AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗರೆಡ್ಡಿ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 14, 2023 | 4:38 PM

Share

ಬೆಂಗಳೂರು, ಸೆಪ್ಟೆಂಬರ್​ 14: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ್ದಾರೆ. ನಗರದಲ್ಲಿ ಬಸ್ ಸಮಸ್ಯೆ, ಟಿಟಿಎಂಸಿಯಲ್ಲಿ ಇರಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮ

ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ‌ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್​​ಗಳನ್ನು ಬಿಡಲು ನಿರ್ಧರಿಸಿದ್ದೇವೆ. ಶಾಸಕ ಎಸ್.ಟಿ.ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ: ಶಾಸಕ ಎಸ್​.ಟಿ.ಸೋಮಶೇಖರ್

ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಪ್ರತಿಕ್ರಿಯಿಸಿದ್ದು, ಭಾರತೀಯ ಜನತಾ ಪಕ್ಷದಲ್ಲೇ ಇದ್ದೇನೆ, ನಾನು ಸೈಲೆಂಟ್ ಆಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಯೋಚನೆ ಇಲ್ಲ. ರಾಮಲಿಂಗಾರೆಡ್ಡಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು

ಬಸ್ ನಿಲ್ದಾಣಗಳ ಸಮಸ್ಯೆ ಬಗ್ಗೆ ಹೇಳಲು ಸಚಿವರನ್ನು ಕರೆಸಿದ್ದೆವು. ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಜನವರಿಗೆ ಕೆಂಗೇರಿ ಟಿಟಿಎಂಸಿ ಉದ್ಘಾಟನೆ ಮಾಡೋಣ ಎಂದಿದ್ದಾರೆ ಎಂದರು.

ಪಕ್ಷದ ಕಾರ್ಯಕ್ರದಲ್ಲಿ ಸೋಮಶೇಖರ್ ಕಾಣಿಸಿಕೊಳ್ಳದ ವಿಚಾರವಾಗಿ ಮಾತನಾಡಿದ ಅವರು, ವೈಯಕ್ತಿಕ ಕಾರಣದಿಂದ ಪಕ್ಷದ ಕಾರ್ಯಕ್ರಮಗಳಿಗೆ ಗೈರಾಗಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Thu, 14 September 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?