AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಾ-ಬೇಡ್ತಿ ನದಿ ಜೋಡಣೆ: ವಿವಾದದ ನಡುವೆಯೂ ಯೋಜನೆ ಬಗ್ಗೆ ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

ವರದಾ-ಬೇಡ್ತಿ ನದಿ ಜೋಡಣೆಯ ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಲು ಹಾಗೂ ಯೋಜನೆಯ ಚರ್ಚೆಗೆ ಜನಪ್ರತಿನಿಧಿಗಳು ಮತ್ತು ಹೋರಾಟಗಾರರ ಸಭೆ ಕರೆಯುವಂತೆ ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಆಗುವುದಿಲ್ಲ ಎಂದೂ ಅವರು ಉಲ್ಲೇಖಿಸಿದ್ದಾರೆ.

ವರದಾ-ಬೇಡ್ತಿ ನದಿ ಜೋಡಣೆ: ವಿವಾದದ ನಡುವೆಯೂ ಯೋಜನೆ ಬಗ್ಗೆ ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ಸಿಎಂಗೆ ಬೊಮ್ಮಾಯಿ ಪತ್ರImage Credit source: PTI and Tv9 Kannada
ಪ್ರಸನ್ನ ಹೆಗಡೆ
|

Updated on:Oct 01, 2026 | 3:43 PM

Share

ಬೆಂಗಳೂರು, ಅಕ್ಟೋಬರ್​​ 01: ಉತ್ತರ ಕನ್ನಡ ಜಿಲ್ಲೆಯ ಜೀವನದಿಗಳ ಜೋಡಣೆ ಯೋಜನೆ ಖಂಡಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಅಕ್ಟೋಬರ್​​ 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್​​ ಹೋರಾಟಕ್ಕೆ ಕರೆ ನೀಡಲಾಗಿದೆ. ಈ ನಡುವೆಯೇ ವರದಾ-ಬೇಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕು. ಆ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಹಾವೇರಿ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದ್ಯಸ್ಯರು ಮತ್ತು ಇತರ ಪ್ರಮುಖರು ಹೋರಾಟಗಾರರ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಜಲ ಸಪನ್ಮೂಲ ಸಚಿವ ಎನ್. ಚಲುವರಾಯ ಸ್ವಾಮಿ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

‘ಬೇಡ್ತಿ-ವರದಾ ಜೋಡಣೆ ಅತ್ಯಂತ ಪ್ರಮುಖ ವಿಚಾರ’

ರಾಜ್ಯದಲ್ಲಿ ಈಗ ತೀವ್ರ ಬರಗಾಲ ಅನುಭವಿಸುತ್ತಿದ್ದೇವೆ‌. ಇದರಿಂದ ರಾಜ್ಯದ ಜನ ಸಾಮಾನ್ಯರ ಬದುಕು ಅತ್ಯಂತ ಕಷ್ಟಕರವಾಗಿದ್ದು, ಬರುವ ದಿನಗಳಲ್ಲಿ ಕುಡಿಯುವ ನೀರು ಮತ್ತು ದನಕರುಗಳಿಗೆ ಮೇವು ಕೂಡ ಸಿಗದಂತಹ ಭೀಕರವಾದ ಪರಿಸ್ಥಿತಿ ಎದುರಿಸಬೇಕಾಗಿದೆ. ಮಳೆಯನ್ನೇ ನಂಬಿಕೊಂಡಿರುವ ರೈತರು ಅಪಾರ ಕಷ್ಟ-ನಷ್ಟ ಅನುಭವಿಸುದ್ದಾರೆ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರ ಅತ್ಯಂತ ಸಾಮಾನ್ಯ ವಿಷಯವಾಗಿದ್ದು, ಕಳೆದ ಮೂವತ್ತು ವರ್ಷದಲ್ಲಿ ಹದಿನೇಳು ವರ್ಷ ಬರವನ್ನು ಇಲ್ಲಿನ ಜನ ಅನುಭವಿಸಿದ್ದಾರೆ. ಹೀಗಾಗಿ ಕೆಲ ತುರ್ತು ಅಗತ್ಯಗಳ ಜೊತೆಗೆ ಶಾಶ್ವತ ಕ್ರಮ ತೆಗೆದುಕೊಳ್ಳಲು ಇದು ಅತ್ಯಂತ ಸೂಕ್ತ ಕಾಲವಾಗಿದೆ. ಅದರಲ್ಲಿ ಬೇಡ್ತಿ-ವರದಾ ಜೋಡಣೆ ಅತ್ಯಂತ ಪ್ರಮುಖವಾಗಿದೆ ಎಂದವರು ತಿಳಿಸಿದ್ದಾರೆ.

LIVE TV

ಇದನ್ನೂ ಓದಿ: ಪಶ್ಚಿಮ ಘಟ್ಟದ ಜೀವ ನದಿಗಳ ರಕ್ಷಣೆಗೆ ಆಗ್ರಹಿಸಿ ಅ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ನೀರನ್ನು ತಡೆ ಹಿಡಿಯಲು ಯಾವುದೇ ದೊಡ್ಡ ಜಲಾಶಯ ನಿರ್ಮಾಣ ಇಲ್ಲದೆ, ಪರಿಸರಕ್ಕೆ ಯಾವುದೇ ಹಾನಿಯಾಗದ ರೀತಿ ಕೇವಲ ನೀರನ್ನು ಎತ್ತುವ ಯೋಜನೆ ಇದಾಗಿದೆ. ಮಳೆಗಾಲದ ವೇಳೆ ಉತ್ತರ ಕನ್ನಡ ದಾಟಿ ಸಮುದ್ರ ಸೇರುವ ನೀರಿನ ಬಳಕೆ ಇದಾಗಿದ್ದು, ಯೋಜನೆಯಿಂದ ಆ ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಆಗುವುದಿಲ್ಲ. ಹೀಗಾಗಿ ಸುಮಾರು 18 ಟಿಎಂಸಿ ನೀರನ್ನು ಗದಗ, ಹಾವೇರಿ‌, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಕುಡಿಯುಲು ಮತ್ತು ಕೃಷಿಗೆ ಸದ್ಬಳಕೆ ಮಾಡುವ ಕೆಲಸ ಆಗಬೇಕು. ನಮ್ಮ ಹಾವೇರಿ ಜಿಲ್ಲೆಗೆ ಬೇಕಾಗಿರುವ ನೀರಿನ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡುವ ಬಗ್ಗೆಯೂ ಡಿಪಿಆರ್​​ನಲ್ಲಿ ಪ್ರಮುಖವಾಗಿ ಉಲ್ಲೇಖಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:33 pm, Thu, 1 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More