ಬೆಂಗಳೂರು, ಮಾ.3: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ (Pro-Pak Slogan) ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ (Bengaluru) ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.
ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಪಾಕ್ ಪರ ಘೋಷಣೆ: ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ್ದ ಕಾಂಗ್ರೆಸ್ಗೆ ಬಿಜೆಪಿ ಫುಲ್ ಕ್ಲಾಸ್
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಒಬ್ಬಾತ ಪಾಕಿಸ್ತಾನ್ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.
ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:07 pm, Mon, 4 March 24