AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ವೇಗದ ಮಿತಿ ಅಳವಡಿಕೆ, ಈ ಸಮಯದಲ್ಲಿ ಬೈಕ್ ಸಂಚಾರ ನಿಷೇಧ

ಕರ್ನಾಟಕದಲ್ಲೂ ಸಹ ರಸ್ತೆ ಅಪಘಾತದಲ್ಲಿ ಸಾಯುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನ ಸುತ್ತಮುತ್ತಲಿನ ಹೈವೇಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಬೆಂಗಳೂರು ಏರ್​​ಪೋರ್ಟ್​​ ರಸ್ತೆಯಲ್ಲಿ ವೇಗದ ಮಿತಿ ಅವಳವಡಿಕೆ ಮಾಡಲಾಗಿದೆ. ಇದೀಗ ಬೆಂಗಳೂರಿನ ನೈಸ್ ರಸ್ತೆಯಲ್ಲೂ ಸಹ ವಾಹನಗಳಿಗೆ ವೇಗದ ಮಿತಿ ಅವಳವಡಿಸಲಾಗಿದೆ.

ಬೆಂಗಳೂರಿನ ನೈಸ್ ರಸ್ತೆಯಲ್ಲಿ ವೇಗದ ಮಿತಿ ಅಳವಡಿಕೆ, ಈ ಸಮಯದಲ್ಲಿ ಬೈಕ್ ಸಂಚಾರ ನಿಷೇಧ
ನೈಸ್ ರೋಡ್
ಶಿವಪ್ರಸಾದ್​ ಬಿ.
| Edited By: |

Updated on:Aug 02, 2024 | 7:06 PM

Share

ಬೆಂಗಳೂರು, (ಆಗಸ್ಟ್​ 02): ಅಪಘಾತಗಳನ್ನು ನಿಯಂತ್ರಿಸಲು ಬೆಂಗಳೂರಿನ ನೈಸ್ ರಸ್ತೆಯಲ್ಲಿ ವಾಹನಗಳ ವೇಗದ ಮಿತಿ ಅಳವಡಿಕೆ ಮಾಡಲಾಗಿದೆ. ಇದರ ಜೊತೆಗೆ ರಾತ್ರಿ 10 ಗಂಟೆಯಿಂದ ಮುಂಜಾನೆ 6 ಗಂಟೆಯವರಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ(ಬೈಕ್) ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಈ ಕ್ರಮಕೈಗೊಂಡಿದೆ.

ನಿಯಮ ಪಾಲನೆ ಜೊತೆಗೆ ಮಾರ್ಗ ಸೂಚಿಗಳಿದರೂ ಸಹ ಅವುಗಳನ್ನು ವಾಹನ ಚಾಲಕರು ಪಾಲನೆ ಮಾಡುತ್ತಿಲ್ಲ. ಅಜಾಗರೂಕತೆ ಚಾಲನೆ, ನಿರ್ಲಕ್ಷ್ಯತೆಯಿಂದ ರಸ್ತೆ ಅಪಘಾತ ಹೆಚ್ಚಾಗುತ್ತಿವೆ. ಈ ಹಿನ್ನೆಲೆ‌ ನೈಸ್ ರಸ್ತೆಯ ಸುತ್ತುಮುತ್ತಲಿನರು ಒಟ್ಟು ಎಂಟು ಸಂಚಾರಿ ಪೊಲೀಸ್​ ಠಾಣೆಯ ಠಾಣಾಧಿಕಾರಿಗಳ ವರದಿ ಆಧರಿಸಿ ಆಯುಕ್ತ ದಯಾನಂದ ಅವರು ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್​​ನಲ್ಲಿ ಘನ ವಾಹನ ಸಂಚಾರಕ್ಕೆ ಮತ್ತೆ ನಿರ್ಬಂಧ ಸಾಧ್ಯತೆ

ನೈಸ್​ ರಸ್ತೆಯಲ್ಲಿ ಸಂಭವಿಸುತ್ತಿರುವ ವಾಹನಗಳ ಅಪಘಾತಗಳ ಬಗ್ಗೆ ಕಾಮಾಕ್ಷಿ ಪಾಳ್ಯ, ಬ್ಯಾಟರಾಯನಪುರ, ಕೆಂಗೇರಿ, ಹುಳಿಮಾವು, ತಲಘಟ್ಟಪುರ, ಎಲೆಕ್ಟ್ರಾನಿಕ್ ಸಿಟಿ,ಜ್ನಾನಭಾರತಿ, ಕೆ.ಎಸ್ ಠಾಣೆಯ ಠಾಣಾಧಿಕಾರಿಗಳು ವರದಿ ನೀಡಿದ್ದರು. ಇವರ ವರದಿ ಆಧಾರದ ಮೇಲೆ ಈ ಕ್ರಮಕೈಗೊಳ್ಳಲಾಗಿದೆ. ಇನ್ನು ಈ ಆದೇಶದ ನಿಯಮ ಉಲ್ಲಂಘಿಸುವವರ ಮೇಲೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ.  ಮೂರು ವರ್ಷಗಳಲ್ಲಿ ಅಂದರೆ 2022, 23 ಮತ್ತು 2024ರಲ್ಲಿ (ಜೂನ್) ಈ ನೈಸ್​ ರಸ್ತೆಯಲ್ಲಿ ಸಂಭಿಸಿದ ಅಪಘಾತಗಳ ಅಂಕಿಸಂಖ್ಯೆ ಈ ಕೆಳಗಿನಂತಿದೆ.

ನೈಸ್ ರಸ್ತೆ ಅಪಘಾತಗಳಾದ ಸಂಖ್ಯೆ ಹಾಗೂ ವರ್ಷ

  • 2022 : ಮಾರಣಾಂತಿಕ ಅಫಘಾತಗಳ ಸಂಖ್ಯೆ 42, ಮಾರಣಾಂತಿಕವಲ್ಲದ ಅಪಘಾತಗಳು 69.
  • 2023: ಮಾರಣಾಂತಿಕ ಅಪಘಾತಗಳ ಸಂಖ್ಯೆ 37,  ಮಾರಣಾಂತಿಕವಲ್ಲದ ಅಪಘಾತಗಳು 83.
  •  2024 (ಜೂನ್ ವರಗೆ): ಮಾರಣಾಂತಿಕ ಅಫಘಾತಗಳ ಸಂಖ್ಯೆ 13, ಮಾರಣಾಂತಿಕವಲ್ಲದ ಅಪಘಾತಗಳು 52.

ಹೀಗೆ ವರ್ಷದಿಂದ ವರ್ಷಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ಹಾಗೂ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ವೇನಲ್ಲೂ ಸಹ ವಾಹನಗಳಿಗೆ ವೇಗ ಮಿತಿ ಅಳವಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Fri, 2 August 24

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು