AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರಿಂದ ವಿಧಾನಸೌಧ ಚಲೋ: ಪೊಲೀಸರು, ರೈತರ ನಡುವೆ ಮಾತಿನ ಚಕಮಕಿ, ಕೆಲ ರೈತರು ಪೊಲೀಸರ ವಶ

Vidhana Soudha Chalo: ಬೇರೆ ಬೇರೆ ರಾಜ್ಯದಿಂದ ರೈತ ಮುಖಂಡರು ಆಗಮಿಸಿದ್ದು ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರಿಂದ ವಿಧಾನಸೌಧ ಚಲೋ: ಪೊಲೀಸರು, ರೈತರ ನಡುವೆ ಮಾತಿನ ಚಕಮಕಿ, ಕೆಲ ರೈತರು ಪೊಲೀಸರ ವಶ
ರೈತರಿಂದ ವಿಧಾನಸೌಧ ಚಲೋ
TV9 Web
| Edited By: |

Updated on:Sep 26, 2022 | 1:17 PM

Share

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರಿಂದ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ತಮಿಳುನಾಡು, ಆಂಧ್ರ, ಉತ್ತರಪ್ರದೇಶ ಸೇರಿದಂತೆ ಬೇರೆ ಬೇರೆ ರಾಜ್ಯದಿಂದ ರೈತ ಮುಖಂಡರು ಆಗಮಿಸಿದ್ದು ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಪ್ರತಿಭಟನೆ ವೇಳೆ ಪೊಲೀಸರು, ರೈತರ ನಡುವೆ ಮಾತಿನ ಚಕಮಕಿ ನಡೆದಿದ್ದು ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಮತ್ತೊಂದು ಕಡೆ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ‍್ಯಾಲಿ ಹಿನ್ನೆಲೆ ಭದ್ರತೆಗೆ ಒಟ್ಟು 695 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಬ್ಬರು ಡಿಸಿಪಿ, ಆರು ಎಸಿಪಿಗಳು, 21 ಇನ್ಸ್​​ಪೆಕ್ಟರ್​ಗಳು, 47 ಸಬ್​ ಇನ್ಸ್​ಪೆಕ್ಟರ್​​​ಗಳು, 10 KSRP ತುಕಡಿ ನಿಯೋಜನೆ ಮಾಡಲಾಗಿದೆ. ಹಾಗೂ ರೈತರನ್ನು ವಶಕ್ಕೆ ಪಡೆಯಲು 15 BMTC ಬಸ್ ನಿಯೋಜನೆ ಮಾಡಿದ್ದಾರೆ.

ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಿಲ್ಲ

ರಾಜ್ಯದ ರೈತರು ಸರ್ಕಾರದ ನಡುವಳಿಕೆಗಳನ್ನು ಗಮನಿಸುತ್ತಿದ್ದಾರೆ. ಎರಡು ತಿಂಗಳಿಂದ ನಾವು ನಮ್ಮ ಸಮಸ್ಯೆಗಳ ಬಗ್ಗೆ ಮನವಿ ನೀಡಿದ್ದೇವೆ. ಆದ್ರೂ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಿಲ್ಲ. ಹಾಗಾಗಿ ನಾವು ಇವತ್ತು ಇಲ್ಲಿ ಸೇರಿದ್ದೇವೆ ನಮ್ಮ ನಡಿಗೆ ವಿಧಾನ ಸೌಧದ ಕಡೆಗೆ ನಡೆಯಲಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ:  Democratic Azad Party: ಹೊಸ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್

ವಿಧಾನಸೌಧಕ್ಕೆ ತೆರಳಿ‌ ನಾವು ನಮ್ಮ ಜನಪ್ರತಿನಿಧಿಗಳಿಗೆ ಹಾಗೂ ಸರ್ಕಾರಕ್ಕೆ ನಮ್ಮ ಮನವಿ ಸಲ್ಲಿಸಲ್ಲಿದ್ದೇವೆ. ರ‍್ಯಾಲಿಗೆ ಪರ್ಮಿಷನ್ ತೆಗೆದುಕೊಂಡಿಲ್ಲ ಎನ್ನುವ ವಿಚಾರಕ್ಕೆ, 20 ದಿನಗಳಿಂದ ನಾವು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳಿಗೆ, ಪೊಲೀಸ್ ಆಯುಕ್ತರಿಗೆ ಮನವಿ ನೀಡಿದ್ದೇವೆ. ನಮ್ಮ ಮನವಿ ಸ್ವೀಕರಿಸಿ ಚರ್ಚಿಸಿ ಪರಿಹಾರ ನೀಡಿದ್ರೆ ನಾವು ಇವತ್ತು ಈ ರೀತಿ ರ‍್ಯಾಲಿ ಮಾಡುವ ಅವಶ್ಯಕತೆ ಇರಲಿಲ್ಲ. ನಾವು ರೈತರು ನಮಗೆ ಎಲ್ಲಿ ಯಾವ ರೀತಿಯಲ್ಲಿ ಪರ್ಮಿಷನ್ ತೆಗೆದುಕೊಳ್ಳಬೇಕು‌ ಅನ್ನೋದು ತಿಳಿದಿಲ್ಲ. ರಾಷ್ಟ್ರಪತಿಗಳಿಗೆ ಅಗೌರವ ನೀಡುವ ಮನಸ್ಥಿತಿ ‌ನಮ್ಮದಲ್ಲ. ನಾವು ರೈತರು ಈ ದೇಶದ ಸಂವಿಧಾನ, ಕಾನೂನುಗಳನ್ನು ಗೌರವಿಸುವವರು. ಇವತ್ತು ಈ ಹೋರಾಟದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರೈತನು ಸಾವಿರ ರೈತರಿಗೆ ಸಮಾನ. ಪೊಲೀಸರು ಪ್ರತಿಭಟನೆ ಹತ್ತಿಕ್ಕು ಯತ್ನದಲ್ಲಿ ರೈತರಿಗೆ ಹಾನಿಯಾದ್ರೆ, ತೊಂದರೆಗಳಾದ್ರೆ ಅದರ ಪರಿಣಾಮ ಬೇರೆಯದ್ದೆ ರೀತಿಯಲ್ಲಿ ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ರೈತರ ಬೇಡಿಕೆಗಳೇನು?

  • ಪ್ರಸಕ್ತ ಸಾಲಿನ ಕಬ್ಬಿನ ಎಫ್.ಆರ್.ಪಿ. ದರ ಕನಿಷ್ಠ 3,500ರೂ ನಿಗದಿಯಾಗಬೇಕು
  • ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರದಿಂದ, ವಿದ್ಯುತ್ ಖಾಸಗೀಕರಣ ಕಾಯ್ದೆ ಮಾಡುವುದನ್ನು ಕೈಬಿಡಬೇಕು
  • ರೈತರ ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಡಾ . ಎಂ.ಎಸ್ . ಸ್ವಾಮಿನಾಥನ್ ವರದಿಯಂತೆ ಖಾತರಿ ಬೆಲೆ ಶಾಸನ ಜಾರಿಯಾಗಬೇಕು
  • ಮೂರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟ ಮಾಡಿದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು
  • ಕೊರೊನಾ ಲಾಕ್‌ಡೌನ್ ಸಂಕಷ್ಟ , ಮಳೆಹಾನಿ , ಅತಿವೃಷ್ಟಿ , ಬೆಳೆ ನಷ್ಟ , ಮೂರುವರೆ ಲಕ್ಷ ರೈತರ ಆತ್ಮಹತ್ಯೆ ಪರಿಗಣಿಸಿ ದೇಶದ ರೈತರ ಸಾಲ ಮನ್ನಾ ಆಗಬೇಕು
  • ಕೃಷಿ ಉಪಕರಣಗಳು, ಕೃಷಿ ಉತ್ಪನ್ನಗಳ ಮೇಲೆ ವಿಧಿಸಿರುವ ಜಿ.ಎಸ್.ಟಿ. ರದ್ದುಗೊಳಿಸಬೇಕು
  • ಫಸಲ್ ಭೀಮಾ ಬೆಳೆ ವಿಮೆ ಯೋಜನೆಯ ಮಾನದಂಡ ಬದಲಾಗಬೇಕು
  • ಅತಿವೃಷ್ಟಿ ಮಳೆ ಹಾನಿ ಎಲ್ಲ ಬೆಳೆಗಳಿಗೂ ಬೆಳೆ ವಿಮೆ ಸಿಗುವಂತಾಗಬೇಕು
  • ಅತಿವೃಷ್ಟಿ ಸಮಸ್ಯೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಸಾಲ ವಸೂಲಾತಿ ನಿಲ್ಲಬೇಕು
  • ಇರುವ ಸಾಲದ ಮೇಲೆ ಶೇಕಡ 25 ರಷ್ಟು ಹೆಚ್ಚುವರಿ ಸಾಲ ನೀಡಬೇಕು
  • ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು
  • ಬ್ಯಾಂಕುಗಳು ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ನೋಡಿ ಸಾಲ ಕೊಡುತ್ತೇವೆ ಎನ್ನುವುದನ್ನು ಕೈಬಿಡಬೇಕು ಇತ್ಯಾದಿ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:07 pm, Mon, 26 September 22