AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾರ ಹಾಕಿ, ಪುಸ್ತಕ ನೀಡಿ ಸಿಎಂ ಸ್ವಾಗತ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ ಆಗಮನಿಸಿದ್ದು ದೇವನಹಳ್ಳಿ ಬಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಹಾರ ಹಾಕಿ, ಪುಸ್ತಕ ನೀಡಿ ಸ್ವಾಗತಿಸಿ ಬರ ಮಾಡಿಕೊಂಡಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾರ ಹಾಕಿ, ಪುಸ್ತಕ ನೀಡಿ ಸಿಎಂ ಸ್ವಾಗತ
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಾರ ಹಾಕಿ, ಪುಸ್ತಕ ನೀಡಿ ಸಿಎಂ ಸ್ವಾಗತ
TV9 Web
| Edited By: ಆಯೇಷಾ ಬಾನು|

Updated on:Aug 16, 2021 | 12:25 PM

Share

ದೇವನಹಳ್ಳಿ: ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು(Venkaiah Naidu) ಆಗಮನಿಸಿದ್ದು ದೇವನಹಳ್ಳಿ ಬಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್(Thawar Chand Gehlot), ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಹಾರ ಹಾಕಿ, ಪುಸ್ತಕ ನೀಡಿ ಸ್ವಾಗತಿಸಿ ಬರ ಮಾಡಿಕೊಂಡಿದ್ದಾರೆ. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ , ಸಂಸದರಾದ ಪಿಸಿ ಮೋಹನ್ ಸೇರಿದಂತೆ ಕೆಲ ಸಚಿವರು, ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.

ಸದ್ಯ ಬೆಂಗಳೂರಿನತ್ತ ರಾಷ್ಟ್ರಪತಿ ವೆಂಕಯ್ಯನಾಯ್ಡು ಪ್ರಯಾಣ ಬೆಳೆಸಿದ್ದಾರೆ. ಇಂದು ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿನತ್ತ ಹೊರಟಿದ್ದಾರೆ. ಇದಾದ ಬಳಿಕ ಆರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಏರ್ಪೋಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಇನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಏರ್ಪೋಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಏರ್ಪೋಟ್ ಆಗಮನ ದ್ವಾರ ಸೇರಿದಂತೆ ವಿಐಪಿ ಟರ್ಮಿನಲ್ ಬಳಿ ಬಂದೋಬಸ್ತ್ ಮಾಡಲಾಗಿದೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರ ಕಾರ್ಯಕ್ರಮ ಪಟ್ಟಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 6 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 16- ಜಕ್ಕೂರಿನ ಜವಹರಲಾಲ್ ನೆಹರು ಅಡ್ವಾನ್ಸ್ಡ್ ಸೈಂಟಿಫಿಕ್ ಸೆಂಟರ್ ರಿಸರ್ಚ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗಿ ಆಗಸ್ಟ್ 18-ವಿಧಾನಸೌಧದ ಬ್ಯಾಂಕ್ವೇಟ್ ಹಾಲ್​ನಲ್ಲಿ ನಡೆಯುವ ಎಫ್​ಕೆಸಿಸಿ ಕಾರ್ಯಕ್ರಮದಲ್ಲಿ ಭಾಗಿ ಆಗಸ್ಟ್ 20-ತುಂಗಭದ್ರಾ ಡ್ಯಾಂ ವೀಕ್ಷಣೆ ಆಗಸ್ಟ್ 21- ಹಂಪಿಯಲ್ಲಿ ವಿಶ್ವ ಪರಂಪರೆಯ ತಾಣಗಳ ವೀಕ್ಷಣೆ ಆಗಸ್ಟ್ 22- ಹುಬ್ಬಳ್ಳಿಯಿಂದ ವಾಪಸ್ ದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ವಿಚಾರದಲ್ಲಿ ಭಾರತವು ಅಮೆರಿಕದೊಂದಿಗೆ ಭಿನ್ನಾಭಿಪ್ರಾಯ ಹೊಂದಿದೆ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್

Published On - 12:13 pm, Mon, 16 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು