AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ.

CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 31, 2023 | 12:00 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಎರಡೆರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿ, ಬಿಜೆಪಿ ಮುಖಂಡರ ಬಾಯಿಗೆ ಸಿಕ್ಕು, ಕೊನೆಗೆ ಇದಾ ಆದಾ ಎಂಬ ಚಿಂತೆಯಲ್ಲಿ ತಲೆ ಮೇಲೆ ಕೈ ಹಿಡಿದು ಕುಂತಿದ್ದ ಸಿದ್ದರಾಮಯ್ಯ(Siddaramaiah) ಗೆಲುವನ್ನು ತಮ್ಮದಾಗಿಸಿಕೊಂಡು ರಾಜ್ಯದ ಸಿಎಂ ಪಟ್ಟ ಅಲಂಕರಿಸಿದ್ದಾರೆ. ಸದ್ಯ ತಮಗೆ ಈ ಸ್ಥಾನ ಸಿಗುವಂತೆ ಮಾಡಿದ ಮತದಾರ ಪ್ರಭುಗಳಿಗೆ ತಮ್ಮನ್ನು ಭೇಟಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇನ್ನು ಮುಂದೆ ವರುಣಾ ಕ್ಷೇತ್ರದ(Varuna Constituency) ಜನ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡುವುದು ತುಂಬಾ ಸುಲಭ.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ಸಿಎಂ ಸುಲಭ ಭೇಟಿಗೆ ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬರುವ ವರುಣಾ ಕ್ಷೇತ್ರದ ಮತದಾರರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಮುಕ್ತ ಅವಕಾಶ ಕಲ್ಪಿಸಿದ್ದಾರೆ. ವರುಣಾದಿಂದ ಬಂದ ಮತದಾರರು ತಮ್ಮ ಅಡ್ರೆಸ್ ತೋರಿಸಿ ಒಳಗೆ ಹೋಗಲು ಅವಕಾಶ ನೀಡಲಾಗಿದೆ. ಆಧಾರ್, ಐಡಿ ಚೆಕ್ ಮಾಡಿ ವರುಣಾ ಕ್ಷೇತ್ರದ ಮತದಾರರು ಇದ್ರೆ ಅವರನ್ನು ಸಿಎಂ ಭೇಟಿಗೆ ಬಿಡಲು ಪೊಲೀಸರಿಗೆ ಸೂಚಿಸಲಾಗಿದೆ. ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಿಎಂ ಆಗಿದ್ದಾರೆ. ಹೀಗಾಗಿ ಕೊನೆಯ ಅಧಿಕಾರದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಮತದಾರರಿಗೆ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತಷ್ಟು ಖುಷಿ ಪಟ್ಟಿ ಸಂಭ್ರಮಿಸಿದ್ದಾರೆ.

ಇದನ್ನೋ ಓದಿ: Siddaramaiah Profile: ಕುರಿ ಎಣಿಸುವ ಕುರುಬನಿಗ್ಯಾಕೆ ಹಣಕಾಸು ಖಾತೆ ಎಂದವರು ಮುಖ ಮುಚ್ಚಬೇಕಾಯ್ತು; ಕರ್ನಾಟಕ ರಾಜಕೀಯ ಮಾಸ್ತರ ಸಿದ್ದರಾಮಯ್ಯ, ಹೌದೋ ಹುಲಿಯಾ

ಕುರಿ ಎಣಿಸುವ ಕುರುಬ ಹಣಕಾಸು ಖಾತೆ ಇಟ್ಟುಕೊಂಡು ಏನ್ ಮಾಡ್ತಾನೆ ಎಂದು ಹಂಗಿಸಿದವರ ಮುಂದೆ ದಾಖಲೆಯ 13 ಬಾರಿ ಬಜೆಟ್ ಮಂಡಿಸಿ ತಾನೆಂಥವ ಎಂದು ತೋರಿಸಿದವರು ಸಿದ್ದರಾಮಯ್ಯ. ಸಿದ್ದರಾಮಯ್ಯ ಬಹಳ ಕಷ್ಟ ಕಾರ್ಪಣ್ಯದ ಸ್ಥಿತಿಯಲ್ಲಿ ಬೆಳೆದವರಾದ್ದರಿಂದ ಬಡವರ ಬಗ್ಗೆ ಸಹಜವಾಗಿಯೇ ಕಾಳಜಿ ಹೆಚ್ಚು. ಖ್ಯಾತ ಸಮಾಜವಾದಿ ಡಾಕ್ಟರ್ ರಾಮಮನೋಹರ್ ಲೋಹಿಯಾ ಸಿದ್ಧಾಂತದಿಂದ ಪ್ರೇರಿತರಾದ ಸಿದ್ದರಾಮಯ್ಯ ಸಿಎಂ ಆದಾಗ ಬಡವರ ಏಳ್ಗೆಗೆ ಮತ್ತವರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲು ಮೀನ ಮೇಷ ಎಣಿಸಲಿಲ್ಲ. ಅನ್ನ ಭಾಗ್ಯ, ಕ್ಷೀರ ಭಾಗ್ಯ, ವಿದ್ಯಾಸಿರಿ ಇತ್ಯಾದಿ ಅವರ ಜನಪ್ರಿಯ ಯೋಜನೆಗಳ ಸಾಲಿನಲ್ಲಿ ನಿಲ್ಲುತ್ತವೆ. ಈಗ ಮತ್ತೆ ಎರಡನೇ ಬಾರಿಗೆ ಸಿಎಂ ಆಗಿ ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದ್ದಾರೆ. ತಮಗೆ ಮತ ಹಾಕಿದ ಮತದಾರ ಪ್ರಭುಗಳ ಕಷ್ಟ ಆಲಿಸಲು ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿ ಜನ ಸ್ನೇಹಿ ಸಿಎಂ ಆಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು