AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಸಮಸ್ಯೆ: ನಾವು ತೆರಿಗೆ ಕಟ್ಟಲ್ಲ ಎಂದು ಸಿಎಂ, ಡಿಸಿಎಂಗೆ ಪತ್ರ ಬರೆದ ಐಟಿ-ಬಿಟಿ ಮಂದಿ

ರಸ್ತೆಗುಂಡಿ ಸಮಸ್ಯೆ, ಚರಂಡಿಗಳು ಇಲ್ಲದಿರುವುದು ಸೇರಿ ಮೂಲ ಸೌಕರ್ಯಗಳನ್ನ ರಾಜ್ಯ ಸರ್ಕಾರ ಒದಗಿಸದ ಕಾರಣ ನಾವು ತೆರಿಗೆ ಕಟ್ಟಲ್ಲ ಎಂದು ಐಟಿ-ಬಿಟಿ ಮಂದಿ ಹೇಳಿದ್ದಾರೆ. ಈ ಬಗ್ಗೆ ಸಿಎಂ, ಡಿಸಿಎಂಗೆ ಪತ್ರ ಬರೆದಿರುವ ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು, ಮೂಲ ಸೌಕರ್ಯ ಕೊಟ್ಟು ತೆರಿಗೆ ಕೇಳಿ ಎಂದು ಆಗ್ರಹಿಸಿದ್ದಾರೆ.

ರಸ್ತೆ ಗುಂಡಿ ಸಮಸ್ಯೆ: ನಾವು ತೆರಿಗೆ ಕಟ್ಟಲ್ಲ ಎಂದು ಸಿಎಂ, ಡಿಸಿಎಂಗೆ ಪತ್ರ ಬರೆದ ಐಟಿ-ಬಿಟಿ ಮಂದಿ
ಸಿಎಂ, ಡಿಸಿಎಂಗೆ ಪತ್ರ
ಶಾಂತಮೂರ್ತಿ
| Updated By: ಪ್ರಸನ್ನ ಹೆಗಡೆ|

Updated on:Oct 15, 2025 | 11:56 AM

Share

ಬೆಂಗಳೂರು, ಅಕ್ಟೋಬರ್​ 15: ರಾಜಧಾನಿ ಬೆಂಗಳೂರಲ್ಲಿ ರಸ್ತೆ ಗುಂಡಿಗಳ (Pothole) ವಿಚಾರ ಭಾರಿ ಚರ್ಚೆಯಲ್ಲಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಪೋಸ್ಟ್ ಬೆನ್ನಲ್ಲೇ ನಾವು ಆಸ್ತಿ ತೆರಿಗೆ ಕಟ್ಟುವುದಿಲ್ಲ ಮತ್ತು ನಮ್ಮಿಂದ ತೆರಿಗೆ ಕೇಳಬೇಡಿ ಎಂದು ಐಟಿ-ಬಿಟಿ ಮಂದಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಗೆ ಪತ್ರ ಬರೆದಿರುವ ಪ್ರಸಂಗ ನಡೆದಿದೆ. ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಪತ್ರ ಬರೆದಿದ್ದು, ಮೂಲ ಸೌಕರ್ಯ ಸಮಸ್ಯೆ ಬಗ್ಗೆ ಈ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ವರ್ತೂರು, ಪಣತ್ತೂರು ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಬರಿ ಗುಂಡಿಗಳೇ ಕಾಣುತ್ತಿವೆ. ಇಂತಹ ರಸ್ತೆಗಳಲ್ಲಿ ಸರಾಗವಾಗಿ ಸಂಚರಿಸಲು ಸಾಧ್ಯವಾಗದ ಕಾರಣ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಸ್ಕೂಲ್​ ಬಸ್​ಗಳ ಅಪಘಾತ ದಿನನಿತ್ಯ ಮಾಮೂಲು ಎಂಬಂತಾಗಿದೆ. ಗುಂಡಿ ಮುಕ್ತ ರಸ್ತೆ , ಮೂಲ ಸೌಕರ್ಯ ಕೊಟ್ಟು ತೆರಿಗೆ ಕೇಳಿ ಎಂದು Individual Tax Payers Forumನಿಂದ ಸಿಎಂ, ಡಿಸಿಎಂಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ತಿರುಗೇಟು

ರಸ್ತೆ ಸಮಸ್ಯೆ ಮಾತ್ರವಲ್ಲದೆ ಈ ಭಾಗದಲ್ಲಿ ಸಮರ್ಪಕ ಚರಂಡಿಗಳ ಕೊರತೆಯೂ ಇದೆ. ಮಳೆ ಬಂದರೆ ನೀರು ವರ್ತೂರು ಕೆರೆಗೆ ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳು ಜಲಾವೃತವಾಗುತ್ತಿವೆ. ಇತ್ತೀಚೆಗೆ ಮಳೆ ಬಂದ ಸಂದರ್ಭವೂ ಇದೇ ರೀತಿಯ ಸಮಸ್ಯೆ ಉಂಟಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಹೀಗಾಗಿ ಈ ಪ್ರದೇಶದಲ್ಲಿ ಸರಿಯಾದ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸದ ಹಿನ್ನಲೆ ಗೃಹ ನಿರ್ಮಾಣ ಪ್ರಾಧಿಕಾರ ಅಥವಾ GBA ಆಸ್ತಿ ತೆರಿಗೆ ಸಂಗ್ರಹಿಸದಂತೆ ಆದೇಶಿಸಿ ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಈ ಭಾಗದಿಂದ ವಾರ್ಷಿಕವಾಗಿ 800 ಕೋಟಿ ತೆರಿಗೆ ಪಾವತಿಯಾಗಲಿದ್ದು, ಇದೇ ವಿಚಾರವಾಗಿ ಈ ಹಿಂದೆ ಹಲವು ಬಾರಿ ಸ್ಥಳೀಯರು ಪ್ರತಿಭಟನೆಗಳನ್ನೂ ನಡೆಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:55 am, Wed, 15 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ