ವೈಕುಂಠ ಏಕಾದಶಿ: ಬೆಂಗಳೂರಿನಲ್ಲಿರುವ ವೆಂಕಟೇಶ್ವರ ದೇವಸ್ಥಾನಗಳಿಗೆ ಒಂದು ಲಕ್ಷ ಲಡ್ಡು ವಿತರಣೆ
ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ಸಾಯಿ ಪಾರ್ಟಿ ಹಾಲ್ನಲ್ಲಿ ಭಕ್ತರಿಗೆ 1ಲಕ್ಷ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಎಂಎಲ್ಸಿ, ಶರವಣ ಚಾರೀಟೇಬಲ್ ಟ್ರಸ್ಟ್ ಸಂಸ್ಥಾಪಕ ಟಿ.ಎ.ಶರವಣ ಅವರು ಚಾಲನೆ ನೀಡಿದರು. ಬೆಂಗಳೂರು ನಗರದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಗಳಿಗೆ ಲಡ್ಡು ನೀಡಲಾಗುತ್ತಿದ್ದು, ಆಗಮಿಸಿದ ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಲಾಗುತ್ತದೆ.

ಬೆಂಗಳೂರು, ಡಿ.21: ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈಕುಂಠ ಏಕಾದಶಿ (Vaikuntha Ekadashi) ಪ್ರಯುಕ್ತ ಶ್ರೀ ಸಾಯಿ ಪಾರ್ಟಿ ಹಾಲ್ನಲ್ಲಿ ಭಕ್ತರಿಗೆ 1ಲಕ್ಷ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಂಎಲ್ಸಿ, ಶರವಣ ಚಾರೀಟೇಬಲ್ ಟ್ರಸ್ಟ್ ಸಂಸ್ಥಾಪಕ ಟಿ.ಎ.ಶರವಣ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಟಿ.ಎ.ಶರವಣ, ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆಗೆಯಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ ಇದೆ. ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಎಂಬ ಬಿರುದಾಂಕಿತ ವೈಕುಂಠ ಏಕಾದಶಿಯಂದು ಶ್ರೀ ವೆಂಕಟೇಶ್ವರ ದರ್ಶನ ಪಡೆಯಬೇಕು, ತಿರುಮಲ ತಿರುಪತಿಗೆ ಹೋಗಬೇಕು, ಲಡ್ಡು ಪ್ರಸಾದ ಸ್ವೀಕರಿಸಬೇಕು ಎಂಬ ಬಯಕೆ ಭಕ್ತಿ, ಎಲ್ಲರಿಗೂ ಇರುತ್ತದೆ ಎಂದರು.
ಇದನ್ನೂ ಓದಿ: ಶುಕ್ರವಾರ ಸಂಜೆ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ
100 ಬಾಣಸಿಗರ ಹಗಲುರಾತ್ರಿ ಏನ್ನದೇ ತಿರುಪತಿ ಲಡ್ಡು ಮಾದರಿಯಲ್ಲಿ ಒಂದು ಲಕ್ಷ ಲಡ್ಡು ತಯಾರಿಕೆಯಲ್ಲಿ ಮಗ್ನರಾಗಿದ್ದಾರೆ. ಶುದ್ದ ತುಪ್ಪ, ಗೋಡಂಬಿ, ದಾಕ್ಷಿ, ಕಡಲೆಬೇಳೆ ಬಳಸಿ ತಯಾರಿಸಲಾಗುತ್ತಿದೆ. ಈ ಲಡ್ಡುಗಳನ್ನು ಶ್ರೀ ವೆಂಕಟೇಶ್ವರ ದೇವಸ್ಥಾನಗಳಿಗೆ ವಿತರಿಸಲಾಗುತ್ತದೆ. ಆ ದೇವಸ್ಥಾನಗಳಿಗೆ ಆಗಮಿಸು ಭಕ್ತರಿಗೆ ವಿತರಿಸಲಾಗುತ್ತದೆ ಎಂದರು.
ತಿರುಪತಿ ತಿಮ್ಮಪ್ಪ, ಗೋವಿಂದ, ಹರೇ ಶ್ರೀನಿವಾಸ, ವೆಂಕಟೇಶ್ವರ, ಏಳು ಬೆಟ್ಟದ ಒಡೆಯ ಭಕ್ತರು ಅವರವರ ಭಕ್ತಿಭಾವನೆಗೆ ಸ್ಮರಣೆ ಮಾಡುತ್ತಾರೆ. ತಿರುಪತಿ ತಿಮ್ಮಪ್ಪ ನಂಬಿದ ಭಕ್ತರಿಗೆ ಎಂದು ಸಂಕಷ್ಟಗಳು ಬರುವುದಿಲ್ಲ. ಇಂದು ಜನರು ಬಹಳ ಅತಂಕದಲ್ಲಿ ಇದ್ದಾರೆ ಕೊರೋನ ಎಂಬ ಮಹಾಮಾರಿ ಮತ್ತೇ ತನ್ನ ಅರ್ಭಟ ತೋರಿಸುತ್ತಿದೆ ಎಂಬ ವರದಿಗಳು ಬರುತ್ತಿದೆ. ಸಕಲ ಸಂಕಷ್ಟಗಳು ದೂರವಾಗಲಿ, ರೋಗರುಜಿನಗಳು ಮುಕ್ತವಾಗಲಿ ಮತ್ತು ನಾಡಿನ ಸಮಸ್ತ ಜನರಿಗೆ ಸುಖ, ಶಾಂತಿ ನೆಮ್ಮದ್ದಿ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:59 pm, Thu, 21 December 23