AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 1ರ ಮಧ್ಯಾಹ್ನದಿಂದ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್​​ವರೆಗೆ ವಾಹನ ಸಂಚಾರ ನಿಷೇಧ

ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜಕುಮಾರ್​ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನ ಸೌಧ ಮುಂಭಾಗ ಆಯೋಜನೆ ಮಾಡಲಾಗಿದೆ.

ನವೆಂಬರ್ 1ರ ಮಧ್ಯಾಹ್ನದಿಂದ ಕೆ.ಆರ್.ವೃತ್ತದಿಂದ ತಿಮ್ಮಯ್ಯ ಜಂಕ್ಷನ್​​ವರೆಗೆ ವಾಹನ ಸಂಚಾರ ನಿಷೇಧ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 31, 2022 | 8:14 PM

Share

ಬೆಂಗಳೂರು: ಕನ್ನಡ ರಾಜ್ಯೋತ್ಸವ (Kannada Rajyotsava) ಹಾಗೂ ಪುನೀತ್ ರಾಜಕುಮಾರ್​ (Puneet Rajkumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನ ಸೌಧ ಮುಂಭಾಗ ಆಯೋಜನೆ ಮಾಡಲಾಗಿದೆ. ಈ ನಿಮಿತ್ತ ಸಂಚಾರ ದಟ್ಟಣೆ ಸಾಧ್ಯತೆ ಇದ್ದು, ನಾಳೆ (ನ.1) ರ ಮಧ್ಯಾಹ್ನ 1 ಗಂಟೆ ವೇಳೆಗೆ ಕೆ.ಆರ್.ವೃತ್ತದಿಂದ (KR Circle) ತಿಮ್ಮಯ್ಯ ಜಂಕ್ಷನ್​​ವರೆಗೆ ಖಾಸಗಿ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕರು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ಮತ್ತು ಮೇಟ್ರೋ ಬಳಸುವಂತೆ ಸಂಚಾರಿ ಪೋಲಿಸರು ಮನವಿ ಮಾಡಿದ್ದಾರೆ.

ಪವರ್​ ಸ್ಟಾರ್​ ಪುನೀತ್​ ರಾಜಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ

ಯುವ ರತ್ನ, ಪವರ್​ ಸ್ಟಾರ್​ ಪುನೀತ್​ ರಾಜಕುಮಾರ್​ ಅವರಿಗೆ ನಾಳೆ (ನ.1) ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ  ಮಾಡಲಾಗುತ್ತದೆ. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮೇಲೆ ಕಂದಾಯ ಸಚಿವ ಆರ್. ಅಶೋಕ್ ಅವರ ನೇತೃತ್ವದಲ್ಲಿ ನಾಳೆ ಸಂಜೆ 5:00 ರಿಂದ 6:30 ವರೆಗೆ   ಕಾರ್ಯಕ್ರಮ ನಡೆಯುತ್ತೆ.  ವೇದಿಕೆ ಮುಂಭಾಗ ಕಾರ್ಯಕ್ರಮ ವೀಕ್ಷಣೆಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ರಸ್ತೆ ಬದಿಯಲ್ಲಿ ಜನರಿಗೆ ನಿಂತು ನೋಡೋಕೆ ಅವಕಾಶ ಮಾಡಿಕೊಲಾಗುತ್ತೆ,  ಜೊತೆಗೆ ಎಲ್ ಇಡಿ ವ್ಯವಸ್ಥೆ ಕೂಡ ಇರುತ್ತೆ.

ನಾಳೆ ರಜೆ ಇರೋದರಿಂದ ನಾಳೆ ವಿಧಾನಸೌದ ಮುಂದಿನ ರಸ್ತೆ ಬಂದ್ ಮಾಡಲಾಗುತ್ತೆ. ಪಾಸ್ ಇರೋರಿಗೆ ಕಬ್ಬನ್ ಪಾರ್ಕ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳಿಗೆ ಮಾತ್ರ ವಿಧಾನಸೌದದಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಮಂಜುಳಾ ತಿಳಿಸಿದ್ದಾರೆ.

ಗಣ್ಯರ ಆಗಮನ

ನಾಳೆಯ ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ಪುನೀತ್‌ ಅಭಿಮಾನಿಗಳು ಮಧ್ಯಾಹ್ನ 2 ಗಂಟೆಗೆ ಫ್ರೀಡಂಪಾರ್ಕ್‌ನಿಂದ ವಿಧಾನಸೌಧದವರೆಗೂ ಬೃಹತ್ ಮೆರವಣಿಗೆ ಮೂಲಕ ಆಗಮಿಸಲಿದ್ದಾರೆ.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಡಾ.ರಾಜ್‌ ಕುಟುಂಬಸ್ಥರು ನಾಳೆ ಸಂಜೆ 4ಕ್ಕೆ ವಿಧಾನಸೌಧದತ್ತ ಆಗಮಿಸಲಿದ್ದಾರೆ. ತೆಲಗು ನಟ ಜೂ.ಎನ್‌ಟಿಆರ್‌ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಪುನೀತ್‌ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಇನ್ನು ಸೂಪರ್​ ಸ್ಟಾರ್​ ತಮಿಳು ನಟ ರಜನಿಕಾಂತ ಅವರು ಕೂಡ ಬೆಳಗ್ಗೆ 11.30ಕ್ಕೆ ಬೆಂಗಳೂರಿಗೆ ಆಗಮಿಸಿ, ಖಾಸಗಿ ಹೋಟೆಲ್‌ಗೆ ತೆರಳಲಿದ್ದಾರೆ. ಕಾರ್ಯಕ್ರಮಕ್ಕೆ ಇನ್ಫೋಸಿಸ್​ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಆಹ್ವಾನ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Mon, 31 October 22

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ