿ ಇದೆ. ಎಲ್ಲ ಮೂಲ ಸೌಕರ್ಯವನ್ನು ನಮ್ಮ ಸಂಸ್ಥೆ ಒಳಗೊಂಡಿದೆ. ನಿಮ್ಮ ಎಲ್ಲ ಕನಸುಗಳನ್ನು ನಮ್ಮ ಸಂಸ್ಥೆಯ ವೇದಿಕೆ ಮೂಲಕ ನನಸು ಮಾಡಿಕೊಳ್ಳಬಹುದು ಎಂದು ಸಂಸ್ಥೆಯ ಕಾವ್ಯಾ ಅನಂತ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Fri, 24 May 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್