ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

|

Updated on: Sep 23, 2020 | 6:58 PM

ಮಸೀದಿಗಳಲ್ಲಿ ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವ ಬಗ್ಗೆ ಆಕ್ಷೇಪಿಸಿ ಬೆಂಗಳೂರಿನ ಥಣಿಸಂದ್ರ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದನ್ನು ಇಂದು ವಿಚಾರಣೆ ನಡೆಸಿದ ರಾಜ್ಯ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ ಥಣಿಸಂದ್ರ ನಿವಾಸಿಗಳು ವಾರ್ಡಿನ 7 ಮಸೀದಿಗಳಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ. ಆಜಾನ್​ಗಾಗಿ ಲೌಡ್ ಸ್ಪೀಕರ್ ಬಳಕೆ ಮಾಡುವುದು ಮೂಲಭೂತ ಹಕ್ಕಲ್ಲ, ಹಾಗಾಗಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ […]

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್
Follow us on

ಮಸೀದಿಗಳಲ್ಲಿ ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವ ಬಗ್ಗೆ ಆಕ್ಷೇಪಿಸಿ ಬೆಂಗಳೂರಿನ ಥಣಿಸಂದ್ರ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದನ್ನು ಇಂದು ವಿಚಾರಣೆ ನಡೆಸಿದ ರಾಜ್ಯ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ

ಥಣಿಸಂದ್ರ ನಿವಾಸಿಗಳು ವಾರ್ಡಿನ 7 ಮಸೀದಿಗಳಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ.

ಆಜಾನ್​ಗಾಗಿ ಲೌಡ್ ಸ್ಪೀಕರ್ ಬಳಕೆ ಮಾಡುವುದು ಮೂಲಭೂತ ಹಕ್ಕಲ್ಲ, ಹಾಗಾಗಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಪೀಠವು ನಿಯಮ ಉಲ್ಲಂಘನೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಹೇಳಿದೆ.