ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಂದಿತಾ ಶರ್ಮ ಈ ಸ್ಥಾನವನ್ನು ಅಲಂಕರಿಸುವ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ
ವಂದಿತಾ ಶರ್ಮಾ
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

May 27, 2022 | 8:48 PM

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿಯಾಗಿದ್ದ ಪಿ. ರವಿಕುಮಾರ್​ ನಿವೃತ್ತ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. 1986ನೇ ಬ್ಯಾಚ್​ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಅವರು ನವೆಂಬರ್ 2023 ರಲ್ಲಿ ನಿವೃತ್ತರಾಗಲಿದ್ದಾರೆ.

ಇದನ್ನೂ ಓದಿ: ಪತ್ನಿಯ ಅಜ್ಜಿ ಮನೆಯಲ್ಲಿ ಶಿವಣ್ಣ; ಶಿರಸಿಯ ಹತ್ತಿರ ಮಳಲ್​ಗಾಂವ್​ನಲ್ಲಿ ಫ್ಯಾಮಿಲಿ ಫೋಟೋ

ಕರ್ನಾಟಕದ ಮೊದಲ ಮುಖ್ಯ ಕಾರ್ಯದರ್ಶಿ ತೆರೇಸಾ ಭಟ್ಟಾಚಾರ್ಯ ಆನಂತರ ಮಾಲತಿ ದಾಸ್ ಅವರು ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. 2017ರಲ್ಲಿ ಕೆ. ರತ್ನಪ್ರಭಾ ಕೂಡ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ವಂದಿತಾ ಶರ್ಮ ಈ ಸ್ಥಾನವನ್ನು ಅಲಂಕರಿಸುವ ನಾಲ್ಕನೇ ಮಹಿಳೆಯಾಗಿದ್ದಾರೆ. ಇನ್ನೊಂದು ವಿಶೇಷ ಏನೆಂದರೆ ಇವರ ಪತಿ ಐ.ಎಸ್​.ಎನ್ ಪ್ರಸಾದ್ ಕೂಡ ಐಎಎಸ್ ಅಧಿಕಾರಿಯಾಗಿ ಸೇವೆಸಲ್ಲಿಸುತ್ತಿದ್ದಾರೆ. ಅವರು ಈಗ ಕರ್ನಾಟಕದ ಹಣಕಾಸು ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಪತಿ ಪ್ರಸಾದ್ ಅವರು ಹೆಂಡತಿ ವಂದಿತಾ ಶರ್ಮ ಅವರ ಕೆಳಗೆ ಕೆಲಸ ಮಾಡುವುದು ವಿಶೇಷ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada