ವೈಕುಂಠ ಏಕಾದಶಿ: ದೇವಸ್ಥಾನಗಳಿಗೆ ಭಕ್ತರ ದಂಡು, ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ತೆರಳುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಬೆಂಗಳೂರು, ಜನವರಿ 10: ಶುಕ್ರವಾರ ವೈಕುಂಠ ಏಕಾದಶಿ (Vaikuntha Ekadashi) ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಪ್ರಮುಖವಾಗಿ, ಬೆಂಗಳೂರಿನ (Bengaluru) ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧಿಸಲಾಗಿದೆ.
ವಾಹನ ಸಂಚಾರ ನಿರ್ಬಂಧ
ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ ಮತ್ತು ರಾಮಮೂರ್ತಿನಗರ ಮುಖ್ಯರಸ್ತೆಯಿಂದ ಕಲ್ಕೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಪೂಜಾ ಮತ್ತು ರಥೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
- ಕೆ.ಆರ್.ಪುರ ಕಾ ಮತ್ತು ಸು ಪೊಲೀಸ್ ಠಾಣೆ ರಸ್ತೆ
- ರಾಮಮೂರ್ತಿನಗರ ಮುಖ್ಯರಸ್ತೆಯಿಂದ ಕಲ್ಕೆರೆ ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
- ಕೆ.ಆರ್.ಪುರ ಗ್ರಾಮದ ಒಳಗೆ ಹೋಗುವ ವಾಹನ ಸವಾರರು ಜಿ.ಆರ್.ಟಿ. ಕ್ರಾಸ್ ಮತ್ತು ಸರ್ಕಾರಿ ಕಾಲೇಜ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.
- ಕಲ್ಕೆರೆ ಕಡೆ ಹೋಗುವ ಮತ್ತು ಬರುವ ವಾಹನ ಸವಾರರು ರಾಮಮೂರ್ತಿನಗರ ಹಳೆ ಪೋಸ್ಟ್ ಆಫೀಸ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.
ಜೆ.ಪಿ ನಗರದ ಶ್ರೀ.ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳುತ್ತಿದ್ದಾರೆ. ಹೀಗಾಗಿ ಪಾದಚಾರಿಗಳ ಹಾಗೂ ವಾಹನ ಸವಾರರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.
ಇದನ್ನೂ ಓದಿ: ವೈಕುಂಠ ಏಕಾದಶಿಯಂದು ಈ ವಸ್ತುಗಳನ್ನು ದಾನ ಮಾಡಿ
ವಾಹನ ಸಂಚಾರ ನಿರ್ಬಂಧ
- 09ನೇ ಕ್ರಾಸ್ ರಸ್ತೆಯ 21ನೇ ಮುಖ್ಯ ರಸ್ತೆ ಜಂಕನ್ ನಿಂದ 17ನೇ ಮುಖ್ಯ ರಸ್ತೆ ಜಂಕನ್ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
- ಲೆಜೆಂಡ್ ಜಂಕ್ಷನ್ನ 16ನೇ ಅಡ್ಡರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ.
ಪರ್ಯಾಯ ಮಾರ್ಗಗಳು:
- ಆರ್.ವಿ.ಡೆಂಟಲ್ ಕಡೆಯಿಂದ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳು 23ನೇ ಕ್ರಾಸ್‌ನಲ್ಲಿ ಎಡ ತಿರುವು ಪಡೆದು ದುರ್ಗಾಪರಮೇಶ್ವರಿ ಆಟದ ಮೈದಾನದಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ದೇವಸ್ಥಾನಕ್ಕೆ ಬರಬೇಕು.
- ಆರ್.ವಿ ಡೆಂಟಲ್ ಕಡೆಯಿಂದ 08ನೇ ಮುಖ್ಯ ರಸ್ತೆ 9ನೇ ಕ್ಲಾಸ್ ರಸ್ತೆ ಜಂಕನ್ ಕಡೆಗೆ ಸಂಚರಿಸುವ ವಾಹನ ಸವಾರರು 21ನೇ ಮುಖ್ಯ ರಸ್ತೆಯಲ್ಲಿ ಎಡ ತಿರುವು ಪಡೆದು 7ನೇ ಕ್ರಾಸ್ ರಸ್ತೆಯ ಮುಲಕ ಮುಂದಕ್ಕೆ ಚಲಿಸಬಹುದು.
- 8ನೇ ಮುಖ್ಯ ರಸ್ತೆ 9ನೇ ಕ್ರಾಸ್ ರಸ್ತೆ ಜಂಕನ್ ಕಡೆಯಿಂದ ಆರ್.ವಿ. ಡೆಂಟಲ್ಸ್ ಕಡೆ ಸಂಚರಿಸುವ ವಾಹನ ಸವಾರರು 17ನೇ ಮುಖ್ಯ ರಸ್ತೆ ಜಂಕನ್‌ನಲ್ಲಿ ಬಲ ತಿರುವು ಪಡೆದು ಮುಂದಕ್ಕೆ ಚಲಿಸಬಹುದು.
- ಬಂಗಾರಪೇಟೆ ಮುಖ್ಯ ರಸ್ತೆಯಿಂದ 15 ನೇ ಕ್ರಾಸ್ ಕಡೆಗೆ ಬಲಕ್ಕೆ ಚಲಿಸಿ ನಂತರ 2ನೇ ಮುಖ್ಯ ವೈಯಾಲಿಕಾವಲ್ ಕಡೆಗೆ ಎಡಕ್ಕೆ ಚಲಿಸಿ ಭಾಷ್ಯಂ ವೃತ್ತದ ಮೂಲಕ ಮುಂದೆ ಹೋಗಬಹುದು.
- ವಾಹನಗಳು ಭಾಷ್ಯಂ ವೃತ್ತದಿಂದ ಬಂಗಾರಪೇಟೆ ಮುಖ್ಯರಸ್ತೆ ಕಡೆಗೆ 2ನೇ ಮುಖ್ಯರಸ್ತೆ ಮೂಲಕ ಸಾಗಿ 14ನೇ ಅಡ್ಡರಸ್ತೆ ಕಡೆಗೆ ಬಲಕ್ಕೆ ತೆಗೆದುಕೊಂಡು 9ನೇ ಮುಖ್ಯರಸ್ತೆಯಲ್ಲಿ ಬಲಕ್ಕೆ ಚಲಿಸಿ ಎಡಕ್ಕೆ ತೆಗೆದುಕೊಂಡು ಜೆಡಿ ಪಾರ್ಕ್ ರಸ್ತೆಗೆ 16ನೇ ಅಡ್ಡರಸ್ತೆಯನ್ನು ತಲುಪಬಹುದು.
ಮಲ್ಲೇಶ್ವರಂನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿ ಸಂಚಾರ ಸಲಹೆ
ಮಲ್ಲೇಶ್ವರಂನ ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತಾಧಿಗಳು, ಗಣ್ಯ ವ್ಯಕ್ತಿಗಳು ಸಾರ್ವಜನಿಕರು ದೇವರ ದರ್ಶನಕ್ಕೆ ಬರುತ್ತಿದ್ದಾರೆ. ಇದರಿಂದ ಹೆಚ್ಚಿನ ದಟ್ಟಣೆ ಉಂಟಾಗಿ ಸಂಚಾರ ನಿಧಾನಗತಿಯಲ್ಲಿದೆ. ವೆಸ್ಟ್ ಅಪ್ ಕಾರ್ಡ್ ರಸ್ತೆಯಲ್ಲಿ ಸೋಪ್ ಪ್ಯಾಕ್ಷರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿಲೇಔಟ್, ಮಹಾಲಕ್ಷ್ಮಿ ಲೇಔಟ್ ಕಡೆ ಹೋಗುವಂತಹ ವಾಹನಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಬೇಕು.
- ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿ ಸೋಪ್ ಪ್ಯಾಕ್ಟರಿ ಜಂಕ್ಷನ್‌ನಿಂದ ಮಹಾಲಕ್ಷ್ಮಿ ಮೆಟ್ರೋ ಕಡೆಗೆ ಸಾಗುವ ವಾಹನಗಳು: ಸೋಪ್ ಪ್ಯಾಕ್ಟರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್‌ನಲ್ಲಿ ಕಾರ್ಡ್ ರಸ್ತೆಗೆ ಸೇರಬೇಕು.
- ವೆಸ್ಟ್ ಆಪ್ ಕಾರ್ಡ್ ರಸ್ತೆಯಲ್ಲಿ ಸೋಪ್ ಪ್ಯಾಕ್ಟರಿ ಜಂಕ್ಷನ್‌ನಿಂದ ಮಹಾಲಕ್ಷ್ಮಿ ಮೆಟ್ರೋವರೆಗೆ ಪಿಕ್ ಅಪ್ ಮತ್ತು ಡ್ರಾಪ್ ಮಾಡುವುದನ್ನು ನಿಷೇದಿಸಲಾಗಿದೆ.
- ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೋ, ಕ್ಯಾಬ್ ಚಾಲಕರು ಮತ್ತು ಸಾರ್ವಜನಿಕರು ಮಹಾಲಕ್ಷ್ಮಿ ಮೆಟ್ರೋದಿಂದ ಸೋಪ್ ಪ್ಯಾಕ್ಟರಿ ಕಡೆಗೆ ಹೋಗುವ ರಸ್ತೆಯಲ್ಲಿ ಪಿಕ್ ಅಪ್ ಡ್ರಾಪ್ ಮಾಡಬಹುದಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:49 am, Fri, 10 January 25