Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್
ಉಚಿತ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ವ್ಯಾಪಾರಿಯೊಬ್ಬರ ಮೇಲೆ ಚಾಕು ಇರಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿ ಪಾನಿಪುರಿ ಕೇಳಿದ್ದು, ವ್ಯಾಪಾರಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಬೆಂಗಳೂರು, ಡಿಸೆಂಬರ್ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ ಅಂಗಡಿಗೆ ಬಂದಿದ್ದು, ಫ್ರೀಯಾಗಿ ತನಗೆ ಪಾನಿಪುರಿ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಆದರೆ ತನ್ನ ದೈನಂದಿನ ಜೀವನಕ್ಕೆ ಇದೇ ವ್ಯಾಪಾರ ನಂಬಿಕೊಂಡಿದ್ದ ವ್ಯಾಪಾರಿ, ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, ಈ ವೇಳೆ ಏಕಾಕಿ ಆರೋಪಿ ಚಾಕು ತೆಗೆದು ವ್ಯಾಪಾರಿಯ ಹೊಟ್ಟೆಯ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಜಾಗದ ವಿಚಾರಕ್ಕೆ ನಡೀತು ಬರ್ಬರ ಕೊಲೆ; ತೋಟದಲ್ಲೇ ಹರಿದ ನೆತ್ತರು
ಘಟನೆಯಿಂದಾಗಿ ಪಾನಿಪುರಿ ಅಂಗಡಿಯ ಬಳಿಯೇ ವ್ಯಾಪಾರಿ ರಕ್ತದ ಮಡುವಲ್ಲಿ ಬಿದ್ದಿದ್ದನ್ನು ಕಂಡವರು ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುವ ಜೊತೆಗೆ ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯದ ಹೊರತಾಗಿಯೂ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರತ್ಯಕ್ಷದರ್ಶಿಗಳ ಹೇಳಿಕೆ ಮತ್ತು ಸಮೀಪದ ಅಂಗಡಿಗಳ ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:28 am, Fri, 19 December 25




