Traffic Advisory: ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ರಸ್ತೆಯಲ್ಲಿ 2 ತಿಂಗಳು ವಾಹನ ಸಂಚಾರ ಬಂದ್
ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ವೈಟ್ ಟಾಪಿಂಗ್ ನಡೆಯುವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಯಾವ ಯಾವ ರಸ್ತೆಯಲ್ಲಿ ವೈಟ್ ಟಾಪಿಂಗ್ ನಡಯುತ್ತಿದೆ? ವಾಹನ ಸಂಚಾರ ನಿರ್ಬಂಧದ ಮಾಹಿತಿ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 28: ಬೆಂಗಳೂರು (Bengaluru) ನಗರದ ಹಲವು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ವೈಟ್ ಟಾಪಿಂಗ್ (White Topping) ನಡೆಯುವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಮತ್ತು ಎಂ.ಇ.ಐ ರಸ್ತೆಗೆ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯವರಗೆ ವೈಟ್ ಟಾಪಿಂಗ್ ನಡೆಯುತ್ತಿದ್ದು, ಎಲ್ಲ ವಾಹನ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:
ಹೆಣ್ಣೂರು 80 ಅಡಿ ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ. ಹೀಗಾಗಿ, ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ಎಲ್ಲ ಮಾದರಿಯ ವಾಹನ ಸಂಚಾರವನ್ನು ಸೆಪ್ಟೆಂಬರ್ 30 ರಿಂದ ನವೆಂಬರ್ 11ರವರೆಗು ನಿರ್ಬಂಧಿಸಲಾಗುತ್ತದೆ.
ಪರ್ಯಾಯ ಮಾರ್ಗ
ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಸಂಚರಿಸುವ ವಾಹನ ಸವಾರರು ನ್ಯೂ ಏರ್ ಪೋರ್ಟ್ ರಸ್ತೆಯಲ್ಲಿ ಸಂಚರಿಸಿ ಲಿಂಗರಾಜಪುರಂ ಚಂದ್ರಿಕಾ ಜಂಕ್ಷನ್ ಮೂಲಕ ಶಿವಾಜಿನಗರ ಕಡೆಗೆ ಸಂಚರಿಸಬಹುದಾಗಿದೆ.
ಟ್ವಿಟರ್ ಪೋಸ್ಟ್
‘ಸಂಚಾರ ಸಲಹೆ/Traffic advisory’ pic.twitter.com/iYysVuHbqO
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) September 27, 2024
ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್
ಕಂಠೀರವ ಸ್ಟುಡಿಯೋ-ತುಮಕೂರು ಮುಖ್ಯರಸ್ತೆವರೆಗೆ ಬಂದ್
ಎಂಇಐ ರಸ್ತೆಗೆ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯವರಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ನಡೆಯಲಿದೆ. ಎಂಇಐ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದ್ದು ತುಮಕೂರು ರಸ್ತೆಯಿಂದ ಕಂಠೀರವ ಸ್ಟುಡಿಯೋ ಕಡೆಗೆ ಚಲಿಸುವ ವಾಹನಗಳು ಎಂದಿನಂತೆ ರಸ್ತೆಯ ಎಡಭಾಗದಲ್ಲಿ ಸಂಚರಿಸಬಹುದು.
ಆದರೆ, ಕಾಮಗಾರಿ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಂಇಐ ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ರಸ್ತೆ ಕಡೆಗೆ (ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ) ಸಂಚರಿಸುವ ಮಾರ್ಗದಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಅಕ್ಟೋಬರ್ 1 ರಿಂದ ಕಾಮಗಾರಿ ಮುಗಿಯುವವರೆಗೂ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ
- ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂಇಐ ರಸ್ತೆಯ ಮೂಲಕ ತುಮಕೂರು ರಸ್ತೆ ಕಡೆಗೆ ಹೊಗುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಲ್ಲಿ ಸಾಗಿ ಎಫ್.ಟಿ.ಐ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಔಟರ್ ರಿಂಗ್ ರಸ್ತೆಯ ಮೂಲಕ ಸಿ.ಎಂ.ಟಿ.ಐ ಜಂಕ್ಷನ್ನಲ್ಲಿ ತುಮಕೂರು ರಸ್ತೆಯನ್ನು ಪ್ರವೇಶಿಸಬಹುದಾಗಿದೆ.
- ಕಂಠೀರವ ಸ್ಟುಡಿಯೋ ಮುಖ್ಯ ರಸ್ತೆಯಿಂದ ಎಂ.ಇ.ಐ ರಸ್ತೆಯ ಮೂಲಕ ಬೆಂಗಳೂರು ನಗರ ಕಡೆಗೆ ಬರುವ ವಾಹನಗಳು ಕಂಠೀರವ ಸ್ಟುಡಿಯೋ ಮುಖ್ಯರಸ್ತೆ ಮತ್ತು ಶಂಕರನಗರ ಮುಖ್ಯ ರಸ್ತೆಯಲ್ಲಿ ಸಾಗಿ ಮಹಾಲಕ್ಷ್ಮೀ ಲೇಔಟ್ ವಸುಧಾ ಡೆಂಟಲ್ ಕ್ಲೀನಿಕ್ ಬಳಿ ಎಡ ತಿರುವು ಪಡೆದು ಮಹಾಲಕ್ಷ್ಮೀ ಲೇಔಟ್ ಮುಖ್ಯ ರಸ್ತೆ ಮೂಲಕ ವೆಸ್ಟ್ ಆಫ್ ಕಾರ್ಡ್ ರಸ್ತೆ ಪ್ರವೇಶಿಸಬಹುದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:45 am, Sat, 28 September 24