AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ಎಫೆಕ್ಟ್: ಕೆಆರ್ ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ, ಗ್ರಾಹಕರಿಗೆ ಬೆಲೆ ಏರಿಕೆ ಶಾಕ್

Varamahalakshmi Vratham and Flower, Fruits price hike: ಬೆಂಗಳೂರಿನಲ್ಲಿ ವರಮಹಾಲಾಕ್ಷ್ಮೀ ಹಬ್ಬದ ಭರಾಟೆ ಜೋರಾಗಿದ್ದು ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಇದೇ ವೇಳೆ, ಹೂವು ಹಾಗೂ ಹಣ್ಣುಗಳ ದರ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವಾರ ಹೂವು ಹಾಗೂ ಹಣ್ಣುಗಳ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ ಎಂಬ ವಿವರ ಇಲ್ಲಿದೆ.

ವರಮಹಾಲಕ್ಷ್ಮೀ ಹಬ್ಬದ ಎಫೆಕ್ಟ್: ಕೆಆರ್ ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ, ಗ್ರಾಹಕರಿಗೆ ಬೆಲೆ ಏರಿಕೆ ಶಾಕ್
ಕೆಆರ್ ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ ಏರಿಕೆImage Credit source: tv9
ಗಣಪತಿ ಶರ್ಮಾ
|

Updated on: Aug 20, 2026 | 7:25 AM

Share

ಬೆಂಗಳೂರು, ಆಗಸ್ಟ್ 20: ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬಕ್ಕೆ (Varamahalakshmi festival) ತಯಾರಿ ಜೋರಾಗಿದ್ದು, ರಾಜಧಾನಿ ಬೆಂಗಳೂರಿನ (Bengaluru) ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ರಂಗೇರಿದೆ. ಹಬ್ಬಕ್ಕೆ ಕೇವಲ ಒಂದು ದಿನಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಮಂದಿ ಕೆಆರ್ ಮಾರ್ಕೆಟ್ (ಕೃಷ್ಣರಾಜೇಂದ್ರ ಮಾರುಕಟ್ಟೆ) ಸೇರಿದಂತೆ ನಗರದ ಪ್ರಮುಖ ಮಾರುಕಟ್ಟೆಗಳಿಗೆ ಮುಗಿಬಿದ್ದಿದ್ದಾರೆ. ಆದರೆ, ಹಬ್ಬದ ಪ್ರಯುಕ್ತ ಹೂವು ಮತ್ತು ಹಣ್ಣುಗಳ ದರ ಗಗನಕ್ಕೇರಿದ್ದು, ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳುತ್ತಿದೆ.

ವರಮಹಾಲಕ್ಷ್ಮೀ ಪೂಜೆ ಹಾಗೂ ಅಲಂಕಾರಕ್ಕಾಗಿ ಹೂವು-ಹಣ್ಣುಗಳಿಗೆ ಭಾರಿ ಬೇಡಿಕೆ ಬಂದಿದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ವ್ಯಾಪಾರಿಗಳು ದರವನ್ನು ದುಪ್ಪಟ್ಟು, ಮುಮ್ಮಡಿಗೆ ಹೆಚ್ಚಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಬೆಲೆಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ.

ಹೂವುಗಳ ದರ ವಿವರ (ಕೆಜಿಗಳಲ್ಲಿ)

  • ಸೇವಂತಿಗೆ: ಕಳೆದ ವಾರ ₹150 ಇದ್ದದ್ದು, ಈಗ ₹450 ತಲುಪಿದೆ.
  • ಮಲ್ಲಿಗೆ: ಕಳೆದ ವಾರ ₹500 ಇದ್ದದ್ದು, ಈಗ ₹1,200 ಕ್ಕೆ ಏರಿಕೆಯಾಗಿದೆ.
  • ಕನಕಾಂಬರ: ಕಳೆದ ವಾರ ₹2,000 ಇದ್ದ ದರ, ಈಗ ಬರೋಬ್ಬರಿ ₹5,000 ರಿಂದ ₹6,000 ವರೆಗೆ ಜಿಗಿದಿದೆ.

ಹಣ್ಣುಗಳ ದರ ವಿವರ (ಕೆಜಿಗಳಲ್ಲಿ)

  • ಸೇಬು: ₹110 ಇದ್ದದ್ದು, ಈಗ ₹270 ಆಗಿದೆ.
  • ದಾಳಿಂಬೆ: ₹120 ಇದ್ದದ್ದು, ಈಗ ₹260 ಕ್ಕೆ ಏರಿಕೆಯಾಗಿದೆ.
  • ಕಿತ್ತಳೆ: ₹80 ಇದ್ದದ್ದು, ಈಗ ₹180 ಆಗಿದೆ.
  • ಏಲಕ್ಕಿ ಬಾಳೆಹಣ್ಣು: ₹50 ಇದ್ದದ್ದು, ಈಗ ₹100 ತಲುಪಿದೆ.
  • ಮೂಸಂಬಿ: ₹100 ರಷ್ಟಿದ್ದ ದರ ₹150 ಕ್ಕೆ ಜಿಗಿದಿದೆ.

ಬೆಲೆ ಏರಿದ್ದರೂ ಕಮ್ಮಿಯಾಗದ ಖರೀದಿ ಉತ್ಸಾಹ

ಹೂವು-ಹಣ್ಣುಗಳ ಬೆಲೆ ಎಷ್ಟೇ ಏರಿಕೆಯಾಗಿದ್ದರೂ, ವರ್ಷಕ್ಕೊಮ್ಮೆ ಬರುವ ವರ ಮಹಾಲಕ್ಷ್ಮೀ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲೇಬೇಕು ಎಂಬ ಉದ್ದೇಶದಿಂದ ಸಾರ್ವಜನಿಕರು ಬೆಲೆ ಏರಿಕೆಯ ನಡುವೆಯೂ ಸಾಲು ಸಾಲಾಗಿ ನಿಂತು ಖರೀದಿ ಮಾಡುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಬೆಳಿಗ್ಗೆಯಿಂದಲೇ ಸಾರ್ವಜನಿಕರ ದಂಡು ಹರಿದುಬರುತ್ತಿದ್ದು, ಸಂಚಾರ ದಟ್ಟಣೆಯೂ ಉಂಟಾಗಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?