AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ಪ್ರೇಮಿಗಳ ದಿನ ಅಂಗವಾಗಿ ಬೆಂಗಳೂರಿನಿಂದ 2.9 ಕೋಟಿ ಗುಲಾಬಿ ರಫ್ತು

ಪ್ರೇಮಿಗಳ ದಿನ ಅಂಗವಾಗಿ ಈ ವರ್ಷವೂ ಕೋಟ್ಯಾಂತರ ಗುಲಾಬಿಗಳು ವಿದೇಶಗಳಿಗೆ ಹಾರಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 12,22,860 ಕೆಜಿ ತೂಕದ ಸುಮಾರು 2.9 ಕೋಟಿ ಗುಲಾಬಿ ಹೂಗಳು ಹೊರ ರಾಜ್ಯ ಮತ್ತು ವಿದೇಶಕ್ಕೆ ರಫ್ತಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ108 ರಷ್ಟು ರಫ್ತು ಹೆಚ್ಚಾಗಿದೆ.

Valentine's Day: ಪ್ರೇಮಿಗಳ ದಿನ ಅಂಗವಾಗಿ ಬೆಂಗಳೂರಿನಿಂದ 2.9 ಕೋಟಿ ಗುಲಾಬಿ ರಫ್ತು
ಗುಲಾಬಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 15, 2024 | 8:43 AM

Share

ಬೆಂಗಳೂರು, ಫೆಬ್ರವರಿ 15: ಪ್ರೇಮಿಗಳ ದಿನ (Valentine’s Day) ಅಂಗವಾಗಿ ಈ ವರ್ಷವೂ ಕೋಟ್ಯಾಂತರ ಗುಲಾಬಿಗಳು (Rose) ವಿದೇಶಗಳಿಗೆ ಹಾರಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಮೂಲಕ 12,22,860 ಕೆಜಿ ತೂಕದ ಸುಮಾರು 2.9 ಕೋಟಿ ಗುಲಾಬಿ ಹೂಗಳು ಹೊರ ರಾಜ್ಯ ಮತ್ತು ವಿದೇಶಕ್ಕೆ ರಫ್ತಾಗಿವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್​ (BIAL) ವರದಿ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ108 ರಷ್ಟು ರಫ್ತು ಹೆಚ್ಚಾಗಿದೆ. ಇನ್ನು ಹೊರ ರಾಜ್ಯಗಳಿಗೆ 2 ಕೋಟಿ ಗುಲಾಬಿ ಹೂಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ಶೇ 148 ರಷ್ಟು ಹೆಚ್ಚಳವಾಗಿದೆ. ಗುಲಾಬಿ ಹೂಗಳು ಬೆಂಗಳೂರಿನಿಂದ, ಕೌಲಾಲಂಪುರ್ (ಮಲೇಷ್ಯಾ), ಸಿಂಗಾಪುರ್, ಕುವೈತ್, ಮನಿಲಾ (ಫಿಲಿಪೈನ್ಸ್), ಮತ್ತು ಶಾರ್ಜಾ (ಯುಎಇ) ದೇಶಗಳಿಗೆ ರಪ್ತಾಗುತ್ತವೆ. ಇನ್ನು ದೆಹಲಿ, ಕೋಲ್ಕತ್ತಾ, ಮುಂಬೈ, ಗುವಾಹಟಿ ಮತ್ತು ಜೈಪುರ ರಾಜ್ಯಗಳಿಗೆ ರಫ್ತಾಗುತ್ತವೆ.

ಬೆಂಗಳೂರಿನ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರಕ್ಕೆ ಮುಖ್ಯವಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಿಂದ ಗುಣಮಟ್ಟದ ಗುಲಾಬಿಗಳನ್ನು ಕಳುಹಿಸಲಾಗುತ್ತದೆ. ಗುಲಾಬಿ ಬೆಳೆಗೆ ತೋಟಗಾರಿಕೆ ಇಲಾಖೆ ನೆರವಿನಿಂದ ಅನೇಕ ರೈತರು ಸಬ್ಸಿಡಿ ಆಧಾರದಲ್ಲಿ ಹಸಿರುಮನೆಗಳನ್ನು ನಿರ್ಮಿಸಿಕೊಂಡಿದ್ದು, ಪ್ರತಿ ವರ್ಷ ಲಕ್ಷಾಂತರ ರೂಪಾಯಿ ಲಾಭ ಕಾಣುತ್ತಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ಹೆಚ್ಚಿದ ಗುಲಾಬಿ ಡಿಮ್ಯಾಂಡ್​! ಕೋಲಾರದ ತಾಜ್​ ಮಹಲ್​ ತಳಿ ಕೆಂಪು ಗುಲಾಬಿ ಬೀರುತ್ತಿದೆ ಕಂಪು!

ಅತಿಹೆಚ್ಚು ಗುಲಾಬಿ ಹೂ ಬೆಳೆಯುವ ರಾಜ್ಯ

ಭಾರತವು ಅತಿದೊಡ್ಡ ಹೂಗಳ ಉತ್ಪಾದಕ ರಾಷ್ಟ್ರಗಳಲ್ಲಿ ಒಂದು. 2021-22ನೇ ಸಾಲಿನಲ್ಲಿ ಭಾರತವು 23,597.17ಎಂಟಿ ಅಷ್ಟು ವಿವಿಧ ಹೂಗಳ ಉತ್ಪನ್ನಗಳನ್ನು ಜಗತ್ತಿನ ವಿವಿಧ ರಾಷ್ಟ್ರಗಳಿಗೆ ರಫ್ತು ಮಾಡಿತ್ತು. ಇದರ ಒಟ್ಟು ಮೌಲ್ಯ 771.41 ಕೋಟಿಗಳಷ್ಟಾಗಿತ್ತು. ಅದೇ ವರ್ಷದಲ್ಲಿ, ಭಾರತವು 2.1 ಮಿಲಿಯನ್ ಟನ್​ಗಳಷ್ಟು ಸಡಿಲ ಹೂವುಗಳನ್ನು ಮತ್ತು 0.8 ಮಿಲಿಯನ್ ಟನ್​ಗಳಷ್ಟು ಕತ್ತರಿಸಿದ ಹೂವುಗಳನ್ನು ಉತ್ಪಾದಿಸಿತ್ತು. ಭಾರತದಲ್ಲಿ ಅತಿ ಹೆಚ್ಚಿನ ಗುಲಾಬಿಹೂ ಬೆಳೆಯುವ ರಾಜ್ಯಗಳೆಂದರೆ ಕರ್ನಾಟಕ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ, ಛತ್ತೀಸ್ಗಢ, ಒರಿಸ್ಸಾ, ಅಸ್ಸಾಂ ಮತ್ತು ತೆಲಂಗಾಣ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Thu, 15 February 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ