ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: 10 ಕೋಟಿ ವಶಕ್ಕೆ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ 3 ಬೇಡಿಕೆ ಇಟ್ಟ ಶ್ರೀರಾಮುಲು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ರಾತ್ರಿಯಿಡಿ ಧರಣಿ ನಡೆಸಿ ಸರ್ಕಾರದ ಮುಂದೆ ಮೂರು ಬೇಡಿಕೆಗಳನ್ನು ಇಟ್ಟಿದ್ದಾರೆ. ಮತ್ತೊಂದೆಡೆ ಎಸ್​ಐಟಿ ಅಧಿಕಾರಿಗಳು 193 ಬ್ಯಾಂಕ್ ಖಾತೆಗಳಿಂದ 10 ಕೋಟಿ ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: 10 ಕೋಟಿ ವಶಕ್ಕೆ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ 3 ಬೇಡಿಕೆ ಇಟ್ಟ ಶ್ರೀರಾಮುಲು
ಪ್ರತಿಭಟನೆ ನಡೆಸಿ ಸರ್ಕಾರಕ್ಕೆ 3 ಬೇಡಿಕೆ ಇಟ್ಟ ಶ್ರೀರಾಮುಲು
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Jun 29, 2024 | 9:25 AM

ಬೆಂಗಳೂರು, ಜೂನ್.29: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Maharshi Valmiki Development Corp Ltd) ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ SIT ಅಧಿಕಾರಿಗಳು (SIT Officials) ಮತ್ತೆ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಬಾರ್, ಚಿನ್ನದ ಅಂಗಡಿ ಖಾತೆಗಳಿಗೆ ವರ್ಗಾವಣೆ ಆಗಿದ್ದ 10 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದೆಡೆ ಇದೇ ಪ್ರಕರಣ ಸಂಬಂಧ ಬಳ್ಳಾರಿ ಡಿಸಿ ಕಚೇರಿ ಎದುರು ಮಾಜಿ ಸಚಿವ ಶ್ರೀರಾಮುಲುರಿಂದ (B. Sriramulu) ಆಹೋರಾತ್ರಿ ಧರಣಿ ನಡೆಸಿದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ SIT ಅಧಿಕಾರಿಗಳು 193 ಬ್ಯಾಂಕ್ ಖಾತೆಗಳಿಂದ 10 ಕೋಟಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಬಾರ್, ಚಿನ್ನದ ಅಂಗಡಿ ಖಾತೆಗಳಿಗೆ ವರ್ಗಾವಣೆ ಮಾಡಿ ವಿತ್ ಡ್ರಾ ಮಾಡಿಕೊಂಡಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೆ ಒಟ್ಟು 28 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.

ಶ್ರೀರಾಮುಲು ಪ್ರತಿಭಟನೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಶ್ರೀರಾಮುಲು ರಾತ್ರಿಯಿಡಿ ಬಳ್ಳಾರಿ ಡಿಸಿ ಕಚೇರಿ ಮುಂದೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಆಹೋರಾತ್ರಿ ಧರಣಿ ಮಾಡಿ ನಿರಂತರವಾಗಿ 24 ಗಂಟೆ ಪ್ರತಿಭಟನೆ ನಡೆಸಿದರು. ಶ್ರೀರಾಮುಲು ಪ್ರತಿಭಟನೆ ವೇಳೆ ರಾಜ್ಯ ಸರ್ಕಾರಕ್ಕೆ ಮೂರು ಬೇಡಿಕೆ ಇಟ್ಟಿದ್ದಾರೆ. ಮೊದಲ ಬೇಡಿಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ರಿಕವರಿ ಮಾಡಬೇಕು. ಎರಡನೇ ಬೇಡಿಕೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನ ಬಂಧಿಸಬೇಕು. ಮೂರನೇ ಬೇಡಿಕೆ ಪ್ರಕರಣ ಸಿಬಿಐಗೆ ವಹಿಸಬೇಕೆಂದು. ಇದ್ಯಾವುದೂ ಮಾಡಲು ಆಗಲಿಲ್ಲ ಎಂದ್ರೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮನೆಗೆ ಹೋಗಲಿ. ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಮಾಡಲು ಬಿಡೋದಿಲ್ಲ ಎಂದು ಶ್ರೀರಾಮುಲು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ: ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗುತ್ತಿದೆ ಡ್ರಗ್ಸ್​, ಗಾಂಜಾ! ಈ ಕುರಿತು ವಿಶೇಷ ವರದಿ ಇಲ್ಲಿದೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

ಇತ್ತೀಚೆಗೆ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದ ಹಿಂದೆ ಹನಿಟ್ರ್ಯಾಪ್‌ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಆಂಧ್ರಪ್ರದೇಶದ ಸತ್ಯನಾರಾಯಣ ವರ್ಮ ಎಂಬಾತ ಈ ಪ್ರಕರಣದ ಸೂತ್ರಧಾರ. ವರ್ಮ ಒಬ್ಬ ವೃತ್ತಿಪರ ಕೇಡಿ ಎನ್ನುವ ಮಾಹಿತಿಯಿದೆ. ಹಲವು ರಾಜ್ಯಗಳಲ್ಲಿ ನಡೆದ ಅಕ್ರಮಗಳಲ್ಲಿ ಈತನ ಪಾತ್ರವಿದೆ ಎಂಬ ಆರೋಪಗಳು ಕೇಳಿಬಂದಿವೆ. ಈತನಿಗೆ ನಮ್ಮ ರಾಜ್ಯದ ಸಚಿವರು, ಶಾಸಕರು, ಅಧಿಕಾರಿಗಳು ಸಹಕರಿಸಿದ್ದಾರೆ. ನಿಗಮಕ್ಕೆ ಸೇರಿದ 187 ಕೋಟಿ ರೂ.ಗಳನ್ನು ತೆಲಂಗಾಣ, ಆಂಧ್ರ ಪ್ರದೇಶ, ಕರ್ನಾಟಕದಲ್ಲಿ ಚುನಾವಣೆಗಾಗಿ ಬಳಕೆ ಮಾಡಲಾಗಿದೆ ಎಂದು ಸಿ,ಟಿ.ರವಿ ಆರೋಪಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ