ಪಾಕ್ ಪರ ಘೋಷಣೆ ಪ್ರಕರಣ: FSL ವರದಿಯಲ್ಲಿ ಸತ್ಯ ಬಹಿರಂಗ, ಆರೋಪಿ ಬಂಧನಕ್ಕೆ ತಯಾರಿ

ಇಡೀ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆಯ ಎಫ್​ಎಸ್​ಎಲ್ ವರದಿ ಬಹಿರಂಗವಾಗಿದೆ. ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾಗಿದ್ದು ವಾಯ್ಸ್ ಮ್ಯಾಚ್ ಮಾಡಿ ಆರೋಪಿಯನ್ನು ಬಂಧಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಅನೇಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಪಾಕ್ ಪರ ಘೋಷಣೆ ಪ್ರಕರಣ: FSL ವರದಿಯಲ್ಲಿ ಸತ್ಯ ಬಹಿರಂಗ, ಆರೋಪಿ ಬಂಧನಕ್ಕೆ ತಯಾರಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ
Follow us
Prajwal Kumar NY
| Updated By: ಆಯೇಷಾ ಬಾನು

Updated on: Mar 02, 2024 | 7:04 AM

ಬೆಂಗಳೂರು, ಮಾರ್ಚ್.02: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ (Pakistan Zindabad slogans) ಘೋಷಣೆ ಕೂಗಿದ ಪ್ರಕರಣ ಸಂಬಂಧ ಎಫ್​ಎಸ್​ಎಲ್​ ವರದಿ (FSL Report) ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ. ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. FSL​ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಎಫ್​ಎಸ್​ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಎಫ್​ಎಸ್​ಎಲ್​ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.

7 ಮಂದಿ ವಿಚಾರಣೆ, 19 ಮಂದಿ ಬಾಕಿ

ವಿಧಾನಸೌಧ ಠಾಣೆ ಪೊಲೀಸರು ಈವರೆಗೆ 7 ಮಂದಿಯ ವಿಚಾರಣೆ ನಡೆಸಿದ್ದಾರೆ. ಮೂವರ ವಾಯ್ಸ್ ಸ್ಯಾಂಪಲ್ FSLಗೆ ರವಾನಿಸಿದ್ದಾರೆ. ವಿಚಾರಣೆಗೆ ಒಳಪಟ್ಟ ಎಲ್ಲರೂ ಪಾಕ್ ಪರ ಘೋಷಣೆ ಕೂಗಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಪೊಲೀಸರು 26 ಮಂದಿಯ ಪಟ್ಟಿ ಮಾಡಿದ್ದು, ಇನ್ನೂ 19 ಜನರ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದವರ ವಿಚಾರಣೆಯೋ ಅಥವಾ ಬಿರಿಯಾನಿ ತಿನ್ನಿಸಿ ವಾಪಸ್ಸು ಕಳಿಸಲಾಗುತ್ತಿದೆಯೋ? ಸಿಟಿ ರವಿ, ಬಿಜೆಪಿ ನಾಯಕ

‘ವರದಿ ಬಂದರೂ ಸರ್ಕಾರ ಬಹಿರಂಗ ಪಡಿಸಿಲ್ಲ’

ಇನ್ನು ಈ ಹಿಂದೆ ಎಫ್​ಎಸ್​ಎಲ್ ವರದಿ ಬಂದರೂ ಸರ್ಕಾರ ವರದಿಯನ್ನು ಬಹಿರಂಗ ಪಡಿಸಿರಲಿಲ್ಲ. ಹೀಗಾಗಿ ಬಿಜೆಪಿ ಕಿಡಿಕಾರಿತ್ತು. ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ರು. FSL ವರದಿಯಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದು ಗೊತ್ತಾಗಿದೆ. ರಾತ್ರಿ ವರದಿ ಬಂದರೂ ರಾಜ್ಯ ಸರ್ಕಾರ ಇನ್ನೂ ಬಹಿರಂಗ ಪಡಿಸಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

ಪಾಕ್ ಪರ ಘೋಷಣೆ ಕೂಗಿದವರನ್ನ ರಕ್ಷಿಸುತ್ತಿದ್ದಾರೆ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ರಕ್ಷಣೆ ಮಾಡಿದ್ದಾರೆ ಅಂತಾ ಮಾಜಿ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದರು. FSL ವರದಿ ಬರಲಿ ಅಂತಿದ್ದಾರೆ. ಒಬ್ಬರ ಕೊಲೆ ಆಗ್ತದೆ, ಆಗ ಪೋಸ್ಟ್ ಮಾರ್ಟಂ ವರದಿ ಬರಲಿ ಅಂತಾ ಕಾಯ್ತಾರಾ ಅರೆಸ್ಟ್ ಮಾಡ್ತಾರೆ ಎಂದು ಪ್ರಶ್ನಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ