AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬಂಧನವಾಗಿದ್ದು, ಸಿಐಡಿ ತನಿಖೆ ತೀವ್ರಗೊಂಡಿದೆ. ಇದರಿಂದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರು, ಅಧಿಕಾರಿಗಳು ಹಾಗೂ ಸದಸ್ಯರಲ್ಲಿ ತೀವ್ರ ಆತಂಕ ಶುರುವಾಗಿದ್ದು, ಕಳೆದ 3 ವರ್ಷಗಳಲ್ಲಿ KPSC ನಡೆಸಿರುವ ನಾಲ್ಕು ಪರೀಕ್ಷೆಗಳ ಬಗ್ಗೆಯೂ ಅಧಿಕಾರಿಗಳು ವಿವರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ: ಜ್ಞಾನೇಂದ್ರ ಕುಮಾರ್​​ ಬಂಧನದ ಬೆನ್ನಲ್ಲೇ ಉಳಿದವರಿಗೂ ಢವಢವ
ಜ್ಞಾನೇಂದ್ರ ಕುಮಾರ್​​ ಬಂಧನImage Credit source: Tv9 Kannada
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 30, 2026 | 2:08 PM

Share

ಮುಖ್ಯಾಂಶಗಳು

  • ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ
  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ ಬಂಧನ
  • ಜ್ಞಾನೇಂದ್ರ ​​ ಬಂಧನದಿಂದ ಉಳಿದವರಿಗೂ ಭಯ

ಬೆಂಗಳೂರು, ಆಗಸ್ಟ್​​ 30: ಪಶು ವೈಧ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ಮತ್ತಷ್ಟು ಚುರುಕೊಂಡಿದ್ದು, ಪ್ರಕರಣ ಸಂಬಂಧ ಎಕ್ಸಾಂ ಕಂಟ್ರೋಲರ್​​ ಆಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್​​ರನ್ನು ಈಗಾಗಲೇ ಅಧಿಕಾರಿಗಳು ಬಂಧಿಸಿದ್ದಾರೆ. ಆ ಬೆನ್ನಲ್ಲೇ ಸಿಐಡಿಯಿಂದ ಮತ್ತಷ್ಟು ಮಂದಿ ಅರೆಸ್ಟ್​​ ಆಗುವ ಮುನ್ಸೂಚನೆ ಸಿಕ್ಕಿರುವ ಕಾರಣ ಕೆಪಿಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​, ಅಧಿಕಾರಿಗಳು ಮತ್ತು ಕೆಲ ಸದಸ್ಯರಿಗೆ ಢವಢವ ಶುರುವಾಗಿದೆ. ತನಿಖೆ ವೇಳೆ ಕೆಲ ಸಾಕ್ಷ್ಯಗಳು ಪತ್ತೆ ಹಾಗೂ ವಿಚಾರಣೆ ವೇಳೆ ಸರಿಯಾಗಿ ಸಹಕರಿಸದ ಹಿನ್ನೆಲೆ ಜ್ಞಾನೇಂದ್ರ ಕುಮಾರ್​​ರನ್ನು ನಿನ್ನೆ ಬಂಧಿಸಲಾಗಿತ್ತು.

ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡ?

ಪ್ರಕರಣ ಸಂಬಂಧ ಮೊನ್ನೆ (ಆಗಸ್ಟ್​​ 28) ರಾತ್ರಿ 11 ಗಂಟೆಯವರೆಗೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್​​ ವಿಚಾರಣೆ ನಡೆಸಿದ್ದ ಸಿಐಡಿ, ನಿನ್ನೆ ಕೂಡ ಮಧ್ಯರಾತ್ರಿವರೆಗೂ ವಿಚಾರಣೆ ನಡೆಸಿತ್ತು. ತನಿಖೆ ವೇಳೆ ಓಎಂಆರ್ ಶೀಟ್ ತಿದ್ದುಪಡಿಯಲ್ಲಿ ಜ್ಞಾನೇಂದ್ರ ಕೈವಾಡದ ಬಗ್ಗೆ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಕೆಲ ಹೋಟೆಲ್ ಹಾಗೂ ರೆಸಾರ್ಟ್​​ಗಳಿಗೆ ಕರೆದೊಯ್ದು ಅಭ್ಯರ್ಥಿಗಳಿಗೆ ಟ್ರೈನಿಂಗ್ ನೀಡಿರುವ ವಿಚಾರದಲ್ಲೂ ಇವರ ಪಾತ್ರ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಐಎಎಸ್ ಅಧಿಕಾರಿಯನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಈ ಹಿಂದಿನ ನೇಮಕಾತಿ ಪರೀಕ್ಷೆಗಳ ಬಗ್ಗೆಯೂ ತನಿಖೆ

ಕೆಪಿಎಸ್​​ಸಿ ನೇಮಕಾತಿಯಲ್ಲಿ ಅಕ್ರಮ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಈ ಹಿಂದಿನ ಪರೀಕ್ಷೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಿದ್ದಾರೆ. 3 ವರ್ಷಗಳಲ್ಲಿ ನಡೆದ ನಾಲ್ಕು ಪರೀಕ್ಷೆಗಳ ಬಗ್ಗೆ ವಿವರ ಪಡೆದುಕೊಳ್ಳಲಾಗಿದೆ. ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ ಪರೀಕ್ಷೆ ಸೇರಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಬಗ್ಗೆಯೂ ಕೆದಕಿದ್ದಾರೆ. ಈ ನಾಲ್ಕೂ ನೇಮಕಾತಿಗಳ ವೇಳೆ ಅಕ್ರಮ ಎಸಗಿರುವ ಶಂಕೆ ಹಿನ್ನೆಲೆ, ಆ ಬಗ್ಗೆಯೂ ತನಿಖೆ ನಡೆಸಲಾಗ್ತಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:27 am, Sun, 30 August 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು