ನಾಳೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ರಾತ್ರಿ 9.30ರಿಂದ ಸಂಚಾರ ಸ್ಥಗಿತ

| Updated By: ಗಂಗಾಧರ​ ಬ. ಸಾಬೋಜಿ

Updated on: May 27, 2022 | 6:44 PM

ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಹಿನ್ನೆಲೆ ನಾಳೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ನಾಳೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ: ರಾತ್ರಿ 9.30ರಿಂದ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಎಂ.ಜಿ ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ರಿಂದ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ ಎಂದು ಬಿಎಂಆರ್ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಮೆಟ್ರೋ ಸೇವೆ ಲಭ್ಯವಿರಲಿದೆ. ನಾಳೆ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು 8.40 ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.10ಕ್ಕೆ ಕೊನೆಯ ಮೆಟ್ರೋ ಸಂಚಾರವಿರಲಿದೆ. ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಿಲ್ಲ. ಭಾನುವಾರದಂದು ಎಂದಿನಂತೆ ಮೆಟ್ರೋ ಸಂಚಾರವಿರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೇ 23ರಿಂದ ಮೆಟ್ರೋ ಪ್ರಯಾಣಿಕರಿಗೆ ಹೊಸ ಪಾಸ್: ನಾಳೆ ಕೊನೆ ದಿನ

ಕೆಲ ದಿನಗಳ ಹಿಂದೆಯಷ್ಟೇ ಒಂದು ಹಾಗೂ ಮೂರು ದಿನದ ಪಾಸುಗಳನ್ನು ಪರಿಚಯಿಸಿದ್ದ ನಮ್ಮ ಮೆಟ್ರೋ ಇದೀಗ ಐದು ದಿನದ ಪಾಸುಗಳನ್ನು ಪರಿಚಯಿಸಲು ಮುಂದಾಗಿದೆ. ಮೇ 23ರಿಂದ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ 5 ದಿನದ ಹೊಸ ಪಾಸ್ ಲಭ್ಯವಾಗಲಿದೆ. 5 ದಿನದ ಪಾಸ್ಗೆ 550 ರೂಪಾಯಿ ಬೆಲೆ ನಿಗದಿ ಮಾಡಲಾಗಿದೆ. 5 ದಿನದ ಪಾಸ್ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮರು ಪಾವತಿಸಬಹುದಾದ ಸ್ಮಾರ್ಟ್ ಕಾರ್ಡ್ ಭದ್ರತಾ ಠೇವಣಿ 50 ರೂ ಇರಲಿದೆ ಎಂದು ತಿಳಿಸಿದೆ. ಇನ್ನು ಈ ಸ್ಮಾರ್ಟ್ ಕಾರ್ಡನ್ನು ಯಾವುದೇ ಮೆಟ್ರೋ ನಿಲ್ದಾಣದಲ್ಲಿ ಖರೀದಿಸಬಹುದು.

ಇದನ್ನೂ ಓದಿ: RR vs RCB Qualifier 2: ಕ್ವಾಲಿಫೈಯರ್ ಪಂದ್ಯದಲ್ಲಿ ಕೈಕೊಡುವ ಕೊಹ್ಲಿ..!

ಪ್ರಯಾಣಿಕರು ಖರೀದಿಸಿದ ದಿನಾಂಕದಿಂದ 5 ದಿನದವರೆಗೆ ಯಾವುದೇ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ ಅನಿಯಮಿತವಾಗಿ ಪ್ರಯಾಣಿಸಬಹುದು. ಪಾಸ್ನ ಮಾನ್ಯತೆಯ ಅವಧಿಯೊಳಗೆ ಸ್ಮಾರ್ಟ್ ಕಾರ್ಡನ್ನು ಉತ್ತಮ ಸ್ಥಿತಿಯಲ್ಲಿ ಯಾವುದೇ ಮೆಟ್ರೋ ನಿಲ್ದಾಣದ ಗ್ರಾಹಕ ಸೇವಾ ಕೇಂದ್ರದಲ್ಲಿ ಸಲ್ಲಿಸುವ ಮೂಲಕ 50 ರೂ ಮರು ಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಹಿಂಪಡೆಯಬಹುದು ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.