AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ-ವಿಕಾಸಸೌಧಕ್ಕೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯ ಕೊಡಿ

ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧ ಮತ್ತು ವಿಕಾಸಸೌಧಗಳಿಗೆ ಕನ್ನಡ ಘೋಷವಾಕ್ಯಗಳನ್ನು ಆಹ್ವಾನಿಸಿದೆ. ಜನಪದ ಸೂಕ್ತಿಗಳು, ಚಳವಳಿ ಘೋಷಣೆಗಳು, ಸಿನಿಮಾ ಗೀತೆಗಳು ಸೇರಿದಂತೆ ವಿವಿಧ ರೀತಿಯ ಘೋಷವಾಕ್ಯಗಳನ್ನು ಸಲ್ಲಿಸಬಹುದು. ಜೂನ್ 30 ಕೊನೆಯ ದಿನಾಂಕ. ಘೋಷವಾಕ್ಯಗಳನ್ನು ಕಳುಹಿಸುವುದು ಹೇಗೆ? ನಿಯಮ ಏನು? ಇಲ್ಲಿದೆ ವಿವರ

ವಿಧಾನಸೌಧ-ವಿಕಾಸಸೌಧಕ್ಕೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯ ಕೊಡಿ
ವಿಧಾನಸೌಧ
ವಿವೇಕ ಬಿರಾದಾರ
|

Updated on: Jun 20, 2025 | 6:22 PM

Share

ಬೆಂಗಳೂರು, ಜೂನ್​ 20: ವಿಧಾನಸೌಧ (Vidhan Soudha) ಮತ್ತು ವಿಕಾಸಸೌಧ (Vikasa Soudha) ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರಗಳಾಗಿವೆ. ರಾಜ್ಯ ಮತ್ತು ಹೊರರಾಜ್ಯದಿಂದ ವಿಧಾನಸೌಧ ವೀಕ್ಷಿಸಲು ಬರುವ ಜನರಲ್ಲಿ ಕನ್ನಡದ (Kannada) ಅಭಿಮಾನ ಜಾಗೃತಗೊಳ್ಳುವಂತೆ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿನೂತನ ಯೋಜನೆ ರೂಪಿಸಿದೆ. ವಿಧಾನಸೌಧ ಮತ್ತು ವಿಕಾಸಸೌಧದ ಕಟ್ಟಡಗಳಿಗೆ ಕನ್ನಡತನ ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸಿದ್ದು, ಸಾರ್ವಜನಿಕರಿಂದ ಘೋಷವಾಕ್ಯಗಳನ್ನು ಆಹ್ವಾನಿಸಿದೆ.

ಸಾರ್ವಜನಿಕರು ಕನ್ನಡ ಮತ್ತು ಕರ್ನಾಟಕದ ಕುರಿತಾದ ಘೋಷವಾಕ್ಯಗಳನ್ನು ಕಳುಹಿಸಬಹುದಾಗಿದೆ. ಸಾಹಿತ್ಯಿಕ ಘೋಷವಾಕ್ಯಗಳಲ್ಲದೆ, ಜನಪದದ ಸೂಕ್ತಿಗಳು, ಚಳವಳಿಗಳ ಘೋಷಣೆಗಳು, ಸಿನಿಮಾ ಗೀತೆಗಳನ್ನು ಸಹ ಅವಲೋಕಿಸಿ ಮೌಲ್ಯಯುತ ಸಲಹೆಗಳನ್ನು ನೀಡಬಹುದಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಿರಾಶಾದಾಯಕ ನುಡಿಗಳು, ವಿವಾದಾತ್ಮಕ ಹೇಳಿಕೆಗಳನ್ನು ಪರಿಗಣಿಸಲಾಗುವುದಿಲ್ಲ. ಗರಿಷ್ಠ ಎರಡು ಸಾಲುಗಳಲ್ಲಿ ಈ ಘೋಷವಾಕ್ಯಗಳು ಇರಬೇಕು. ರಚನೆಕಾರರ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕು. chairman.kanpra@gmail.com ಗೆ ಘೋಷವಾಕ್ಯ ಕಳುಹಿಸಬೇಕು. ಜೂನ್‌ 30 ಕೊನೆಯ ದಿನಾಂಕ. ಸಂಪರ್ಕ ಸಂಖ್ಯೆ ಮತ್ತು ವಿಳಾಸ ಕಡ್ಡಾಯವಾಗಿ ನಮೂದಿಸಬೇಕು’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಭೂಕುಸಿತ: ಪಶ್ಚಿಮ ಘಟ್ಟದ ಧಾರಣ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಘೋಷವಾಕ್ಯ ಕಳುಹಿಸಲು ಈ ನಿಯಮ ಪಾಲಿಸುವುದು ಕಡ್ಡಾಯ

  • ಘೋಷವಾಕ್ಯಗಳು ಗರಿಷ್ಠ ಎರಡು ಸಾಲುಗಳಲ್ಲಿ ಇರಬೇಕು.
  • ನಿರಾಶಾದಾಯಕ ನುಡಿಗಳು, ವಿವಾದಾತ್ಮಕ ಹೇಳಿಕೆಗಳನ್ನು ಪರಿಗಣಿಸಲಾಗುವುದಿಲ್ಲ.
  • ಸಾರ್ವಜನಿಕರು ಸಾಹಿತ್ಯಿಕ ಘೋಷವಾಕ್ಯಗಳಲ್ಲದೆ ಜನಪದದ ಸೂಕ್ತಿಗಳು, ಚಳುವಳಿಗಳ ಘೋಷಣೆಗಳು, ಸಿನಿಮಾ ಗೀತೆಗಳನ್ನು ಅವಲೋಕಿಸಿ ಮೌಲ್ಯಯುತ ಸಲಹೆಗಳನ್ನೂ ನೀಡಬಹುದು.

ಘೋಷವಾಕ್ಯ ಹೇಗೆ ಕಳುಹಿಸುವುದು?

  • ಘೋಷವಾಕ್ಯಗಳನ್ನು ಇ-ಮೇಲ್ ​chairman.kanpra@gmail.com ಮುಖಾಂತರ ಕಳುಹಿಸಬೇಕು.
  • ಘೋಷವಾಕ್ಯ ಕಳಹಿಸುವವರು ಕಡ್ಡಾಯವಾಗಿ ಹೆಸರು, ಸಂಪರ್ಕ ಸಂಖ್ಯೆ ನಮೂದಿಸಬೇಕು.
  • ಘೋಷವಾಕ್ಯ ಕಳುಹಿಸಲು ಜೂನ್​ 30 ಕೊನೆಯ ದಿನವಾಗಿದೆ.

ಇದನ್ನೂ ಓದಿ: ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ: ಟಿಕೆಟ್​ ಬುಕ್ಕಿಂಗ್​ ಎಲ್ಲಿ ಮಾಡಬೇಕು, ದರ ಎಷ್ಟು? ಇಲ್ಲಿದೆ ವಿವರ

ವಿಧಾನಸೌಧದಲ್ಲಿ ಭುವನೇಶ್ವರಿ ದೇವಿ ಮೂರ್ತಿ ಸ್ಥಾಪನೆ

2025ರ ಜನವರಿ 27 ರಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗಿದೆ. ಈ ಕಂಚಿನ ಪ್ರತಿಮೆಯನ್ನು ಶಿಲ್ಪಿ ಶ್ರೀಧರ್ ಮೂರ್ತಿ ನಿರ್ಮಾಣ ಮಾಡಿದ್ದಾರೆ. ಭುವನೇಶ್ವರಿ ದೇವಿ ಪ್ರತಿಮೆ 43.6 ಅಡಿ ಎತ್ತರ ಇದೆ. ಬರೋಬ್ಬರಿ 21.24 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ