ವಿಧಾನಸೌಧ ಪ್ರವೇಶ​ಕ್ಕೆ ನಕಲಿ ಪಾಸ್​ ಬಳಕೆ: ಕಲರ್ ಜೆರಾಕ್ಸ್, ಅವಧಿ ಮುಗಿದಿರುವ ಪಾಸ್​ಗಳು ಪತ್ತೆ

ಜು.7 ರಾಜ್ಯ ಬಜೆಟ್​ ಮಂಡನೆ ವೇಳೆ ತಿಪ್ಪೇರುದ್ರಪ್ಪ ಎಂಬ ವ್ಯಕ್ತಿ ಸದನದ ಒಳಗೆ ಪ್ರವೇಶಿಸಿ, ಶಾಸಕ ಸ್ಥಾನದಲ್ಲಿ ಕೂತಿದ್ದು ಭದ್ರತಾ ವೈಪಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಇದಾದ ನಂತರ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ವಿಧಾನಸೌಧದಲ್ಲಿ ನಕಲಿ ಪಾಸ್​​ಗಳ ಹಾವಳಿ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ವಿಧಾನಸೌಧ ಪ್ರವೇಶ​ಕ್ಕೆ ನಕಲಿ ಪಾಸ್​ ಬಳಕೆ: ಕಲರ್ ಜೆರಾಕ್ಸ್, ಅವಧಿ ಮುಗಿದಿರುವ ಪಾಸ್​ಗಳು ಪತ್ತೆ
ನಕಲಿ ಪಾಸ್​​​ಗಳು
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Jul 14, 2023 | 11:34 AM

ಬೆಂಗಳೂರು: ಜು.7 ರಂದು ರಾಜ್ಯ ಬಜೆಟ್​ (Karnataka Budget) ಮಂಡನೆ ವೇಳೆ ತಿಪ್ಪೇರುದ್ರಪ್ಪ ಎಂಬ ವ್ಯಕ್ತಿ ಸದನದ ಒಳಗೆ ಪ್ರವೇಶಿಸಿ, ಶಾಸಕರ ಸ್ಥಾನದಲ್ಲಿ ಕೂತಿದ್ದು ಭದ್ರತಾ ಲೋಪಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಇದಾದ ನಂತರ ಎಚ್ಚೆತ್ತುಕೊಂಡ ಪೊಲೀಸರು (Bengaluru Police) ವಿಧಾನಸೌಧದಲ್ಲಿ (Vidhana Soudha) ನಕಲಿ ಪಾಸ್​​ಗಳ (Fake pass) ಹಾವಳಿ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಈ ನಕಲಿ ಪಾಸ್​ಗಳನ್ನು ಬಳಸಿ ವಿಧಾನಸೌಧದ ಒಳಗೆ ಆಗಮಿಸುತ್ತಿರುವವರನ್ನು ತಡೆದಿದ್ದಾರೆ.

ಹೌದು ವಿಧಾನಸೌಧ ಭದ್ರತೆ ಗಂಭೀರವಾಗಿ ಪರಿಗಣಿಸಿದ ಭದ್ರತಾ ಪೊಲೀಸರು, ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾರೆ. ಕೇವಲ ನಾಲ್ಕೇ ದಿನದಲ್ಲಿ ಬರೋಬ್ಬರಿ ಮುನ್ನೂರಕ್ಕು ಹೆಚ್ಚು ನಕಲಿ ಪಾಸ್ ಪತ್ತೆಹಚ್ಚಿದ್ದಾರೆ. ಅಧಿಕೃತ ಪಾಸ್​ಗಳನ್ನು ಕಲರ್ ಜೆರಾಕ್ಸ್, ಓಲ್ಡ್ ಪಾಸ್​ಗಳು, ಅವಧಿ ಮುಗಿದಿರುವ ಪಾಸ್​ಗಳು, ಮತ್ತು ವಾಹನಗಳ ನಕಲಿ ಪಾಸ್​​ಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭದ್ರತಾ ಲೋಪದ ಬೆನ್ನಲ್ಲೇ ವಿಧಾನಸೌಧಕ್ಕೆ ಹೈ ಟೈಕ್ನಾಲಜಿ ಭದ್ರತೆ, ಮೂರು ಹಂತದ ಭದ್ರತೆ ಹೇಗಿದೆ ಗೊತ್ತಾ?

ವಿಧಾನಸೌದಕ್ಕೆ ಎಂಟ್ರಿಯಾಗುವ ಎಲ್ಲಾ ಗೇಟ್​ಗಳಲ್ಲಿ ಪ್ರತಿಯೊಬ್ಬರನ್ನು ಪರಿಶೀಲನೆ ಮಾಡುತ್ತಿದ್ದಾರೆ. ನಕಲಿ ಪಾಸ್ ಬಳಸಿ‌ ವಿಧಾನಸೌಧ ಒಳ ಪ್ರವೇಶ ಮಾಡುತ್ತಿದ್ದವರಿಗೆ ತಡೆದಿದ್ದಾರೆ. ಇದೀಗ ಪೊಲೀಸರು ಅವಧಿ‌ ಮುಗಿದಿರುವ ಪಾಸ್, ಕಲರ್ ಜೆರಕ್ಸ್ ಪಾಸ್​ಗಳನ್ನು ಸೀಜ್ ಮಾಡಿದ್ದಾರೆ. ಹಲವು ರಾಜಕಾರಣಿಗಳ ಬೆಂಬಲಿಗರಿಂದ ನಕಲಿ ಪಾಸ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಸದ್ಯ ನಕಲಿ ಪಾಸ ಬಳಸುತ್ತಿದ್ದ ಎಲ್ಲರ ಮಾಹಿತಿ ಸಂಗ್ರಹಿಸಿದ್ದಾರೆ.

ಇನ್ನು ಮಾಜಿ ಎಂಎಲ್ಎ, ಎಂಎಲ್​​ಸಿ ಪಾಸ್​ಗಳೇ ನಕಲಿಯಾಗಿದ್ದು ಆಘಾತಕಾರಿ ಸಂಗತಿಯಾಗಿದೆ. ಇದೀಗ ಪೊಲೀಸರು 300 ಕ್ಕೂ ಹೆಚ್ಚು ನಕಲಿ ಪಾಸ್​ಗಳನ್ನು ವಶಕ್ಕೆ ಪಡೆದಿದ್ದು, ಈ ನಕಲಿ ಪಾಸ್​ಗಳ ಹಿಂದಿನ ಉದ್ದೇಶ ಏನಾಗಿತ್ತು ಎಂದು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 14 July 23

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!