AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್ 16 ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಮಹಾ ಕುಂಭಮೇಳದಲ್ಲಿ ಭಾಗಿ

ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಆಗಮಿಸಲಿದ್ದು, ಲಖನೌನಲ್ಲಿ ಇಂದು ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಮಹಾ ಕುಂಭಮೇಳಕ್ಕೆ ಸಚಿವ ನಾರಾಯಣ ಗೌಡ ಆಹ್ವಾನ ನೀಡಿದರು. 

ಅಕ್ಟೋಬರ್ 16 ರಂದು ರಾಜ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಮಹಾ ಕುಂಭಮೇಳದಲ್ಲಿ ಭಾಗಿ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Sep 15, 2022 | 8:49 PM

Share

ಬೆಂಗಳೂರು: ಅಕ್ಟೋಬರ್ 16 ರಂದು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಭೇಟಿ ನೀಡಲಿದ್ದಾರೆ. ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳ (Mahakumbha Mela)ಕ್ಕೆ ಆಗಮಿಸಲಿದ್ದು, ಲಖನೌನಲ್ಲಿ ಇಂದು ಯೋಗಿ ಆದಿತ್ಯನಾಥ್ ಭೇಟಿ ಮಾಡಿ ಮಹಾ ಕುಂಭಮೇಳಕ್ಕೆ ಸಚಿವ ನಾರಾಯಣ ಗೌಡ ಆಹ್ವಾನ ನೀಡಿದರು.  ಅಕ್ಟೋಬರ್ 13 ರಿಂದ 16ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದ್ದು, ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16 ರಂದು ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್​ನಲ್ಲಿ ಕರ್ನಾಟಕದ ಮಹಾಕುಂಭ ಮೇಳ:

ಕಾವೇರಿ, ಹೇಮಾವತಿ, ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 14,15,16 ರಂದು ಮಹಾ ಕುಂಬಾಮೇಳವನ್ನು ಆಯೋಜಿಸಲು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಿರ್ದೇಶನ ನೀಡಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಚಂದ್ರವನದ ಮಹಾಂತ ಶಿವಯೋಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಶ್ರೀಗಳ ಜೊತೆ ಚರ್ಚಿಸಿ ಮಾರ್ಗದರ್ಶನ ಪಡೆಯಲಾಯಿತು. ಅಕ್ಟೋಬರ್ 13ರ ಸಂಜೆಯಿಂದಲೇ ಮಲೇ ಮಹಾದೇಶ್ವರ ದೇವಾಲಯದ ಪ್ರತಿಷ್ಠಾಪನೆ ಕಾರ್ಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ.

ಕುಂಭ ಮೇಳವನ್ನು ಯಶ್ವಸಿಯಾಗಿ ಆಯೋಜಿಸಲಿದ್ದು, ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿ.‌ ಕುಂಭ ಮೇಳಕ್ಕೆ ಆಗಮಿಸುವ ಎಲ್ಲಾ ಸಾಧುಸಂತರು, ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಠದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಚುಂಚಶ್ರೀ ಹೇಳಿದ್ದಾರೆ. ಇಂದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಇನ್ನೂ ಅದ್ದೂರಿಯಾಗಿ ಆಯೋಜಿಸಬೇಕು. ಪ್ರತಿದಿನ ಧಾರ್ಮಿಕ ಕಾರ್ಯಕ್ರಮ, ಧರ್ಮಸಭೆಗಳನ್ನು ಯಶಸ್ವಿಯಾಗಿ ಆಯೋಜಿಸಬೇಕು ಹಾಗೂ ಬರುವ ಭಕ್ತಾದಿಗಳಿಗೆ ಸೂಕ್ತ ಸ್ನಾನಘಟ್ಟ ನಿರ್ಮಿಸಬೇಕೆಂದು ಸುತ್ತೂರುಶ್ರೀಗಳು ಹೇಳಿದರು.

ತ್ರಿವೇಣಿ ಸಂಗಮ ಪವಿತ್ರ ಸ್ಥಳ. ಇಲ್ಲಿನ ಕುಂಭಮೇಳವನ್ನು ಶಾಸ್ತ್ರೋಕ್ತವಾಗಿ ಆಚರಿಸಬೇಕು. ಇದರ ಜೊತೆಗೆ ವಸ್ತು ಪ್ರದರ್ಶನ, ಮೇಳಗಳನ್ನು ನಡೆಸಬೇಕು ಎಂದು ತ್ರಿನೇತ್ರ ಮಹಾಂತಶ್ರೀಗಳು ಸಲಹೆ ನೀಡಿದರು. ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಮಲೆ ಮಹಾದೇಶ್ವರ ಬೆಟ್ಟದಿಂದ ತ್ರಿವೇಣಿ ಸಂಗಮದವರೆಗೂ ಜ್ಯೋತಿಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಶ್ರೀಗಳ ಜೊತೆ ಚರ್ಚಿಸಲಾಯಿತು. ಐದು ಜಿಲ್ಲೆಗಳಲ್ಲಿ ಮಲೆ ಮಹದೇಶ್ವರ ಜ್ಯೋತಿ ಸಂಚರಿಸಲಿದ್ದು, ಅಕ್ಟೋಬರ್ 13 ರಂದು ಕೆಆರ್ ಪೇಟೆಯ ತ್ರಿವೇಣಿ ಸಂಗಮವನ್ನು ತಲುಪಲಿದೆ. ಕಾರ್ಯಕ್ರಮಕ್ಕೆ‌ ಕೇಂದ್ರ‌ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲು ಚರ್ಚಿಸಲಾಯಿತು. ನಾಗಸಾಧು ಸಂತರು ಸೇರಿದಂತೆ ಎಲ್ಲಾ ಧಾರ್ಮಿಕ ಪ್ರತಿನಿಧಿಗಳು, ಜನಪ್ರತಿನಿಧಿಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:42 pm, Thu, 15 September 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!