Varun Singh: ಗ್ರೂಪ್ ಕ್ಯಾಪ್ಟನ್​ ವರುಣ್ ಸಿಂಗ್​ಗೆ ಯಲಹಂಕ ವಾಯುನೆಲೆಯಲ್ಲಿ ರಾಜ್ಯಪಾಲ, ಸೇನಾ ಸಿಬ್ಬಂದಿಯಿಂದ ಅಂತಿಮ ನಮನ

ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ರಾಜ್ಯಪಾಲ ಟಿ.ಸಿ. ಗೆಹ್ಲೋಟ್‌ ವರುಣ್​ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

Varun Singh: ಗ್ರೂಪ್ ಕ್ಯಾಪ್ಟನ್​ ವರುಣ್ ಸಿಂಗ್​ಗೆ ಯಲಹಂಕ ವಾಯುನೆಲೆಯಲ್ಲಿ ರಾಜ್ಯಪಾಲ, ಸೇನಾ ಸಿಬ್ಬಂದಿಯಿಂದ ಅಂತಿಮ ನಮನ
ವರುಣ್ ಸಿಂಗ್ ಅಂತಿಮ ದರ್ಶನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 16, 2021 | 4:45 PM

ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಅಪಘಾತಕ್ಕೀಡಾಗಿದ್ದ ಭಾರತೀಯ ಸೇನಾ (Indian Army) ಹೆಲಿಕಾಪ್ಟರ್​ನಲ್ಲಿದ್ದವರಲ್ಲಿ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ (Captain Varun Singh) ಮಾತ್ರ ಬದುಕುಳಿದಿದ್ದರು. ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ರಾಜ್ಯಪಾಲ ಟಿ.ಸಿ. ಗೆಹ್ಲೋಟ್‌ ವರುಣ್​ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಭಾರತೀಯ ವಾಯುಪಡೆ (IAF) ಮತ್ತು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಕುಟುಂಬ ಸದಸ್ಯರು ಇಂದು ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ಸೇನಾ ವಿಮಾನದಲ್ಲಿ ಭೂಪಾಲ್‌ಗೆ ಹಾರಿಸುವ ಮೊದಲು ಅವರ ಮೃತದೇಹಕ್ಕೆ ಗೌರವ ಸಲ್ಲಿಸಿದರು. ಶುಕ್ರವಾರ ವರುಣ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಗ್ರೂಪ್ ಕ್ಯಾಪ್ಟನ್​ ವರುಣ್ ಸಿಂಗ್ ನಿಧನಕ್ಕೆ ವಿಧಾನಪರಿಷತ್​​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಸಭಾಪತಿ ಬಸವರಾಜ್​ ಹೊರಟ್ಟಿ, ಆಡಳಿತ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪರಿಷತ್​ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದರು. ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ವರುಣ್ ಸಿಂಗ್ ಈ ಅಪಘಾತದಲ್ಲಿ ಬದುಕುಳಿದ ಏಕೈ ವ್ಯಕ್ತಿಯಾಗಿದ್ದಾರೆ.

Varun Singh Death

ವರುಣ್ ಸಿಂಗ್ ಅಂತಿಮ ದರ್ಶನ

ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ಇದ್ದ ವರುಣ್ ಸಿಂಗ್ ಅವರ ಚಿಕ್ಕಪ್ಪ ಅಖಿಲೇಶ್ ಪ್ರತಾಪ್ ಸಿಂಗ್, ವರುಣ್ ಸಿಂಗ್ ಅವರಿಗೆ ಈ ಅಪಘಾತದಲ್ಲಿ ಶೇ. 95ರಷ್ಟು ಸುಟ್ಟ ಗಾಯಗಳಾಗಿತ್ತು. ಆದರೆ, ಅವರು ಗುಣಮುಖರಾಗುತ್ತಾರೆ ಎಂದು ನಾವು ಅಂದುಕೊಂಡಿದ್ದೆವು. ಅವರು ನಿಜವಾದ ಅರ್ಥದಲ್ಲಿ ಸೈನಿಕರಾಗಿದ್ದರು. ಅವರ ಸಾವಿನಿಂದ ನಮ್ಮ ಕುಟುಂಬವೇ ಛಿದ್ರವಾಗಿದೆ ಎಂದು ತಿಳಿಸಿದ್ದಾರೆ.

ವರುಣ್ ಸಿಂಗ್ ತಮ್ಮ ಪೋಷಕರಾದ ಕರ್ನಲ್ ಕೆ.ಪಿ ಸಿಂಗ್ ಮತ್ತು ಉಮಾ ಸಿಂಗ್, ಸಹೋದರ ಲೆಫ್ಟಿನೆಂಟ್ ಕಮಾಂಡರ್ ತನುಜ್ ಸಿಂಗ್, ಪತ್ನಿ ಗೀತಾಂಜಲಿ ಸಿಂಗ್, ಮಗ ರದ್ದುಮಾನ್ ಸಿಂಗ್ ಮತ್ತು ಮಗಳು ಆರಾಧ್ಯ ಸಿಂಗ್ ಅವರನ್ನು ಅಗಲಿದ್ದಾರೆ. ಹೆಲಿಕಾಪ್ಟರ್​ ಪತನವಾದ ಒಂದು ದಿನದ ನಂತರ, ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Captain Varun Singh Profile ತೇಜಸ್ ವಿಮಾನ ಅಪಘಾತ ತಪ್ಪಿಸಿದ್ದಕ್ಕೆ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತರಾಗಿದ್ದರು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ

Published On - 3:41 pm, Thu, 16 December 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು