UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ

ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

UPSC Exam: ಯುಪಿಎಸ್​ಸಿ ಪರೀಕ್ಷೆ, ಭಾನುವಾರ ಬೆಳಗ್ಗೆ 6ರಿಂದಲೇ ಆರಂಭವಾಗಲಿದೆ ಮೆಟ್ರೋ ಸಂಚಾರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:May 26, 2023 | 7:17 PM

ಬೆಂಗಳೂರು: ಯುಪಿಎಸ್​ಸಿ ಪೂರ್ವಭಾವಿ ಪರೀಕ್ಷೆ (UPSC Preliminary Exam) ಇರುವ ಕಾರಣ ಮೇ 28ರ ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ತಿಳಿಸಿದೆ. ಯುಪಿಎಸ್​ಸಿ ಪರೀಕ್ಷೆ ಕಾರಣ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಆ ದಿನ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್​​ಗಳಿಂದ (ಕಾಡುಗೋಡಿ) ಮೆಟ್ರೋ ರೈಲು ಸೇವೆಗಳು 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

ಇದನ್ನೂ ಓದಿ: Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತದೆ. ಉಳಿದಂತೆ ವಾರದ ದಿನಗಳಲ್ಲಿ ಸೋಮವಾರದಿಂದ ಶನಿವಾರದ ವರೆಗೆ ಬೆಳಗ್ಗೆ 5 ಗಂಟೆಗೇ ಮೆಟ್ರೋ ರೈಲು ಸಂಚಾರ ಆರಂಭವಾಗುತ್ತದೆ.

ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ. ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್​ಸಿಎಲ್ ಇತ್ತೀಚೆಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 26 May 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ