ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​; ಡೆತ್​ನೋಟ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ಅಮಾನತು

ಶಿವಮೊಗ್ಗದ (Shivamogga) ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ಡೆತ್​ನೋಟ್​ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌(52) ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​; ಡೆತ್​ನೋಟ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ಅಮಾನತು
ಮೃತ ಚಂದ್ರಶೇಖರ್​ ಬರೆದಿಟ್ಟ ಡೆತ್​ನೋಟ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ಅಮಾನತು
Edited By:

Updated on: May 29, 2024 | 6:49 PM

ಬೆಂಗಳೂರು, ಮೇ.29: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಧೀಕ್ಷಕ ಚಂದ್ರಶೇಖರ್‌(52) ಅವರು ಶಿವಮೊಗ್ಗದ (Shivamogga) ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ಡೆತ್​ನೋಟ್​ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ-ಸಚಿವ ನಾಗೇಂದ್ರ

ಈ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ‘ ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ. ನಮ್ಮ ಸರ್ಕಾರದ ಹಣ ನಾವು ದುರುಪಯೋಗ ಆಗಲು ಬಿಡುವುದಿಲ್ಲ. 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಾಸ್  ಪಡೆಯುತ್ತಿದ್ದಾರೆ. ಜೊತೆಗೆ ಈ ಪ್ರಕರಣವನ್ನ ರಾಜ್ಯ ಸರ್ಕಾರ ಮೊನ್ನೆಯೇ ಸಿಐಡಿಗೆ ವಹಿಸಿದ್ದು, ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ ಎಂದರು.

ಇದನ್ನೂ ಓದಿ:ಡೆತ್​ನೋಟ್​ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ; ಮೂವರು ಅಧಿಕಾರಿಗಳ ಮೇಲೆ ಎಫ್​ಐಆರ್​

ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ತನಿಖೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಸರ್ಕಾರದ ಪೂರ್ವ ಅನುಮತಿ ಪಡೆದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಂ.ಡಿ , ಸಿಇಓ ಹಾಗೂ ಎಲ್ಲಾ ನಿರ್ದೇಶಕರು ಸೇರಿದಂತೆ 6 ಜನ ಬ್ಯಾಂಕ್ ಅಧಿಕಾರಿಗಳ ವಿರುದ್ಧ FIR ದಾಖಲಿಸಿದ್ದಾರೆ.  ಎಫ್. ಎಸ್. ಎಲ್ ಮತ್ತು ಸಿ. ಐ. ಡಿ ವರದಿ ಬಂದ ತಕ್ಷಣವೇ ಕಾನೂನು ರೀತಿಯಲ್ಲಿ ಎಲ್ಲರಿಗೂ ಕಠಿಣ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಅಮಾನತು ಬೆನ್ನಲ್ಲೇ ವಾಲ್ಮೀಕಿ ನಿಗಮ ಎಂಡಿಯಾಗಿ ಮತ್ತೊಬ್ಬರನ್ನ ನೇಮಿಸಿ ಆದೇಶ

ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ ಅಮಾನತು ಬೆನ್ನಲ್ಲೇ ಮತ್ತೊಬ್ಬ ಎಂಡಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೌದು, ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನ ಪ್ರಭಾರಿ ಎಂಡಿ ಆಗಿ ನೇಮಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ರಾಜ್ ಕುಮಾರ್, ಈಗ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಹೆಚ್ಚುವರಿ ಪ್ರಭಾರಿಯಾಗಿ ನೇಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Wed, 29 May 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us