AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರಿನ ವರ್ತೂರು ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಭೀಕರ ಹಲ್ಲೆ ನಡೆದಿದೆ. ಮನೆಯಲ್ಲಿ ಯುವಕನಿದ್ದ ಕಾರಣಕ್ಕೆ ಮಹಿಳೆಯನ್ನು ಹೊರಗೆ ಎಳೆದು ಅಮಾನವೀಯವಾಗಿ ಥಳಿಸಲಾಗಿದೆ. ಈ ಖಾಸಗಿತನ ಉಲ್ಲಂಘನೆ ಮತ್ತು ಹಲ್ಲೆ ಘಟನೆ ಏಪ್ರಿಲ್ 4ರಂದು ನಡೆದಿದ್ದು, ವರ್ತೂರು ಪೊಲೀಸರು ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಖಾಸಗಿತನಕ್ಕೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!
ಪಶ್ಚಿಮ ಬಂಗಾಳ ಮಹಿಳೆ
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 06, 2026 | 11:56 AM

Share

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು ವ್ಯಕ್ತಿಗಳು “ನಮ್ಮ ಊರಿಗೆ ಬಂದು ವೇಶ್ಯಾವಾಟಿಕೆ ನಡೆಸುತ್ತೀರಾ?” ಎಂದು ಕಿರುಚುತ್ತಾ ದಾಳಿ ಮಾಡಿದ್ದಾರೆ. ಯುವತಿಯನ್ನು ಮನೆಯಿಂದ ಹೊರಕ್ಕೆ ಎಳೆದು ತಂದು ಮನಬಂದಂತೆ ಥಳಿಸಿದ್ದಾರೆ. ಗಲಾಟೆ ಆರಂಭವಾಗುತ್ತಿದ್ದಂತೆಯೇ ಆಕೆಯ ಜೊತೆಗಿದ್ದ ಯುವಕ ಸ್ಥಳದಿಂದ ಓಡಿ ಹೋಗಿದ್ದಾನೆ.

ಇದನ್ನೂ ಓದಿ: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಹಲ್ಲೆಗೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯ ಖಾಸಗಿತನಕ್ಕೆ ಧಕ್ಕೆ ತಂದಿರುವ ಮತ್ತು ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’