ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ

| Updated By: ಗಂಗಾಧರ​ ಬ. ಸಾಬೋಜಿ

Updated on: May 24, 2022 | 1:08 PM

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಟಿ.ಎ ಶರವಣರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ಎರಡನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ
ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಟಿ.ಎ ಶರವಣ
Follow us on

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್​​ ಅಭ್ಯರ್ಥಿಯಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಟಿ.ಎ ಶರವಣರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ಎರಡನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಬಳಿಕ ಟಿ.ಎ ಶರವಣ ಮಾತನಾಡಿದ್ದು, ಸಣ್ಣ ಮಟ್ಟದ ಕಾರ್ಯಕರ್ತ ನಾನು. ಆದರೆ ಜೆಡಿಎಸ್ ವರಿಷ್ಟರು ನನ್ನ ಗುರುತಿಸಿ ಎರಡನೇ ಬಾರಿಗೆ ಅವಕಾಶ ಕೊಟ್ಟಿದ್ದಾರೆ. ಮತ್ತೆ ಮೂರನೇ ಬಾರಿಗೆ ಕುಮಾರಣ್ಣನ ಪಟ್ಟಾಭಿಷೇಕ ಆಗಬೇಕು ಅನ್ನೋದೇ ನನ್ನ ಆಸೆ. ಅದಕ್ಕಾಗಿ ನಾನು ಎಲ್ಲ ಶ್ರಮಹಾಕಿ ಕೆಲಸ ಮಾಡುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿಯಲ್ಲೂ ಚುಕ್ಕಾಣಿ ಹಿಡಿಯುವುದಕ್ಕೆ ಕೆಲಸ ಮಾಡುತ್ತೇವೆ. ಬಿಜೆಪಿ ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷವನ್ನು ಜನ‌ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ನಮ್ಮೆಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆಗೆ ವಿನೂತನ ಯೋಜನೆ, ಪ್ರತಿ ಜಿಲ್ಲೆಗೆ 1 ಲಕ್ಷ 80 ಸಾವಿರ ರೂ. ಬಿಡುಗಡೆ; ಸಚಿವ ಸುನಿಲ್ ಕುಮಾರ್ ಮಾಹಿತಿ

ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶರವಣ ಕಣಕ್ಕಿಳಿಯಲಿದ್ದು ಈ ಕುರಿತಾಗಿ ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಶರವಣ ಅವರನ್ನು ಅಭ್ಯರ್ಥಿ ಮಾಡಿದಾಗ ಹಲವು ಅಭಿಪ್ರಾಯ ವ್ಯಕ್ತವಾಗಿತ್ತು. ಈ ಭಾರಿ ಆ ವಾತವರಣ ಇರಲಿಲ್ಲ. ಕಳೆದ ನಾಲೈದು ವರ್ಷದಲ್ಲಿ ಬೆಂಗಳೂರಿನಲ್ಲಿ ವಿಶ್ವಾಸ ಮಾಡಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ‌ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದ್ದೇವೆ. ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದಾಗ ಆತಂಕ ಭೀತಿಯಿಲ್ಲದೇ ಪಕ್ಷವನ್ನು ಡಿಫೆಂಡ್ ಮಾಡಿಕೊಂಡಿದ್ದರು. ಬಸವನಗುಡಿ, ಚಿಕ್ಕಪೇಟೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಟಾಸ್ಕ್ ಕೊಟ್ಟಿದ್ದೇವೆ. ಈ‌ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಶಾಸಕಾಂಗದ ಅಧ್ಯಕ್ಷರು ಯಾವ ಜಾತ್ಯಾತೀತಿತರು ಅಂತ ಜರಿದರು. ಮೊನ್ನೆ ತುಮಕೂರಿನಲ್ಲಿ ಕೂಡ ಲಘುವಾಗಿ ಮಾತನಾಡಿದರು. ಬಿಜೆಪಿ ಜೊತೆ ಸರ್ಕಾರ ಮಾಡಿದಾಗ ಕೋಮು ಸೌಹಾರ್ದ ಕೆಡಿಸುವ ಪರಿಸ್ಥಿತಿ ಆಗಲು ಅವಕಾಶ ಕೊಟ್ಟಿಲ್ಲ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.