AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅ.16ರಂದು ಕರಾಳ ದಿನಾಚರಣೆ: ವಾಟಾಳ್ ನಾಗರಾಜ್ ಘೋಷಣೆ

ರಾಜ್ಯದಲ್ಲಿ ಬರದ ಸ್ಥಿತಿ ಇದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಅ.16ಕ್ಕೆ ಕರಾಳ ದಿನ ಆಚರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಅ.16ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾವೇರಿಗಾಗಿ ಪ್ರತಿಭಟನೆ ನಡೆಯಲಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅ.16ರಂದು ಕರಾಳ ದಿನಾಚರಣೆ: ವಾಟಾಳ್ ನಾಗರಾಜ್ ಘೋಷಣೆ
ವಾಟಾಳ್ ನಾಗರಾಜ್
Kiran Surya
| Edited By: |

Updated on: Oct 12, 2023 | 2:22 PM

Share

ಬೆಂಗಳೂರು, ಅ.12: ತಮಿಳುನಾಡಿಗೆ ಕರ್ನಾಟಕ ನೀರು ಬಿಡುತ್ತಿರುವುದನ್ನು ಖಂಡಿಸಿ ಮಂಡ್ಯ, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಹೋರಾಟ ಮುಂದುವರೆದಿದೆ (Cauvery Water Dispute). ಪ್ರತಿ ದಿನ ಹೋರಾಟಗಾರರು ಒಂದಲ್ಲ ಒಂದು ರೀತಿಯಲ್ಲಿ ವಿನೂತನವಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನು ಮತ್ತೊಂದೆಡೆ ಅ.16ಕ್ಕೆ ಕರಾಳ ದಿನ ಆಚರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj)​ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅ.16ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾವೇರಿಗಾಗಿ ಪ್ರತಿಭಟನೆ ನಡೆಯಲಿದೆ.

ಕಾವೇರಿಗಾಗಿ ಕರಾಳ ದಿನ ಆಚರಿಸುವ ಬಗ್ಗೆ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ತಮಿಳನಾಡಿನ‌ ಪರವಾಗಿ ತಿರ್ಪು ಕೊಡಲಾಗಿದೆ. ನಮ್ಮಲ್ಲಿ ನೀರಿದ್ರೆ ನಾವು ತಮಿಳುನಾಡಿಗೆ ಕೊಡಬಾರದು ಅಂತಾ ಹೇಳುತ್ತಿರಲಿಲ್ಲ. ಸ್ಟಾಲಿನ್ ಇಂಡಿಯಾ ಮೈತ್ರಿಕೂಟಕ್ಕೆ ಬೆದರಿಕೆ ಹಾಕಿದ್ದಾರೆ. ಇಂಡಿಯಾ ಮೈತ್ರಿಕೂಟ ಕರ್ನಾಟಕ ರಾಜ್ಯಕ್ಕೂ ಯಾವ ಸಂಬಂಧವಿಲ್ಲ. ಸ್ಟಾಲಿನ್ ವಾದ ಸರಿಯಿಲ್ಲ. ಪ್ರಾಧಿಕಾರದ ವಿರುದ್ಧ ಸೋಮವಾರ ಬೃಹತ್ ಪ್ರತಿಭಟನೆ ಮಾಡ್ತೇವೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಕಪ್ಪು ಬಾವುಟ ಪ್ರದರ್ಶನ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​ ತಿಳಿಸಿದರು.

ಇನ್ನು ನಮ್ಮ ರಾಜ್ಯ ಸರ್ಕಾರ ಶಾಸನ ಸಭೆ ಕರೆದು ತೀರ್ಮಾನ ತೆಗೆದು ಕೊಳ್ಳಬೇಕು. ನೀರಿದ್ದು ನೀರನ್ನ ಕೊಡ್ತಿಲ್ಲ ಎನ್ನೊ ಹಾಗೆ ಬಿಂಬಿಸಲಾಗಿದೆ. ನಾಳೆ ಕಾವೇರಿ ಪ್ರಾಧಿಕಾರದ ಸಭೆ ಇದೆ. ಸಭೆಯಲ್ಲಿ ಏನಾಗುತ್ತೆ ನೋಡೊಣ. ಬೆಂಗಳೂರಿಗೆ ಕುಡಿಯುವ ನೀರಿಲ್ಲ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದಕ್ಕಾಗಲ್ಲ ಎಂದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ಸಕ್ಕರೆ ನಾಡಲ್ಲಿ ಮುಂದುವರೆದ ಪ್ರತಿಭಟನೆ

ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ರೈತ ಹಿತರಕ್ಷಣಾ ಸಮಿತಿ ಹೋರಾಟಕ್ಕೆ ಜನಪದ ಕಲಾವಿದರ ಬೆಂಬಲ ನೀಡಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟಕ್ಕೆ ಬೆಂಬಲ ಸೂಚಿಸಿ, ಬೆಂ-ಮೈ ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಕೆಲ ಕಾಲ ಹೆದ್ದಾರಿ ತಡೆದು ಹೆದ್ದಾರಿಯಲ್ಲಿ ಜನಪದ ಹಾಡು ಹೇಳಿ, ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಕೂಡಲೇ ನೀರು ನಿಲ್ಲಿಸಿ ರೈತರನ್ನ ಉಳಿಸುವಂತೆ ಹೋರಾಟಗಾರರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!