AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ 31ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್

ನಿಷೇಧದ ಆದೇಶ ಹೊರಡಿಸದಿದ್ದರೆ ಡಿ.31ರಂದು ರಾಜ್ಯ ಬಂದ್​ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ 31ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್
ವಾಟಾಳ್​ ನಾಗರಾಜ್
TV9 Web
| Edited By: |

Updated on: Dec 24, 2021 | 9:44 PM

Share

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಅತ್ತಿಬೆಲೆ ಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಂಇಎಸ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಡಿಸೆಂಬರ್ 29ರವರೆಗೆ ಗಡುವು ನೀಡಿದ್ದೇವೆ. ಅಷ್ಟರೊಳಗೆ ನಿಷೇಧದ ಆದೇಶ ಹೊರಡಿಸದಿದ್ದರೆ ಡಿ.31ರಂದು ರಾಜ್ಯ ಬಂದ್​ ಮಾಡುತ್ತೇವೆ ಎಂದರು. ಹೊಟೆಲ್, ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್ ಆಗಬೇಕು. ನಮ್ಮ ಹೋರಾಟಕ್ಕೆ ವಕೀಲರು ಕೂಡ ಕೈಜೋಡಿಸಬೇಕು. ರಾಷ್ಟ್ರೀಯ ಭದ್ರತಾ ಕಾನೂನಿನ ಅನ್ವಯ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಬಂದ್​ ದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟಿಸುತ್ತೇವೆ. ನಾಳೆ (ಡಿ.25)‌ ಗೊರಗೊಂಟೆಪಾಳ್ಯ ಬಳಿ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಹೇಳಿದರು.

ಮಹಾರಾಷ್ಟ್ರ ಸಚಿವರ ಭೇಟಿಯಾದ ಎಂಇಎಸ್ ನಾಯಕರು ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಕಠಿಣ ಕ್ರಮದ ನಿರ್ಧಾರಕ್ಕೆ ಎಂಇಎಸ್ ನಾಯಕರು ಆತಂಕಗೊಂಡಿದ್ದಾರೆ. ಮಹಾರಾಷ್ಟ್ರ ಸಚಿವರು, ಹಿರಿಯ ನಾಯಕರ ಮನೆಗೆ ಎಂಇಎಸ್ ಯುವಸಮಿತಿ ದೌಡಾಯಿಸಿದೆ. ಮುಂಬೈಗೆ ತೆರಳಿ ಸಚಿವರು, ನಾಯಕರನ್ನು ಭೇಟಿಯಾಗುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರನ್ನು ಭೇಟಿಯಾದ ಯುವ ಸಮಿತಿ ಸದಸ್ಯರು ಕರ್ನಾಟಕದಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ಎಸೆಗಲಾಗುತ್ತಿದೆ. ಮರಾಠಿ ಭಾಷಿಕ ಯುವಕರ ಮೇಲೆ ದೇಶದ್ರೋಹ ಕೇಸ್ ದಾಖಲಿಸಲಾಗುತ್ತಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿಗೆ ಮಹಾರಾಷ್ಟ್ರ ಸಂಸದರ ನಿಯೋಗ ಕೊಂಡೊಯ್ಯಲಾಗುವುದು ಎಂದು ಶರದ್ ಪವಾರ್ ಎಂಇಎಸ್ ಮುಖಂಡರಿಗೆ ಭರವಸೆ ನೀಡಿದರು. ಶರದ್ ಪವಾರ್ ಭೇಟಿಗೂ ಮೊದಲು ಸಚಿವ ಏಕನಾಥ ಶಿಂಧೆ ಸೇರಿ ಹಲವು ಸಚಿವರನ್ನು ಎಂಇಎಸ್ ಯುವಸಮಿತಿ ಭೇಟಿಯಾಗಿತ್ತು.

ಇದನ್ನೂ ಓದಿ: ಎಂಇಎಸ್​ ರಾಜಕೀಯ ಪಕ್ಷ, ಕಾನೂನಾತ್ಮಕವಾಗಿ ಅದನ್ನು ನಿಷೇಧಿಸುವ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ: ಸಂಸದೆ ಸುಮಲತಾರನ್ನ 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್ ನಾಗರಾಜ್

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!