ಬೆಂಗಳೂರು: ಪಠ್ಯ ಪುಸ್ತಕ (Text Book) ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಲೇ ಇದೆ. ವಿರೋಧದ ನಡುವೆ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥರನ್ನು (Rohith Chakrathirtha) ಸಮಿತಿಯಿಂದ ಕೈಬಿಡುವಂತೆ ಒತ್ತಾಯವೂ ಕೇಳಿಬಂದಿದ್ದು, ಇಂದು (ಮೇ 31) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ವಿವಿಧ ಸಂಘಟನೆಗಳಿಂದ ನಡೆಯುವ ಪ್ರತಿಭಟನೆಯಲ್ಲಿ ಸಾಹಿತಿಗಳು, ಚಿಂತಕರು, ಶಿಕ್ಷಣ ತಜ್ಞರು ಸಾಥ್ ನೀಡಲಿದ್ದಾರೆ. ಹಾಗೇ, ಹಲವು ವಿದ್ಯಾರ್ಥಿ ಸಂಘಟನೆಗಳು ಕೂಡಾ ಭಾಗಿಯಾಗಲಿವೆ.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದಲೂ ಧರಣಿ ನಡೆಯುತ್ತದೆ. ಎಸ್ಎಫ್ಐ, ಎನ್ಎಸ್ಯುಐ, ಎಐಎಸ್ಎಫ್, ಎಐಎಸ್ಎ, ಕೆವಿಎಸ್, ಡಿಎಸ್ಎಫ್, ಎಐಆರ್ಎಸ್ಒ, ಡಿವಿಪಿ, ವಿಬಿಪಿ, ವಿಜೆಡಿ, ಬೆಂಗಳೂರು ವಿವಿ ಪಿಜಿ ಮತ್ತುಸಂಶೋಧಕರು ಕೈ ಫ್ರೀಡಂಪಾರ್ಕ್ನಲ್ಲಿ ಜೋಡಿಸುತ್ತಾರೆ.
ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ:
ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ (Hampa Nagarajaiah) ರಾಜೀನಾಮೆ ಸಲ್ಲಿಸಿದ್ದಾರೆ. ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಟೆಕ್ಸಾಸ್ ಶಾಲೆಯಲ್ಲಿ ಫೈರಿಂಗ್ ಹಿನ್ನೆಲೆ; ಕೆನಡಾದಲ್ಲಿ ಬಂದೂಕು, ಗನ್ ರೀತಿಯ ಆಟಿಕೆ ಮಾರಾಟ ನಿಷೇಧಕ್ಕೆ ನಿರ್ಧಾರ
ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ವಿರೋಧಕ್ಕೆ ಮಣಿಯುತ್ತಾ ರಾಜ್ಯ ಸರ್ಕಾರ?
ವಿವಾದದ ಹಿನ್ನೆಲೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಸದ್ಯದ ಘಟನೆ, ವಿವಾದಗಳ ಬಗ್ಗೆ ಇಂದು ಮಾತುಕತೆ ನಡೆಯುತ್ತದೆ. ಚರ್ಚಿಸಿ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:26 am, Tue, 31 May 22