AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನೆಮ್ಮದಿ, ಧೈರ್ಯದ ವಾತಾವರಣವಿಲ್ಲ; ಕಾನೂನು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ನಿಲುವಳಿ ಪ್ರಸ್ತಾಪ ತಿರಸ್ಕರಿಸಿದ ಸ್ಪೀಕರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ವಿವಾದ, ಹಿಂದೂ ಕಾರ್ಯಕರ್ತನ ಹತ್ಯೆ ಸೇರಿದಂತೆ ಕಾನೂನು, ಸುವ್ಯವಸ್ಥೆ ವಿಚಾರಗಳನ್ನೊಳಗೊಂಡ ನಿಲುವಳಿಯನ್ನು ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌ ಮಂಡನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ನೆಮ್ಮದಿ, ಧೈರ್ಯದ ವಾತಾವರಣವಿಲ್ಲ; ಕಾನೂನು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ನಿಲುವಳಿ ಪ್ರಸ್ತಾಪ ತಿರಸ್ಕರಿಸಿದ ಸ್ಪೀಕರ್
ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌
TV9 Web
| Updated By: ganapathi bhat|

Updated on: Mar 16, 2022 | 1:37 PM

Share

ಬೆಂಗಳೂರು: ಕೆಲ ಘಟನೆಗಳಿಂದ ರಾಜ್ಯದ ಖ್ಯಾತಿ ಬದಲಾಗುವ ಆತಂಕ ಇದೆ. ಕಾನೂನು ಸುವ್ಯವಸ್ಥೆ ಸರಿಯಿದ್ರೆ ಆ ಪ್ರದೇಶ ಸರಿಯಾಗಿರುತ್ತೆ. ರಾಜ್ಯದಲ್ಲಿ ಯಾರಿಗೂ ನೆಮ್ಮದಿ, ಧೈರ್ಯದ ವಾತಾವರಣವಿಲ್ಲ ಎಂದು ವಿಧಾನಸಭೆಯಲ್ಲಿ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಇಂದು (ಮಾರ್ಚ್ 16) ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಶವಯಾತ್ರೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಭಾಗಿ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಯು.ಟಿ. ಖಾದರ್ ಮಾತಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದಿದ್ದಕ್ಕೆ ಆಕ್ರೋಶ ಕೇಳಿಬಂದಿದೆ. ಕಾಂಗ್ರೆಸ್‌ ಶಾಸಕ ಜಮೀರ್ ಪ್ರಸ್ತಾಪಕ್ಕೆ ಸದನದಲ್ಲಿ ಗದ್ದಲ ಉಂಟಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ವಿಚಾರವಾಗಿ ವಿಧಾನಸಭೆಯಲ್ಲಿ ನಿಲುವಳಿ ಸೂಚನಾ ಪ್ರಸ್ತಾವ ಮಂಡನೆ ಮಾಡಲಾಗಿದೆ. ನಿಯಮ 60ರ ಅಡಿಯಲ್ಲಿ ವಿಪಕ್ಷ ‌ಕಾಂಗ್ರೆಸ್ ನಿಲುವಳಿ ಸೂಚನಾ ಪ್ರಸ್ತಾಪ ಮಂಡಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ವಿವಾದ, ಹಿಂದೂ ಕಾರ್ಯಕರ್ತನ ಹತ್ಯೆ ಸೇರಿದಂತೆ ಕಾನೂನು, ಸುವ್ಯವಸ್ಥೆ ವಿಚಾರಗಳನ್ನೊಳಗೊಂಡ ನಿಲುವಳಿಯನ್ನು ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌ ಮಂಡನೆ ಮಾಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ತಾಳ್ಮೆ, ಬದ್ಧತೆಯನ್ನ ಎಲ್ಲರೂ ಮೆಚ್ಚಿಕೊಳ್ಳುತ್ತೇವೆ. ಮಾಧುಸ್ವಾಮಿ ಈ ಗುಣಗಳನ್ನ ಅಳವಡಿಸಿಕೊಂಡ್ರೆ ಒಳ್ಳೆಯದು ಎಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಯು.ಟಿ. ಖಾದರ್ ಹೊಗಳಿದ್ದಾರೆ. ಜವಾಬ್ದಾರಿ ಕೊಟ್ಟಿದ್ದಾರೆ, ಮಾತಾಡಲೇಬೇಕು. ರನ್ ಹೊಡೆದು ಎದುರಿದ್ದವನ ಜತೆ ಕೇಳಿಯೇ ಓಡಬೇಕು. ಎದುರಿದ್ದವನನ್ನ ಕೇಳದೇ ಓಡಿದರೆ ರನೌಟ್ ಆಗಿಬಿಡ್ತೀವಿ. ಸ್ವಲ್ಪ ನೋಡ್ಕೊಂಡು ಓಡಪ್ಪಾ, ನಾನು ಇದ್ದೇನೆ ಎಂದು ವಿಪಕ್ಷ ಉಪನಾಯಕ ಖಾದರ್​ಗೆ ಮಾಧುಸ್ವಾಮಿ ಸಲಹೆ ನೀಡಿದ್ದಾರೆ.

ನಿಲುವಳಿ ಪ್ರಸ್ತಾಪ ತಿರಸ್ಕಾರ ಮಾಡಿದ್ದೇನೆ, ಈ ವಿಚಾರ ಚರ್ಚೆ ಮಾಡಬೇಕಿದ್ದರೆ ಬೇರೆ ರೂಪದಲ್ಲಿ ತನ್ನಿ ಎಂದು ಸ್ಪೀಕರ್ ನಿರ್ಧಾರ ತಿಳಿಸಿದ್ದಾರೆ. ಯಾವ ರೂಪದಲ್ಲಿ ಅವಕಾಶ ಎಂದು ನೀವೇ ಪೀಠದಿಂದ ಹೇಳಿದರೆ ಪೀಠದ ಗೌರವ ಹೆಚ್ಚುತ್ತದೆ ಎಂದು ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿದ್ದಾರೆ. ನಿಯಮ 69 ರಡಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಸ್ಪೀಕರ್ ಹೇಳಿದ್ದಾರೆ. ನಿಯಮ 69ರ ಅಡಿ ಚರ್ಚೆ ನಡೆಯಲಿ, ಸರ್ಕಾರ ಚರ್ಚೆಗೆ ಸಿದ್ಧ ಇದೆ ಎಂದು ಸ್ಪೀಕರ್ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೇಗೆ ನಿಭಾಯಿಸಿದ್ದೇವೆ ಅಂತಾ ಗೊತ್ತಿದೆ. ಹಿಂದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿತ್ತು ಅಂತ ಕೂಡಾ ಗೊತ್ತಿದೆ ಎಂದು ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಕೂಡ ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದಾರೆ. ಶಾಲಾ ಕಾಲೇಜು, ಕಾನೂನು ಸುವ್ಯವಸ್ಥೆ ಬಗ್ಗೆ ಜೆಡಿಎಸ್ ಪಕ್ಷ ವಿವರವಾಗಿ ನಿಲುವಳಿ ಸೂಚನೆ ನೀಡಿದೆ. ಬಳಿಕ ಹೆಚ್.ಡಿ. ಕುಮಾರಸ್ವಾಮಿ ಸದನದಲ್ಲಿ ಚರ್ಚೆಗೆ ಅವಕಾಶ ಕೋರಿದ್ದಾರೆ.

ಇದನ್ನೂ ಓದಿ: ಬಜೆಟ್ ಮೇಲಿನ ಚರ್ಚೆಗೆ ಬೊಮ್ಮಾಯಿ ಉತ್ತರ: ಕಿರು ಉದ್ಯಮಿಗಳಿಗೆ ಸಹಾಯಧನ, ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ

ಇದನ್ನೂ ಓದಿ: Hijab Verdict: ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ