ಸಚಿವ ವಿ.ಸೋಮಣ್ಣ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಸಮನ್ಸ್ ಜಾರಿ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್

| Updated By: ವಿವೇಕ ಬಿರಾದಾರ

Updated on: Sep 05, 2022 | 2:48 PM

ವಸತಿ ಸಚಿವ ವಿ.ಸೋಮಣ್ಣ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ಎಂದು ಜಾರಿ ಮಾಡಲಾಗಿದ್ದ, ಸಮನ್ಸ್​ನ್ನು ಹೈಕೋರ್ಟ್ ರದ್ದುಪಡಿಸಿ ಪ್ರಕರಣವನ್ನು ಮತ್ತೆ ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾವಣೆ ಮಾಡಿದೆ.

ಸಚಿವ ವಿ.ಸೋಮಣ್ಣ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ: ಸಮನ್ಸ್ ಜಾರಿ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್
ವಸತಿ ಸಚಿವ ವಿ ಸೋಮಣ್ಣ
Follow us on

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ (V Somanna) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ಎಂದು ಜಾರಿ ಮಾಡಲಾಗಿದ್ದ, ಸಮನ್ಸ್​ನ್ನು ಹೈಕೋರ್ಟ್ (Highcount) ರದ್ದುಪಡಿಸಿ ಪ್ರಕರಣವನ್ನು ಮತ್ತೆ ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾವಣೆ ಮಾಡಿದೆ. ತನಿಖೆ ಸಂಬಂಧ ತನಿಖಾಧಿಕಾರಿಯಿಂದ ಸ್ಪಷ್ಟನೆ ಪಡೆಯಬೇಕು. ಹೈಕೋರ್ಟ್ ಸೂಚನೆಗಳನ್ನು ಆಧರಿಸಿ ಕೇಸ್ ಪರಿಗಣಿಸಲು ಹೈಕೋರ್ಟ್ ಸೂಚನೆ ನೀಡಿದೆ.

2013ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಎಂಬುವರು ವಸತಿ ಸಚಿವ ವಿ.ಸೋಮಣ್ಣ ಅವರು ಆದಾಯ ಮೀರಿ ಆಸ್ತಿಗಳಿಕೆ ಮಾಡಿದ್ದಾರೆ ಎಂದು ಖಾಸಗಿ ದೂರು ದಾಖಲಿಸಿದ್ದರು. ದೂರಿನಲ್ಲಿ ಸೋಮಣ್ಣ ಮತ್ತು ಕುಟುಂಬದವರು ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ ಮೌಲ್ಯಕ್ಕಿಂತಲೂ ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ದೂರು ನಿಡಿದ್ದರು.

ಸೋಮಣ್ಣ ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಆದ್ದರಿಂದ, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

ಈ ಸಂಬಂಧ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು‌. ವಿ. ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕೋರ್ಟ್ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್​​ನ್ನು ತಿರಸ್ಕರಿಸಿ ಹೈಕೋರ್ಟ್ ಸೂಚನೆಗಳನ್ನು ಆಧರಿಸಿ ಕೇಸ್ ಪರಿಗಣಿಸುವಂತೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:45 pm, Mon, 5 September 22